Pralhad Joshi: ರಾಹುಲ್ ಗಾಂಧಿ ಭಸ್ಮಾಸುರ, ಕೈಯಿಟ್ಟರೆ ಕಲಾಸ್; ಪ್ರಹ್ಲಾದ್ ಜೋಶಿ ವ್ಯಂಗ್ಯ
ರಾಹುಲ್‌ಗಾಂಧಿ ಭಸ್ಮಾಸುರ ಇದ್ದಂತೆ. ಅವರು ಕೈಯಿಟ್ಟರೆ ಕಲಾಸ್. ರಾಹುಲ್ ಗಾಂಧಿ (Rahul Gandhi) ಎಲ್ಲೆಲ್ಲಿಗೆ ಭೇಟಿ ನೀಡಿದ್ದಾರೆಯೋ ಅಲ್ಲೆಲ್ಲ ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದರು.
ಹುಬ್ಬಳ್ಳಿ: ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹುಡುಕಬೇಕಾದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಪ್ರದೇಶ, ಉತ್ತರಾಖಂಡ್‌ನಲ್ಲಿ ಆ ಪಕ್ಷ ಠೇವಣಿ ಕಳೆದುಕೊಂಡಿದೆ. ಈಶಾನ್ಯ ರಾಜ್ಯದಲ್ಲಿ ಕಾಂಗ್ರೆಸ್ನ (Congress) ಒಬ್ಬ ಸಂಸದರೂ ಇಲ್ಲದಂಥ ದುಸ್ಥಿತಿ ಇದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮನೆಗೆ ಹೋಗುವುದು ಖಂಡಿತಾ, ಜನ ಆ ಪಕ್ಷಕ್ಕೆ ಮನೆಯ ದಾರಿ ತೋರಿಸುತ್ತಾರೆ. ಆ ಪಕ್ಷದ ನಾಯಕ ರಾಹುಲ್‌ಗಾಂಧಿ ಭಸ್ಮಾಸುರ ಇದ್ದಂತೆ. ಅವರು ಕೈಯಿಟ್ಟರೆ ಕಲಾಸ್. ರಾಹುಲ್ ಗಾಂಧಿ (Rahul Gandhi) ಎಲ್ಲೆಲ್ಲಿಗೆ ಭೇಟಿ ನೀಡಿದ್ದಾರೆಯೋ ಅಲ್ಲೆಲ್ಲ ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದರು. ನಗರದ ಬೆಂಗೇರಿಯ ಮಾರುಕಟ್ಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಮಮಂದಿರ ಕಟ್ಟುವವರು ನಿಮಗೆ ಬೇಕೋ? ರಾಮನ ಅಸ್ತಿತ್ವ ಪ್ರಶ್ನೆ ಮಾಡುವವರು ಬೇಕೋ? ನಿಮಗೆ ಕಾಶಿ ವಿಶ್ವನಾಥ ದೇವಸ್ಥಾನ ಅಭಿವೃದ್ಧಿ ಮಾಡುವವರು ಬೇಕೋ ಅಥವಾ ವಿಶ್ವನಾಥನ ಅಸ್ತಿತ್ವದ ಬಗ್ಗೆ ಪ್ರಶ್ನೆ ಮಾಡುವವರು ಬೇಕೋ ಎಂಬುದನ್ನು ನಿವೇ ನಿರ್ಧಾರ ಮಾಡಿ ಎಂದರು.
ಎಸ್ಡಿಪಿಐ, ಪಿಎಫ್ಐ ಜತೆ ಹೊಂದಾಣಿಕೆ ಮಾಡಿಕೊಂಡು ಬಿಜೆಪಿ ಸೋಲಿಸುವ ಹುನ್ನಾರ ನಡೆಸಿದ್ದರು. ಕಾಂಗ್ರೆಸ್ನವರು ಚೀನಾದಿಂದಲೂ ಲಂಚ ತೆಗೆದುಕೊಳ್ಳುತ್ತಾರೆ. ಕುಕ್ಕರ್ ಮೇಲೆ ಡಿಕೆಶಿಗೆ ಬಹಳಷ್ಟು ಪ್ರೀತಿ. ಕುಕ್ಕರ್ ಬಾಂಬ್ ಇಟ್ಟವರನ್ನು ಡಿಕೆಶಿ ಸಹೋದರ ಎಂದು ಹೇಳುತ್ತಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಅಯೋಗ್ಯವಾಗಿದ್ದರು. ಅಂತಹವರು ಈಗ ಗ್ಯಾರೆಂಟಿ ಕಾರ್ಡ್ ಕೊಡುತ್ತಾರೆ. ಇದು ಪಕ್ಕಾ ಸುಳ್ಳು ಎಂದು ಜೋಶಿ ಟೀಕಿಸಿದರು.
ಇದನ್ನೂ ಓದಿ: ರಾಜ್ಯದ ರೈತರಿಗೆ ಲೈಪ್ ಇನ್ಸೂರೆನ್ಸ್, ಮರಣ ಹೊಂದಿದರೆ 2 ಲಕ್ಷ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ
ಮೋದಿ ಕಾರ್ಯಕ್ರಮ ಯಶಸ್ಸಿಗಾಗಿ ಬಿಜೆಪಿ ನಾಯಕರ ಸಭೆ
ಮಾರ್ಚ್ 25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರು ಶುಕ್ರವಾರ ರಾತ್ರಿ ಸಭೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ