ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ – ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ

Lingayat: ಸಂಕೇಶ್ವರ್ ಜೊತೆ ಕೈಗಾರಿಕೋದ್ಯಮಿಗಳ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ. ವಿಜಯ್ ಸಂಕೇಶ್ವರ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿಯವರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಲ್ಲಿ ಎಲ್ಲರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು‌.

ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ - ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ

Updated on: May 05, 2023 | 8:52 PM

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಹೋದರೂ, ಬಿಜೆಪಿ ಅಭ್ಯರ್ಥಿಗಳ ಬೆನ್ನಿಗೆ ನಿಂತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಅಬ್ಬರದ ಪ್ರಚಾರ ನಡೆಸಿ ಬಿಜೆಪಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಎದುರಿಗೆ ತಮ್ಮ ಬಹುಕಾಲದ ಸ್ನೇಹಿತ ಜಗದೀಶ್ ಶೆಟ್ಟರ್ ಕಣದಲ್ಲಿ ನಿಂತಿದ್ದರೂ, ಪಕ್ಷದ ಪರ ಗಟ್ಟಿಯಾಗಿ ನಿಂತಿರುವ ಪ್ರಲ್ಹಾದ್ ಜೋಶಿ, ಹುಬ್ಬಳ್ಳಿ ಸೆಂಟ್ರಲ್ (Hubballi Central)ನಲ್ಲಿ ಬಿಜೆಪಿ ಅಭ್ಯರ್ಥಿ (BJP) ಗೆಲ್ಲಿಸಲು ರಣತಂತ್ರ ರೂಪಿಸಿದ್ದಾರೆ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಬತ್ತಳಿಕೆಯಿಂದ ಲಿಂಗಾಯತ ಮತಗಳು ಬೀಳದಂತೆ ನೋಡಿಕೊಳ್ಳಲು ಎಚ್ಚರಿಕೆ ವಹಿಸಿರುವ ಜೋಶಿ, ವಿಜಯ್ ಸಂಕೇಶ್ವರ್ ಅವರ (Vijay Sankeshwar) ಸಹಕಾರ ಪಡೆದಿದ್ದಾರೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಲಿಂಗಾಯತ ಸಮುದಾಯದಲ್ಲಿ (Lingayat) ಪ್ರಮುಖ ಮುಖಂಡರಲ್ಲೊಬ್ಬರಾಗಿ ಪ್ರಭಾವ ಹೊಂದಿರುವ, ಉದ್ಯಮಿಯೂ ಆಗಿರುವ ವಿಜಯ್ ಸಂಕೇಶ್ವರ್ ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

ಸಂಕೇಶ್ವರ್ ಜೊತೆ ಹುಬ್ಬಳ್ಳಿಯಲ್ಲಿ ಕೈಗಾರಿಕೋದ್ಯಮಿಗಳು ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ವಿಜಯ್ ಸಂಕೇಶ್ವರ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಮೋದಿಯವರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಲ್ಲಿ ಎಲ್ಲರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು‌. ಹುಬ್ಬಳ್ಳಿ ಮಾತ್ರವಲ್ಲ ರಾಜ್ಯದ ಜನರಲ್ಲಿ ನಾನು ಕೇಳಿಕೊಳ್ಳುತ್ತೇನೆ. ದೇಶ ಕಟ್ಟುವ ಕಾರ್ಯದಲ್ಲಿ ಯಾರೂ ಮನೆಯಲ್ಲಿ ಕುಳಿತುಕೊಳ್ಳಬಾರದು. ಬಂದು ಮತ ಹಾಕಿ. ಬಿಜೆಪಿ ಬೆಂಬಲಿಸಿ, ಮೋದಿ ಅವರ ಕೈ ಇನ್ನಷ್ಟು ಬಲಪಡಿಸಿ ಎಂದು ಸಂಕೇಶ್ವರ್ ಹೇಳಿದರು.‌

Also Read:

ಸಿಎಂ ಬಸವರಾಜ ಬೊಮ್ಮಾಯಿ ಪರ ಅಬ್ಬರದ ಪ್ರಚಾರ ನಡೆಸಿ, ಮತ ಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ತಮ್ಮ ಸಮುದಾಯದ ಮತಗಳು ನನ್ನ ಜೊತೆ ಬರಲಿದ್ದು, ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರು ನನ್ನ ಪರ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸದಲ್ಲಿ ಶೆಟ್ಟರ್ ಇದ್ದಾರೆ. ಆದರೆ, ಸಮುದಾಯದ ಮುಖಂಡರಲ್ಲಿ ಶೆಟ್ಟರ್ ಅವರಷ್ಟೇ ಪ್ರಭಾವ ಹೊಂದಿರುವ ಸಂಕೇಶ್ವರ್ ಬಿಜೆಪಿ ಜೊತೆ ನಿಂತಿದ್ದಾರೆ. ಲಿಂಗಾಯತ ಪ್ರಭಾವಿ ಮಠಗಳ ಸ್ವಾಮೀಜಿಗಳ ಜೊತೆಯೂ ಉತ್ತಮ ಸಂಪರ್ಕ ಹೊಂದಿರುವ ಸಂಕೇಶ್ವರ್, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿಗೆ ಡ್ಯಾಮೇಜ್ ಕಂಟ್ರೋಲರ್ ಆಗಿ ಕಾಣಿಸ್ತಿದ್ದಾರೆ.

ಇನ್ನು ಇಂದು ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಪರ ಕಾಲ್ನಡಿಗೆ ಮೂಲಕ ಚುನಾವಣಾ ಪ್ರಚಾರ ನಡೆಸಿದ ಪ್ರಲ್ಹಾದ್ ಜೋಶಿ, ಬಿಜೆಪಿಗೆ ಮತ ಚಲಾಯಿಸುವಂತೆ ಜ‌ನರಲ್ಲಿ ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:47 pm, Fri, 5 May 23