Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ರಾಹುಲ್ ಗಾಂಧಿ ವಿರುದ್ಧ ಜೋಶಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಬಿಜೆಪಿಯಿಂದ ನಡೆದ ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ರಾಹುಲ್ ಗಾಂಧಿಗೆ ತಾನೇನು ಮಾತಾಡುತ್ತೇನೆ ಅಂತಾ ಅವರಿಗೆ ಗೊತ್ತಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಇಂತಹ ದಯಾನಿಯ ಸ್ಥಿತಿಗೆ ತಲುಪಿದೆ ಎಂದು ಕಿಡಿಕಾರಿದ್ದಾರೆ. 

ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ರಾಹುಲ್ ಗಾಂಧಿ ವಿರುದ್ಧ ಜೋಶಿ ವಾಗ್ದಾಳಿ
ಪ್ರಲ್ಹಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 13, 2024 | 3:54 PM

ಹುಬ್ಬಳ್ಳಿ, ಏಪ್ರಿಲ್ 13: ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ರಾಹುಲ್ ಗಾಂಧಿಗೆ ತಾನೇನು ಮಾತಾಡುತ್ತೇನೆ ಅಂತಾ ಅವರಿಗೆ ಗೊತ್ತಿಲ್ಲ ಎಂದು ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ (Pralhad Joshi) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಬಿಜೆಪಿಯಿಂದ ನಡೆದ ಎಸ್‌ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರ ರಚಿಸಲು ಬೇಕಾಗುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಇಂತಹ ದಯಾನಿಯ ಸ್ಥಿತಿಗೆ ತಲುಪಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಜನರ ಜೀವ, ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ

ಕಾಂಗ್ರೆಸ್ ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಎನ್​ಐಎ ಬಂಧಿಸಿದೆ. ಗುಪ್ತಚರ ಇಲಾಖೆ ಶ್ರಮಪಟ್ಟು ಮಾಹಿತಿ ಸಂಗ್ರಹಿಸಿ NIAಗೆ ನೀಡಿದೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವಾದಾಗ ದಾರಿತಪ್ಪಿಸುವ ಕೆಲಸ ಮಾಡಲಾಗಿದೆ. ಸಿಲಿಂಡರ್ ಸ್ಫೋಟ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಮೂಡ್​​ನಿಂದ ಇನ್ನೂ ಹೊರ ಬಂದಿಲ್ಲ: ಜೋಶಿ

ಡಿಸಿಎಂ, ಗೃಹಸಚಿವರು ತನಿಖೆ ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಸರ್ಕಾರದ ವರ್ತನೆಯಿಂದ ಇಂತಹ ಘಟನೆಗಳಿಗೆ ಕುಮ್ಮಕ್ಕು ಸಿಗುತ್ತಿದೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲೂ NIA ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ನಕಲಿ ದಾಖಲೆ ಸೃಷ್ಟಿಸಿ ವಿದೇಶಕ್ಕೆ ಹಾರಲು ಮುಂದಾಗಿದ್ದವರ ಬಂಧನ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅವಿತಿದ್ದ ಆರೋಪಿಗಳನ್ನು NIA ಎಳೆದುತಂದಿದೆ. ಆದರೆ ಕಾಂಗ್ರೆಸ್ ಜನರ ಜೀವ, ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ. ಈಗಲಾದರೂ ಸಿಎಂ ಗುಪ್ತಚರ ಇಲಾಖೆ ಬಲಪಡಿಸಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಕಾಶ್ ರಾಜ್ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ, ಅವರೊಬ್ಬ ವಿಘ್ನಸಂತೋಷಿ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತೆ ಮೋದಿ ಪ್ರಧಾನಿ ಆಗುತ್ತಾರೆ. ಬಡತನ ನಿರ್ಮೂಲನೆ ಮಾಡುವುದೇ ಮೋದಿಯವರು ಗುರಿ. ಬಡವರು, ಕಡುಬಡವರನ್ನು ಮಧ್ಯಮ ವರ್ಗಕ್ಕೆ ತರಬೇಕು. ದೇಶವನ್ನು ಜಗತ್ತಿನ ನಂಬರ್ ಒನ್ ಆರ್ಥಿಕ ಶಕ್ತಿಯಾಗಿ ಮಾಡುವುದೇ ಮೋದಿ ಉದ್ದೇಶ ಎಂದು ಹೇಳಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ಸಿಗೆ ಹೋಗುವ ಸಾಧ್ಯತೆಯಿಲ್ಲ

ಮೋದಿ ಕಾರ್ಯಕ್ರಮಕ್ಕೆ ಪ್ರಸಾದ್ ಗೈರಾಗುವ ವಿಚಾರದ ಬಗ್ಗೆ ಗೊತ್ತಿಲ್ಲ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಶ್ರೀನಿವಾಸ ಪ್ರಸಾದ್. ಅವರು ನಮ್ಮ ಪಕ್ಷದ ಅತ್ಯಂತ ಹಿರಿಯ ನಾಯಕರು. ಯಾವುದೇ ಕಾರಣಕ್ಕೂ ಪ್ರಸಾದ್ ಕಾಂಗ್ರೆಸ್​ಗೆ ಹೋಗುವ ಸಾಧ್ಯತೆಯಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

ನಿಮ್ಮ‌ ಸಮುದಾಯದ ಸಹಾಯಕ್ಕೆ‌ ನಾನು‌ ಸದಾ ಚಿರ ಋಣಿ

ರಾಮುಲು ಅವರೇ ನೀವು ನನ್ನನ್ನ ಭಾವುಕನನ್ನಾಗಿ ಮಾಡಿದ್ದೀರಿ. ನನಗೆ ಸಮಯ ಬಂದಾಗ ನೀವು ಸಹಾಯ ಮಾಡಿದ್ದೀರಿ, ನಿಮಗೆ ಸಮಯ ಬಂದಾಗ ನಾನು ಸಹಾಯ ಮಾಡಿದ್ದೇನೆ. ಆದರೆ ನಿಮ್ಮ‌ ಸಮುದಾಯದಿಂದ ನನಗೆ ಸಾಕಷ್ಟು ಸಹಾಯವಾಗಿದೆ. ನಿಮ್ಮ‌ ಸಮಾಜದಿಂದ‌ ನನಗೆ ಬಹುದೊಡ್ಡ ಆಶಿರ್ವಾದ ಸಿಕ್ಕಿದೆ. ನಿಮ್ಮ‌ ಸಮುದಾಯದ ಸಹಾಯಕ್ಕೆ‌ ನಾನು‌ ಸದಾ ಚಿರ ಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.