ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ, ಸಿದ್ದಾರೂಢರ ಬೆಳ್ಳಿ ವಿಗ್ರಹ ಕಾಣಿಕೆ ನೀಡಿದ ಪಾಲಿಕೆ

ಪೌರ ಸನ್ಮಾನ ಕಾರ್ಯಕ್ರಮದ ವೇದಿಕೆಗೆ ರಾಷ್ಟ್ರಪತಿ ಮುರ್ಮು ಆಗಮಿಸಿದ್ದು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು. ಹಾಗೂ ಹುಬ್ಬಳ್ಳಿ-ಧಾರವಾಡ‌ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದ್ದಾರೆ.

ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ, ಸಿದ್ದಾರೂಢರ ಬೆಳ್ಳಿ ವಿಗ್ರಹ ಕಾಣಿಕೆ ನೀಡಿದ ಪಾಲಿಕೆ
ರಾಷ್ಟ್ರಪತಿ ದ್ರೌಪದಿ ಮುರ್ಮು
TV9kannada Web Team

| Edited By: Ayesha Banu

Sep 26, 2022 | 2:32 PM


ಹುಬ್ಬಳ್ಳಿ: ವಿದ್ಯಾಕಾಶಿ ಖ್ಯಾತಿಯ ಧಾರವಾಡದಲ್ಲಿ ಇಂದು ಐಐಐಟಿ ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಭಾರತೀಯ ಸೇನಾ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.  ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಜೊತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಶಂಕರಪಾಟೀಲ್ ಮುನೇನಕೊಪ್ಪ, ಹಾಲಪ್ಪ ಆಚಾರ್ , ಶಾಸಕರಾದ ಅರವಿಂದ ಬೆಲ್ಲದ್, ಪ್ರಸಾದ್ ಅಬ್ಬಯ್ಯ ಹಾಗೂ ಸಲೀಂ ಅಹ್ಮದ್ ಸ್ವಾಗತಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಜಿಮ್ ಖಾನಾ ಮೈದಾನ ದತ್ತ ದ್ರೌಪದಿ‌ ಮುರ್ಮು ಪ್ರಯಾಣ ಬೆಳೆಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ

ಇನ್ನು ಪೌರ ಸನ್ಮಾನ ಕಾರ್ಯಕ್ರಮದ ವೇದಿಕೆಗೆ ರಾಷ್ಟ್ರಪತಿ ಮುರ್ಮು ಆಗಮಿಸಿದ್ದು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು. ಹಾಗೂ ಹುಬ್ಬಳ್ಳಿ-ಧಾರವಾಡ‌ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಿದ್ದಾರೆ. ನೆನಪಿನ ಕಾಣಿಕೆಯಾಗಿ ಶ್ರೀ ಸಿದ್ದಾರೂಢರ 900 ಗ್ರಾಂ ತೂಕದ ಬೆಳ್ಳಿಯ ವಿಗ್ರಹ, ಯಾಲಕ್ಕಿ ಹಾರ, ಖಾದಿ ಶಾಲ್ ಹೊದಿಸಿ ಪೌರ ಸನ್ಮಾನ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಹೈಡ್ರಾಮಾ

ಇನ್ನು ಮತ್ತೊಂದೆಡೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಹೈಡ್ರಾಮಾ ನಡೆದಿದೆ. ಪೌರ ಸನ್ಮಾನ ಕಾರ್ಯಕ್ರಮದಲ್ಲಿ ನಮಗೆ ಗೌರವ ಕೊಟ್ಟಿಲ್ಲ ಎಂದು ಪಾಲಿಕೆ ಮುಂಭಾಗ ಕುಳಿತು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರ. ನಿನ್ನೆ ಕಾರ್ಯಕ್ರಮಕ್ಕೆ ನಾವು ಬರಲ್ಲ ಎಂದಿದ್ದ ಕಾಂಗ್ರೆಸ್ ಸದಸ್ಯರು ಇಂದು ಕಾರ್ಯಕ್ರಮದ ವೇದಿಕೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಿಂದ ಕಾಂಗ್ರೆಸ್ ಕಾರ್ಪೋರೇಟರ್ಸ್ ದೂರ ಉಳಿದಿದ್ದರು. ರಾಷ್ಟ್ರಪತಿ ಕಾರ್ಯಕ್ರಮದ ತಯಾರಿಯಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯರನ್ನು ಕಡೆಗಣನೆ ಮಾಡಲಾಗಿದೆ ಎಂಬ ಕಾರಣಕ್ಕೆ ಪೌರಸನ್ಮಾನ ಕಾರ್ಯಕ್ರಮದಿಂದ ಕೈ ಸದಸ್ಯರು ದೂರ ಸರಿದಿದ್ದರು. 82 ಪಾಲಿಕೆ ಸದಸ್ಯರ ಪೈಕಿ, 34 ಜನ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಗೈರಾಗಿದ್ದಾರೆ. ಆದರೆ ಪಾಲಿಕೆ ಮುಂಭಾಗ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada