AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಬಡವರಿಗೆ ಬೆಳಕಾದ ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆ

ನಗರದ ಪ್ರತಿಷ್ಠಿತ ಎಂ.ಎಂ ಜೋಶಿ ನೇತ್ರವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ಉಚಿತ ನೇತ್ರತಪಾಸಣಾ ಹಾಗೂ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಕೈಗೊಳ್ಳಲಾಗಿದೆ.

ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಬಡವರಿಗೆ ಬೆಳಕಾದ ಪ್ರಲ್ಹಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆ
ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮೂಲಕ ಬಡವರಿಗೆ ಬೆಳಕಾದ ಪ್ರಲ್ಜಾದ್ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆ
TV9 Web
| Updated By: ಆಯೇಷಾ ಬಾನು|

Updated on:Nov 16, 2022 | 1:31 PM

Share

ಹುಬ್ಬಳ್ಳಿ:  ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಅವರ ಕ್ಷಮತಾ ಸೇವಾ ಸಂಸ್ಥೆ, ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇವೆಯನ್ನ ಉಚಿತವಾಗಿ ಒದಗಿಸುತ್ತಾ ಬಂದಿದೆ. ಈ ವರ್ಷದ ಉಚಿತ ನೇತ್ರತಪಾಸಣಾ ಹಾಗೂ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ನಗರದ ಪ್ರತಿಷ್ಠಿತ ಎಂ.ಎಂ ಜೋಶಿ ನೇತ್ರವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ಕೈಗೊಳ್ಳಲಾಯಿತು.

ಸಧೃಡ ಆರೋಗ್ಯವೇ, ಉತ್ತಮ ಸಮಾಜ ನಿರ್ಮಾಣದ ಅಡಿಪಾಯ ಎಂದು ಅರಿತಿರುವ ಪ್ರಲ್ಹಾದ್ ಜೋಶಿ ಅವರು, ಕಳೆದ 15 ವರ್ಷದಿಂದ ತಮ್ಮ ಕ್ಷಮತಾ ಸಂಸ್ಥೆ ಮೂಲಕ ಧಾರವಾಡ ಜಿಲ್ಲೆಯ ಹಲವು ಕಡೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನೆಡೆಸಲು ಪ್ರೇರಪಣೆ ನೀಡುತ್ತಾ ಬಂದಿದ್ದಾರೆ. ಅಗತ್ಯವಿರುವವರಿಗೆ ಉಚಿತ ಶಸ್ತ್ರ ಚಿಕಿತ್ಸೆಯನ್ನು ತಮ್ಮ ಸಂಸ್ಥೆ ಕ್ಷಮತಾ ವತಿಯಿಂದ ನೆರವೇರಿಸಿದ್ದಾರೆ.

ಇದನ್ನೂ ಓದಿ: Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ

ಈ ವರ್ಷದ ಉಚಿತ ನೇತ್ರತಪಾಸಣಾ ಹಾಗೂ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ನಗರದ ಪ್ರತಿಷ್ಠಿತ ಎಂ.ಎಂ ಜೋಶಿ ನೇತ್ರವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ಕೈಗೊಳ್ಳಲಾಯಿತು. ಶಿಬಿರವನ್ನು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಿ, ಜೋಶಿ ಅವರ ಕ್ಷಮತಾ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ಉಚಿತ ಕಣ್ಣು ತಪಾಸಣಾ ಶಿಬಿರದಲ್ಲಿ 350ಕ್ಕೂ ಹೆಚ್ಚು ಗ್ರಾಮಸ್ಥರು ಕಣ್ಣು ತಪಾಸಣೆ ಮಾಡಿಸಿಕೊಂಡರು. ಅಲ್ಲದೇ 50 ಜನ ಅವಶ್ಯವಿರುವವರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆಗಾಗಿ ಆಯ್ಕೆಮಾಡಲಾಯಿತು. ಶಿಬಿರದಲ್ಲಿ ಗ್ರಾಮಸ್ಥರಿಗೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದರ ಕುರಿತು ತಿಳಿಸಿ ಅವರು ಎದುರಿಸುತ್ತಿದ್ದ ಚಿಕ್ಕ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಕೂಡ ನೀಡಲಾಯಿತು.

ಜನರ ಹಿತಕ್ಕಾಗಿ ಏರ್ಪಡಿಸಿದ್ದ ಈ ಶಿಬಿರವನ್ನು ಅತ್ಯಂತ ಯಶಸ್ವಿಯಾಗಿ ನಡೆಯಲು ಸಹಕಾರ ನೀಡಿದ ಎಂ ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ ಶ್ರೀನಿವಾಸ ಜೋಶಿ ಅವರಿಗೆ ಹಾಗೂ ಶಿಬಿರವನ್ನು ನಿರ್ವಹಿಸಿದ ಸಿಬ್ಬಂದಿ ವರ್ಗಕ್ಕೆ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:29 pm, Wed, 16 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?