ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ (Hubballi KIMS) ನೂತನವಾಗಿ ಅಳವಡಿಸಲಾಗಿರುವ 2ಡಿ-4ಡಿ ಎಕೋ ಮಷೀನ್‌ನನ್ನು ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಉದ್ಘಾಟನೆ ಮಾಡಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ. ಇಂತಹ ಅತ್ಯುಪಯುಕ್ತ ವ್ಯವಸ್ಥೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi), ಆಸ್ಪತ್ರೆಯ ಆಧುನೀಕರಣಕ್ಕೆ ಹೊಸ ಭಾಷ್ಯ ಬರೆದಿದ್ದಾರೆ.
2ಡಿ-4ಡಿ ಎಕೋ ಮೆಷಿನ್ ಉದ್ಘಾಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ 2ಡಿ ಮತ್ತು 4ಡಿ ಎಕೋ ಮಷೀನ್‌ನನ್ನು ಇಂದು ಉದ್ಘಾಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ (under Pradhana Mantri Swasthya Suraksha Yojana) ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ.