AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿಯಿಂದ ಸೆ. 26ಕ್ಕೆ ಧಾರವಾಡ ಐಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ

ಧಾರವಾಡ ಹೊರವಲಯದ ತಡಸಿನಕೊಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಐಐಟಿ ಕ್ಯಾಂಪಸ್​ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸೆ. 26ರಂದು ಉದ್ಘಾಟಿಸಲಿದ್ದಾರೆ.

ರಾಷ್ಟ್ರಪತಿಯಿಂದ ಸೆ. 26ಕ್ಕೆ ಧಾರವಾಡ ಐಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ
ರಾಷ್ಟ್ರಪತಿ ದ್ರೌಪದಿ‌ ಮುರ್ಮು
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 24, 2022 | 5:45 PM

ಧಾರವಾಡ: ಧಾರವಾಡ ಹೊರವಲಯದ ತಡಸಿನಕೊಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಐಐಟಿ (IIIT) ಕ್ಯಾಂಪಸ್​ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi murmu) ಸೆ. 26ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಸಿದ್ದತೆಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್ (Arvind Bellad) ಈಗಾಗಲೇ ಎಸ್​​ಪಿಜಿ ತಂಡ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದೆ. ರಾಷ್ಟ್ರಪತಿಗಳ ಕಾರ್ಯಕ್ರಮಕ್ಕೆ 700 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಜಾಗ ಕೊಟ್ಟ ರೈತರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸೆ. 26ರಂದು ಮಧ್ಯಾಹ್ನ 3ರಿಂದ 4ರವರೆಗೆ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರಪತಿಗಳು ಮಧ್ಯಾಹ್ನ ಐಐಐಟಿಗೆ ಆಗಮಿಸಿ ಅಲ್ಲಿಯೇ ಊಟ ಮಾಡುತ್ತಾರೆ. ಬಳಿಕ ಐಐಐಟಿಯನ್ನು ಉದ್ಘಾಟಿಸುತ್ತಾರೆ. ವೇದಿಕೆಯಲ್ಲಿ ರಾಷ್ಟ್ರಪತಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ಸಚಿವರು ಇರಲಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳ ಕಚೇರಿಯಿಂದ ನಿಗದಿತ ಮೆನು ಬಂದಿದೆ. ಆದರೂ ಉತ್ತರ ಕರ್ನಾಟಕದ ಒಂದಿಷ್ಟು ತಿನಿಸು ಮಾಡಿಸಲಾಗುವುದು. ರಾಷ್ಟ್ರಪತಿಗಳು ಇಷ್ಟಪಟ್ಟರೆ ಕೊಡುತ್ತೇವೆ ಎಂದು ತಿಳಿಸಿದರು.

ರಾಷ್ಟ್ರಪತಿಗಳ ಕಾರ್ಯಕ್ರಮದ ದಿನ ನಾನು ಗೌನ್ ಹಾಕಲ್ಲ

ರಾಷ್ಟ್ರಪತಿಗಳ ಕಾರ್ಯಕ್ರಮದ ದಿನ ನಾನು ಮಹಾಪೌರರ ಗೌನ್ ಹಾಕಲ್ಲ ಎಂದು ಹುಬ್ಬಳ್ಳಿ-ಧಾರವಾಡ ಮಹಾಪೌರ ಈರೇಶ್ ಅಂಚಟಗೇರಿ ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಅನೇಕ ಬದಲಾವಣೆಯಾಗಿವೆ. ಸ್ವಾತಂತ್ರ್ಯ ಹೋರಾಟ ವೇಳೆ ಮೇಯರ್ ಅಂತಾ ಕರೆಯುತ್ತಿದ್ದರು. ಆದರೆ ವಿ.ಡಿ.ಸಾವರ್ಕರ್ ಹೊಸ ಪದವನ್ನು ಬಳಕೆಗೆ ತಂದರು. ಮೇಯರ್ ಬದಲಾಗಿ ಮಹಾಪೌರ ಅನ್ನೋ ಶಬ್ದ ಕೊಟ್ಟಿದ್ದಾರೆ ಎಂದು ತಿಳಿಸಿದರು.

ದೇಶದ ಅನೇಕ ಮಹಾನಗರ ಪಾಲಿಕೆಗಳಲ್ಲಿ ಗೌನ್ ಹಾಕಲ್ಲ. ಗೌನ್ ಧರಿಸುವುದು ಬ್ರಿಟಿಷ್ ಸಂಸ್ಕೃತಿ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಗೌನ್ ಹಾಕಬೇಕು ಅಂತಾ ಹೇಳಿದರೆ ಮಾತ್ರ ಹಾಕುತ್ತೇನೆ. ಇಲ್ಲದಿದ್ದರೆ ನಾನು ಜಾಕೆಟ್ ಧರಿಸಿಯೇ ಭಾಗಿಯಾಗುತ್ತೇನೆ ಎಂದರು.

ಮಾಜಿ ಸಿಎಮ್ ಜಗದೀಶ ಶೆಟ್ಟರ್​ಗೆ ಕೋವಿಡ್ ಟೆಸ್ಟ್

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಮ್ ಖಾನಾ ಮೈದಾನದಲ್ಲಿ ರಾಷ್ಟ್ರಪತಿ ಕಾರ್ಯಕ್ರಮದ ತಯಾರಿ ವೀಕ್ಷಣೆಗೆ ಆಗಮಿಸಿದ ವೇಳೆ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿಸಿದ್ದಾರೆ. ಮತ್ತು ರಾಷ್ಟ್ರಪತಿ ಕಾರ್ಯಕ್ರಮ ವೇದಿಕೆಗೆ ಭಾಗವಹಿಸಲು ಕೊವಿಡ್ ಟೆಸ್ಟ್ ಕಡ್ಡಾಯ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:44 pm, Sat, 24 September 22

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ