Population Control: ಕಳ್ಳ ಎಂದ ತಕ್ಷಣ ಹೆಗಲು ಮುಟ್ಟಿಕೊಳ್ಳುವುದೇಕೆ? ಜನಸಂಖ್ಯಾ ನಿಯಂತ್ರಣ ಕಾಯ್ದೆಯ ಬಗ್ಗೆ ಜಮೀರ್ ಅಹ್ಮದ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಆಕ್ಷೇಪ
ಜನಸಂಖ್ಯಾ ನಿಯಂತ್ರಣ ಕಾಯ್ದೆಯ ಮೂಲಕ ಮುಸ್ಲಿಂರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ವ್ಯಾಖ್ಯಾನಿಸಿದ್ದಾರೆ. ಕಳ್ಳ ಎಂದ ತಕ್ಷಣ ಹೆಗಲು ಮುಟ್ಟಿಕೊಳ್ಳುವುದೇಕೆ? ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಧಾರವಾಡ: ಮುಸ್ಲಿಮರ ಜನಸಂಖ್ಯೆ ಕಡಿಮೆಯಾದರೆ ಬಡತನ ಕಡಿಮೆಯಾಗಲಿದೆ. ಶಾಸಕ ಜಮೀರ್ ಅಹ್ಮದ್ ಈ ಕುರಿತು ಅಧ್ಯಯನ ಮಾಡಲಿ. ಜನಸಂಖ್ಯಾ ನಿಯಂತ್ರಣ ಕಾಯ್ದೆ (Population Control) ಉತ್ತರ ಪ್ರದೇಶದಲ್ಲೊಂದೇ ಅಲ್ಲದೇ ದೇಶದಾದ್ಯಂತ ಜಾರಿಯಾಗಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಲಹೆ ಮಾಡಿದ್ದಾರೆ. ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಸ್ವಾಗತಿಸಲಾಗುತ್ತಿದೆ ಎಂದು ಸಹ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜನಸಂಖ್ಯಾ ನಿಯಂತ್ರಣ ಕಾಯ್ದೆಯ ಮೂಲಕ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ವ್ಯಾಖ್ಯಾನಿಸಿದ್ದಾರೆ. ಶಾಸಕ ಜಮೀರ ಅಹ್ಮದ್ ಸಹ ಈ ಬಗ್ಗೆ ಅಸಂಬದ್ಧ ಮತ್ತು ಮೂರ್ಖತನದ ಹೇಳಿಕೆ ನೀಡಿದ್ದಾರೆ. ಕಳ್ಳ ಎಂದ ತಕ್ಷಣ ಹೆಗಲು ಮುಟ್ಟಿಕೊಳ್ಳುವುದೇಕೆ? ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಒಂದು ಬೇಕು, ಎರಡು ಸಾಕು ಯೋಜನೆ ಜಾರಿಯಾಗಬೇಕು: ಬಿಜೆಪಿ ಶಾಸಕ ರಘುಪತಿ ಭಟ್ ಸದ್ಯ ದೇಶದಾದ್ಯಂತ ಸುದ್ದಿಯಲ್ಲಿರುವ ಜನಸಂಖ್ಯಾ ನಿಯಂತ್ರಣ ನೀತಿ ನಮ್ಮ ರಾಜ್ಯಕ್ಕೂ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಬಿಜೆಪಿ ಶಾಸಕ ರಘುಪತಿ ಭಟ್. ಜನಸಂಖ್ಯೆ ನಿಯಂತ್ರಿಸಲು ಕಾನೂನು ರೂಪಿಸಲು ರಾಜ್ಯ ಸರ್ಕಾರ ಮುಂದೆ ಬರಬೇಕು. ಜನಸಂಖ್ಯೆ ಅಸಮತೋಲನವಾದರೆ ಆರ್ಥಿಕವಾಗಿ ಹೊಡೆತ ಬೀಳುತ್ತದೆ. ಅಧಿವೇಶನದಲ್ಲಿ ಈ ಕುರಿತು ನಾನು ಒತ್ತಾಯ ಮಾಡುತ್ತೇನೆ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದು ಬೇಕು ಎರಡು ಸಾಕು ಯೋಜನೆ ಜಾರಿಯಾಗಬೇಕು. ಭಾರತಕ್ಕೆ ಮತ್ತು ವಿಶ್ವಕ್ಕೆ ಬೇಕಾದ ಮಾನವ ಸಂಪತ್ತನ್ನು ಒದಗಿಸಬಹುದು ಅಥವಾ ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿ, ಎಷ್ಟು ಬೇಕಾದರೂ ಅಷ್ಟು ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟವಾಗಲಿದೆ. ಉತ್ತರ ಪ್ರದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿ ಉತ್ತಮ ಕಾನೂನನ್ನು ಜಾರಿಗೊಳಿಸಲು ಮುಂದಾಗುತ್ತಿದೆ. ನಮ್ಮ ರಾಜ್ಯದಲ್ಲೂ ಈ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಇಂತಹ ಕಾನೂನು ರೂಪಿಸಲು ರಾಜ್ಯ ಸರಕಾರ ಮುಂದೆ ಬರಬೇಕು. ಜನಸಂಖ್ಯೆ ವಿಪರೀತ ಏರಿಕೆಯಾದ್ರೆ ದೇಶಕ್ಕೆ ಸಮಸ್ಯೆ ಎದುರಾಗಲಿದೆ ಎಂದು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯ: ಸಿ ಟಿ ರವಿ ಅಭಿಪ್ರಾಯ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯವಾಗಿದೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಆ ಮೂಲಕ, ಜನಸಂಖ್ಯಾ ನಿಯಂತ್ರಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ಸಿ.ಟಿ. ರವಿ ಒಲವು ತೋರಿದ್ದಾರೆ.
ಜನಸಂಖ್ಯೆ ನಿಯಂತ್ರಣಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಈ ನೀತಿ ಜಾರಿ ಕುರಿತು ಅಭಿಪ್ರಾಯಗಳು ಕೇಳಿಬಂರುತ್ತಿದೆ. ಜನಸಂಖ್ಯೆ ನಿಯಂತ್ರಣ ನೀತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚೆ ಮಾಡಲಾಗುವುದು. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಜುಲೈ 12ರಂದು ತಿಳಿಸಿದ್ದಾರೆ.
ಇದನ್ನೂ ಓದಿ:
(Population Control Why should the thief immediately touch the shoulders questions Pramod Muthalik to MLA Zameer Ahmed)