ಹುಬ್ಬಳ್ಳಿಯಲ್ಲಿ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ನಾಗರಿಕ ಸನ್ಮಾನ: ಸಿದ್ಧತೆ ಚುರುಕು, ಶೆಟ್ಟರ್​ ಹೆಸರು ಕೈಬಿಟ್ಟಿದ್ದಕ್ಕೆ ಬಿಜೆಪಿಯಲ್ಲಿ ಅಪಸ್ವರ

ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ನಾಗರಿಕ ಸನ್ಮಾನ: ಸಿದ್ಧತೆ ಚುರುಕು, ಶೆಟ್ಟರ್​ ಹೆಸರು ಕೈಬಿಟ್ಟಿದ್ದಕ್ಕೆ ಬಿಜೆಪಿಯಲ್ಲಿ ಅಪಸ್ವರ
ರಾಷ್ಟ್ರಪತಿ ದ್ರೌಪದಿ ಮುರ್ಮು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 25, 2022 | 9:19 AM

ಹುಬ್ಬಳ್ಳಿ: ನಗರದಲ್ಲಿ ಸೋಮವಾರ (ಸೆ 26) ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರಿಗೆ ಪೌರಸನ್ಮಾನ ಮಾಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆ ಕಾರ್ಯಕ್ರಮದಲ್ಲಿ ನಗರದ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ. ವೇದಿಕೆ ಮೇಲಿನ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್​ ಅವರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿರಬಹುದು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದ ವಿವರಗಳು ಇದೀಗ ಬಹಿರಂಗಗೊಂಡಿದ್ದು ವೇದಿಕೆಯಲ್ಲಿ ಒಟ್ಟು 9 ಮಂದಿಗೆ ಸ್ಥಾನವಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಅಶ್ವತ್ಥ್ ನಾರಾಯಣ, ಶಂಕರ್ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಹಾಲಪ್ಪ ಆಚಾರ್ ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಮಾತ್ರವೇ ವೇದಿಕೆ ಹತ್ತಲು ಅವಕಾಶ ನೀಡಲಾಗಿದೆ. ವೇದಿಕೆಯ ಮೇಲೆ ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ಸಿಗಬೇಕಿತ್ತು ಎನ್ನುವುದು ಪಕ್ಷದ ಕಾರ್ಯಕರ್ತರ ಅಗ್ರಹವಾಗಿದೆ. ಆದರೆ ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಯೋಚಿಸದೆ ತಮ್ಮಪಾಡಿಗೆ ತಾವು ಕಾರ್ಯಕ್ರಮದ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಷ್ಟ್ರಪತಿ ಕಾರ್ಯಕ್ರಮ ವಿವರ

ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಹುಬ್ಬಳ್ಳಿಯ ಜಿಮಖಾನಾ ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ನಂತರ ಧಾರವಾಡದ ಸತ್ತೂರಿನಲ್ಲಿರುವ ಧಾರವಾಡ ಐಐಐಟಿ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪೂರ್ವ ಸಿದ್ಧತಾ ಸಭೆ ನಡೆಯಿತು. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶಿವ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಿದ್ಧತೆಯ ಬಗ್ಗೆ ವಿವರ ಪಡೆದರು.

ರಸ್ತೆಗೆ ತೇಪೆ, ಸ್ವಚ್ಛತಾ ಕಾಮಗಾರಿಗೆ ವೇಗ

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರಸ್ತೆಗಳನ್ನು ತ್ವರಿತಗತಿಯಲ್ಲಿ ದುರಸ್ತಿ ಮಾಡಲಾಗುತ್ತಿದೆ. ಸ್ವಚ್ಛತಾ ಕಾಮಗಾರಿಯೂ ಭರದಿಂದ ಸಾಗಿದೆ. ಹಳೆ ವಿದ್ಯುತ್ ಕಂಬಗಳನ್ನು ತೆರವು ಮಾಡಲಾಗುತ್ತಿದ್ದು, ಹೊಸ ಕಂಬಗಳನ್ನು ನೆಡಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಜಿಮ್​ಖಾನ ಮೈದಾನ ಬಳಿಯ ನಾಲೆಯ ತಡೆಗೋಡೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ರಸ್ತೆ ಬದಲಿ ಕಳೆ ಕಿತ್ತು, ದೂಳು ಗುಡಿಸಲಾಗುತ್ತಿದೆ.

ಹುಬ್ಬಳ್ಳಿಗೆ ಬರುತ್ತಿರುವ 5ನೇ ರಾಷ್ಟ್ರಪತಿ

ಧಾರವಾಡ ಜಿಲ್ಲೆಗೆ ಈ ಹಿಂದೆಯೂ ಹಲವು ರಾಷ್ಟ್ರಪತಿಗಳು ಭೇಟಿ ನೀಡಿದ್ದರು. ದ್ರೌಪದಿ ಮುರ್ಮು ಅವರು ಜಿಲ್ಲೆಗೆ ಭೇಟಿ ನೀಡುತ್ತಿರುವ 5ನೇ ರಾಷ್ಟ್ರಪತಿಯಾಗಲಿದ್ದಾರೆ. ಈ ಮೊದಲು ಸರ್ವಪಲ್ಲಿ ರಾಧಾಕೃಷ್ಣನ್, ಗ್ಯಾನಿ ಜೇಲ್‍ಸಿಂಗ್, ಡಾ.ಅಬ್ದುಲ್ ಕಲಾಂ, ಪ್ರಣವ್ ಮುಖರ್ಜಿ ಅವರು ಧಾರವಾಡ ಜಿಲ್ಲೆಗೆ ಬಂದಿದ್ದರು.

ರಾಷ್ಟ್ರಪತಿ ಕಾರ್ಯಕ್ರಮವು ಸುಮಾರು ಒಂದೂವರೆ ಗಂಟೆ (70 ನಿಮಿಷ) ನಡೆಯಲಿದೆ. ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಪುಸ್ತಕ, ಧಾರವಾಡ ಪೇಡಾವನ್ನು ನೆನಪಿನ ಕಾಣಿಕೆಯಾಗಿ ನೀಡಲಾಗುವುದು. ಪಾಲಿಕೆಯ 81 ಸದಸ್ಯರೊಂದಿಗೆ ಗ್ರೂಪ್ ಫೋಟೊ ತೆಗೆಯಲಾಗುವುದು. ಕಾರ್ಯಕ್ರಮದಲ್ಲಿ 5,000 ಜನರು ಪಾಲ್ಗೊಳ್ಳಲು ಅವಕಾಶವಿದೆ. 500 ಪೌರಕಾರ್ಮಿಕರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ಧಾರವಾಡದ ಐಐಐಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 400 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೇಯರ್ ಈರೇಶ ಅಂಚಟಗೇರಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದರು.

Published On - 9:19 am, Sun, 25 September 22

ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು