
ಧಾರವಾಡ, ಅಕ್ಟೋಬರ್ 24: ಧಾರವಾಡ ಐಐಟಿ ಕೇಂದ್ರದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ಶೈಕ್ಷಣಿಕ ಪ್ರಗತಿ, ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನಾ ಸಭೆ ನಡೆಸಿದರು. ಐಐಟಿಯ ಶೈಕ್ಷಣಿಕ ಪ್ರಗತಿ, ಸಂಶೋಧನಾ ಕಾರ್ಯಗಳು ಹಾಗೂ ಅಭಿವೃದ್ಧಿ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿರುವ ಸಚಿವ ಪ್ರಲ್ಹಾದ್ ಜೋಶಿ, ‘ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸನ್ನು ನನಸಾಗಿಸುವಲ್ಲಿ ಐಐಟಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ’ ಎಂದು ಅವರು ಹೇಳಿದ್ದಾರೆ.
‘ಉತ್ತರ ಕರ್ನಾಟಕದ ಶೈಕ್ಷಣಿಕ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡುತ್ತಿರುವ ಧಾರವಾಡ ಐಐಟಿ ಸಂಸ್ಥೆ ನಾವೀನ್ಯತೆ, ಉದ್ಯಮಶೀಲತೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುತ್ತಿದೆ’ ಎಂದು ಅವರು ಪ್ರತಿಪಾದಿಸಿದರು.
ಇದನ್ನೂ ಓದಿ: ‘ನಿಮ್ಮ ತಂದೆ ಸಚಿವರಾಗಿದ್ದಾಗಲೂ ಆರ್ಎಸ್ಎಸ್ ಪಥಸಂಚಲನ ನಡೆದಿದೆ, ನಿರುದ್ಯೋಗಿ ತರ ವರ್ತಿಸಬೇಡಿ’: ಖರ್ಗೆಗೆ ಜೋಶಿ ಟಾಂಗ್
‘ವಿಶ್ವದರ್ಜೆಯ ಮೂಲಸೌಕರ್ಯ, ಹಸಿರು ಕ್ಯಾಂಪಸ್ ಹಾಗೂ ಅತ್ಯಾಧುನಿಕ ಪ್ರಯೋಗಾಲಯ ಸೌಲಭ್ಯ ಹೊಂದಿರುವ ಧಾರವಾಡ ಐಐಟಿ ದೇಶದಲ್ಲಿ ಭವಿಷ್ಯದ ತಂತ್ರಜ್ಞಾನ ನಾಯಕರನ್ನು ರೂಪಿಸುತ್ತಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ತಾಂತ್ರಿಕ ಶಿಕ್ಷಣ ಕ್ಷೇತ್ರವು ಅಭೂತಪೂರ್ವ ಪ್ರಗತಿ ಕಾಣುತ್ತಿದ್ದು, ಧಾರವಾಡ ಐಐಟಿಯಿಂದ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೊಸ ಆಯಾಮ ದೊರೆಯುತ್ತಿದೆ’ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.