ದೇಶದ ಸ್ವಾತಂತ್ರ್ಯಕ್ಕೆ ಹೊಸ ದಿಕ್ಕು ತೋರಿದ ಗಾಂಧೀಜಿ, ಶಾಸ್ತ್ರೀಜಿ ಆದರ್ಶ ನಮ್ಮೆಲ್ಲರಿಗೂ ಪ್ರೇರಣೆ: ಪ್ರಲ್ಹಾದ್ ಜೋಶಿ

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಮನ ಸಲ್ಲಿಸಿದರು. ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಸರಳತೆ, ಸತ್ಯ ಹಾಗೂ ಪ್ರಾಮಾಣಿಕತೆಯ ಆದರ್ಶಗಳು ದೇಶಕ್ಕೆ ಸದಾ ಸ್ಫೂರ್ತಿದಾಯಕ ಎಂದ ಸಚಿವರು, ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ವಿಲೇವಾರಿ ಮಾಡುವ ಮೂಲಕ ಪ್ರತಿಯೊಬ್ಬರೂ ಸ್ವಚ್ಛ ಹಾಗೂ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.

ದೇಶದ ಸ್ವಾತಂತ್ರ್ಯಕ್ಕೆ ಹೊಸ ದಿಕ್ಕು ತೋರಿದ ಗಾಂಧೀಜಿ, ಶಾಸ್ತ್ರೀಜಿ ಆದರ್ಶ ನಮ್ಮೆಲ್ಲರಿಗೂ ಪ್ರೇರಣೆ: ಪ್ರಲ್ಹಾದ್ ಜೋಶಿ
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಕೇಂದ್ರ ಸಚಿವ ಜೋಶಿ ನಮನ.

Updated on: Oct 02, 2026 | 2:05 PM

ಮುಖ್ಯಾಂಶಗಳು

  • ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಕೇಂದ್ರ ಸಚಿವ ಜೋಶಿ ನಮನ.
  • ಮಹಾನಾಯಕರ ಆದರ್ಶಗಳನ್ನು ಅಳವಡಿಸಿಕೊಂಡು ಸುಂದರ ಭಾರತ ನಿರ್ಮಾಣಕ್ಕೆ ಸಚಿವರ ಕರೆ.
  • ಹುಬ್ಬಳ್ಳಿ-ಧಾರವಾಡದ ವಾರ್ಡ್‌ಗಳಲ್ಲಿ ಸ್ವಚ್ಛ ಭಾರತ ಅಭಿಯಾನ ಜನಾಂದೋಲನವಾಗಿ ರೂಪಿತ.

ಹುಬ್ಬಳ್ಳಿ, ಅಕ್ಟೋಬರ್ 02: ಜಿಲ್ಲೆಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಜಯಂತಿ ಹಾಗೂ ಶಾಸ್ತ್ರೀಜಿ ಜಯಂತಿ ಅಂಗವಾಗಿ ಹುಬ್ಬಳ್ಳಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸ್ವಚ್ಛ, ಸುಂದರ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸತ್ಯ, ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಹಾಗೂ ‘ಜೈ ಜವಾನ್, ಜೈ ಕಿಸಾನ್’ ಎಂದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳು ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕ,” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಪಾದಿಸಿದರು.

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಎಂದ ಜೋಶಿ

ಜಿಲ್ಲೆಯಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ‎ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರು ಸತ್ಯ, ನ್ಯಾಯ, ನೀತಿ ಜತೆಗೆ ಸರಳತೆ, ಶುಭ್ರತೆಯನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶಪ್ರಾಯರಾಗಿ ಉಳಿದರು. ಅತ್ಯಂತ ಸರಳತೆಯ ವ್ಯಕ್ತಿತ್ವ, ಜೀವನಶೈಲಿ ಅವರದಾಗಿತ್ತು ಎಂದು ಸ್ಮರಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿಯವರ ‘ಜೈ ಜವಾನ್ -ಜೈ ಕಿಸಾನ್’ ಘೋಷಣೆ ಮೂಲಕ ದೇಶದ ಸೈನಿಕರು ಹಾಗೂ ರೈತರ ಮಹತ್ವವನ್ನು ಸಾರಿದ ಮಹನೀಯರಾಗಿರುವ ಅವರ ಸರಳ ಜೀವನ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಆದರ್ಶಗಳು ಸದಾ ಸ್ಫೂರ್ತಿದಾಯಕ ಎಂದು ಹೇಳಿದರು. ನಾವೆಲ್ಲರೂ ಜೀವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು, ಸ್ವಚ್ಛ, ಸದೃಢ ಹಾಗೂ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಎಂದು ಕರೆ ನೀಡಿದರು.

ಗಾಂಧೀಜಿ ಅವರ ‘ಸ್ವಚ್ಛ ಭಾರತ-ಆರೋಗ್ಯವಂತ ಭಾರತ’ ಕನಸು ಸಾಕಾರ

‎‘ಸ್ವಚ್ಛ ಭಾರತ ಅಭಿಯಾನ’ದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.36, 37 ಮತ್ತು 38ರಲ್ಲಿ ‘ಸ್ವಚ್ಛ ವಾರ್ಡ್-ಸುಂದರ ವಾರ್ಡ್’ ಜಾಗೃತಿ ಅಭಿಯಾನ ನಡೆಸಲಾಯಿತು. ಮಹಾತ್ಮಾ ಗಾಂಧೀಜಿಯವರ ’ಸ್ವಚ್ಛ ಭಾರತ-ಆರೋಗ್ಯವಂತ ಭಾರತ’ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಸ್ವಚ್ಛ ಭಾರತ ಅಭಿಯಾನ ದೇಶಾದ್ಯಂತ ಒಂದು ಜನಾಂದೋಲನವಾಗಿ ರೂಪುಗೊಂಡಿದೆ. ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ

‎ನಮ್ಮ ಮನೆ ಮಾತ್ರವಲ್ಲ, ನೆರೆಹೊರೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ಜವಾಬ್ದಾರಿಯಾಗಿದೆ ಎಂದ ಸಚಿವರು, ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಮನೆಯಲ್ಲಿಯೇ ಹಸಿ ಕಸ ಮತ್ತು ಒಣ ಕಸವಾಗಿ ಪ್ರತ್ಯೇಕಿಸಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ, ಸುಂದರ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಕರೆ ನೀಡಿದರು.

‎ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಪ್ರೊ.ಎಂ ನಾಗರಾಜ, ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ್ ಕೌಜಗೇರಿ ಸೇರಿದಂತೆ ಪ್ರಮುಖರು, ಗಣ್ಯರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us