ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಮನವಿ: ಅವಕಾಶ ಕೊಟ್ರೆ ಸಂಘರ್ಷಕ್ಕೆ ದಾರಿಯಾದೀತು ಎಂದು ಎಚ್ಚರಿಸಿದ ಮುತಾಲಿಕ್

ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೋರಿದ್ದು ಖಂಡನೀಯ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಟಿಪ್ಪು ಜಯಂತಿಗೆ ಅವಕಾಶ ಕೊಟ್ರೆ ಸಂಘರ್ಷಕ್ಕೆ ದಾರಿ ಆಗುತ್ತೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಮನವಿ: ಅವಕಾಶ ಕೊಟ್ರೆ ಸಂಘರ್ಷಕ್ಕೆ ದಾರಿಯಾದೀತು ಎಂದು ಎಚ್ಚರಿಸಿದ ಮುತಾಲಿಕ್
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್
Follow us
TV9 Web
| Updated By: ಆಯೇಷಾ ಬಾನು

Updated on:Nov 06, 2022 | 1:10 PM

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದ(Hubli Idgah Maidan) ವಿವಾದ ಈಗ ಮತ್ತೆ ಸದ್ದು ಮಾಡ್ತಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ(Tipu Jayanti) ಆಚರಣೆಗೆ AIMIM ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿತ್ತು. ಇದೀಗ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ಕೊಡಿ ಎಂದು ಹುಬ್ಬಳ್ಳಿ ಪಾಲಿಕೆ ಆಯುಕ್ತರಿಗೆ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್(Pramod Muthalik) ಆಕ್ರೋಶ ಹೊರ ಹಾಕಿದ್ದಾರೆ.

ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ 272ನೇ ಜಯಂತಿಗೆ ಅವಕಾಶ ಕೊಡಿ ಎಂದು AIMIM ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಗಣೇಶೋತ್ಸವ ಆಚರಣೆಗೆ ಈದ್ಗಾ ಮೈದಾನದಲ್ಲಿ ಅನುಮತಿ ನೀಡಲಾಗಿತ್ತು. ಇದೀಗ ಟಿಪ್ಪು ಜಯಂತಿಗೂ ಅವಕಾಶ ಕೊಡಿ ಎಂದಿದ್ದಾರೆ. ಹಾಗೂ ಅಭಿಮಾನಿಗಳು ಪಾಲಿಕೆ ಆವರಣದಲ್ಲಿ ಓವೈಸಿ ಪರ ಜೈಘೋಷ ಕೂಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಪರಂಪರೆ ಅಳಿಸಲು ಸಾಧ್ಯವಿಲ್ಲ: ಟಿಪ್ಪು ಎಕ್ಸ್​ಪ್ರೆಸ್ ಹೆಸರು ಬದಲಾವಣೆಗೆ ಅಸಾದುದ್ದೀನ್​ ಒವೈಸಿ ಆಕ್ಷೇಪ

ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೋರಿದ್ದು ಖಂಡನೀಯ

ಇನ್ನು ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೋರಿದ್ದು ಖಂಡನೀಯ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೇ ಬೇರೆ ಯಾರನ್ನೂ ಪೂಜಿಸುವುದಿಲ್ಲ. ಮುಸ್ಲಿಮರಲ್ಲೇ ಜಯಂತಿಯನ್ನು ಒಪ್ಪುತ್ತಿಲ್ಲ. ಕಾಂಗ್ರೆಸ್​​ ಕುಮ್ಮಕ್ಕಿನಿಂದ ಟಿಪ್ಪು ಜಯಂತಿ ಮಾಡುತ್ತಿದ್ದಾರೆ. ಮತಾಂಧನ ಜಯಂತಿ ಆಚರಣೆ ಮಾಡಲು ನಾವು ಬಿಡುವುದಿಲ್ಲ. ಪಾಲಿಕೆ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಕೊಡಬಾರದು. ಟಿಪ್ಪು ಜಯಂತಿಗೆ ಅವಕಾಶ ಕೊಟ್ರೆ ಸಂಘರ್ಷಕ್ಕೆ ದಾರಿ ಆಗುತ್ತೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದರು.

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ. ಆತ ಮೈಸೂರು ಹುಲಿನೂ ಅಲ್ಲ. ಆತನಿಗೆ ಈ ಕರ್ನಾಟಕದಲ್ಲಿ ಗೌರವ ಸಲ್ಲಿಸಬಾರದು. ಆತ ಮಂದಿರಗಳನ್ನು ಒಡೆದಿದ್ದಾನೆ. ಆತ ಕನ್ನಡ ವಿರೋಧಿ, ಅಂಥವನ ಜಯಂತಿ ಬೇಡ. ಗಣೇಶೋತ್ಸವ ಅನುಮತಿ ಕೊಟ್ಟಿದ್ದ್ಯಾಕೆ ಅಂತಾ ಕೇಳ್ತಾರೆ. ಗಣೇಶ ಉತ್ಸವ ಧಾರ್ಮಿಕ ಆಚರಣೆ. ನಮಾಜ್ ಸಹ ಧಾರ್ಮಿಕ ಆಚರಣೆ. ಹೀಗಾಗಿ ಧಾರ್ಮಿಕ ಆಚರಣೆಗೆ ಅವಕಾಶ ಕೊಡಲಾಗಿತ್ತು. ಈಗ ಟಿಪ್ಪು ಜಯಂತಿ ಕೇಳಿದ್ದಾರೆ. ಅನುಮತಿ ಕೊಟ್ಟರೆ ನಾವು ರಾಯಣ್ಣ, ಅಂಬೇಡ್ಕರ, ಶಿವಾಜಿ ಜಯಂತಿಗೂ ಮೈದಾನ ಕೇಳಬೇಕಾಗುತ್ತದೆ. ಆ ರೀತಿಯ ಸಂಘರ್ಷಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು ಎಂದರು.

Published On - 1:09 pm, Sun, 6 November 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?