ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ: ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿ, ಆ.17: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಅಥವಾ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ(Hubballi)ಯಲ್ಲಿ ಇಂದು(ಶನಿವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಬೀಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಪ್ರತಿಕ್ರಿಯಿಸಿದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ. ಕಳೆದ ಬಾರಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ 68ಕ್ಕೆ ಇಳಿದಿತ್ತು. ಜನ ಅವರನ್ನು ತಿರಸ್ಕಾರ ಮಾಡಿದ್ದರು. ಆದಾಗ್ಯೂ ಕಾಂಗ್ರೆಸ್ – ಜೆಡಿಎಸ್ ಸೇರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಯತ್ನಿಸಿದ್ದರು.
ಇದನ್ನೂ ಓದಿ:ಪಿಎಂ ಸೂರ್ಯ ಘರ್ ಯೋಜನೆಯಡಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನ; ಪ್ರಲ್ಹಾದ್ ಜೋಶಿ
ಬಳಿಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸಿದರು. ಹಾಗಾಗಿ ಆಗಿನ ಸಂದರ್ಭದಲ್ಲಿ ಬಿಜೆಪಿ ಸಹ ಸರ್ಕಾರ ರಚಿಸಲು ಪ್ರಯತ್ನಿಸಿತ್ತು. ಆದರೆ, ಈ ಬಾರಿ ಬಿಜೆಪಿ ಅಂಥ ಯಾವುದೇ ಪ್ರಯತ್ನ ನಡೆಸುವುದಿಲ್ಲ ಎಂದರು. ಇನ್ನು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರು ಶುದ್ಧರು ಎಂದಾದರೆ. ಬೇಕಿದ್ದರೆ ಅವರೇ ಸಿಎಂ ಆಗಿ ಮುಂದುವರಿಯಲಿ. ನಮ್ಮ ಅಭ್ಯಂತರ ಏನಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:40 pm, Sat, 17 August 24




