National Youth Festival 2023: ಪ್ರಧಾನಿ ಮೋದಿ ಸ್ವಾಗತಕ್ಕೆ ಧಾರವಾಡ ಸಜ್ಜು, 5 ದಿನಗಳ ಅಂತಾರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ

Swami Vivekananda Birth Anniversary: ವಿದ್ಯಾಕಾಶಿ ಧಾರವಾಡ ಯುವಜನೋತ್ಸವಕ್ಕಾಗಿ ಝಗಮಗಿಸುತ್ತಿದೆ. ಧಾರವಾಡದಲ್ಲಿ ಇಂದಿನಿಂದ ಐದು ದಿನಗಳ ಕಾಲ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ.

National Youth Festival 2023: ಪ್ರಧಾನಿ ಮೋದಿ ಸ್ವಾಗತಕ್ಕೆ ಧಾರವಾಡ ಸಜ್ಜು, 5 ದಿನಗಳ ಅಂತಾರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ
ಅಂತಾರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ
Follow us
TV9 Web
| Updated By: ಆಯೇಷಾ ಬಾನು

Updated on:Jan 12, 2023 | 7:26 AM

ಧಾರವಾಡ: ಯುವಶಕ್ತಿ ನಮ್ಮ ದೇಶದ ಬಹುದೊಡ್ಡ ಸಂಪತ್ತು. ಇದೇ ಯುವ ಸಮೂಹವನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಸಲಾಗುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ(National Youth Festival 2023) ಈಗ ವಿದ್ಯಾಕಾಶಿ ಧಾರವಾಡ ನವವಧುವಿನಂತೆ ಸಜ್ಜಾಗಿದೆ. ವಿಶೇಷ ಅಂದ್ರೆ ಪ್ರಧಾನಿ ಮೋದಿ(Narendra Modi) ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಲ್ಲೆಡೆ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.

ವಿದ್ಯಾಕಾಶಿ ಧಾರವಾಡ ಯುವಜನೋತ್ಸವಕ್ಕಾಗಿ ಝಗಮಗಿಸುತ್ತಿದೆ. ಧಾರವಾಡದಲ್ಲಿ ಇಂದಿನಿಂದ ಐದು ದಿನಗಳ ಕಾಲ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರಮಟ್ಟದ ಈ ಯುವಜನೋತ್ಸವದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸುತ್ತಿರೋ 7500 ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೆಸಿಡಿಯಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದ್ದು, ಅದಕ್ಕಾಗಿ ಅದ್ಧೂರಿ ವೇದಿಕೆ ಸಿದ್ಧಪಡಿಸಲಾಗಿದೆ.

ವಿಶೇಷ ಅಂದ್ರೆ ವಿದ್ಯಾಕಾಶಿಯಲ್ಲಿ ಆರಂಭವಾಗ್ತಿರೋ ಯುವಜನೋತ್ಸಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಯುವಜನೋತ್ಸವಕ್ಕೆ ‘ಮೋದಿ’

ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ ರೋಡ್ ಶೋ‌ ನಡೆಸಲಿದ್ದಾರೆ. ಏರ್‌ಪೋರ್ಟ್‌ನಿಂದ ಗೋಕುಲ್ ರಸ್ತೆ, ಅಕ್ಷಯ ಪಾರ್ಕ್, ಹೊಸೂರ್ ಸರ್ಕಲ್, ಐಬಿ ಸರ್ಕಲ್, ದೇಶಪಾಂಡೆ ನಗರ, ಕೋರ್ಟ್ ಸರ್ಕಲ್ ಮೂಲಕ ಹುಬ್ಬಳ್ಳಿ ರೈಲ್ವೆ ಮೈದಾನಕ್ಕೆ ಮೋದಿ ಎಂಟ್ರಿ ಕೊಡಲಿದ್ದಾರೆ. ಸಂಜೆ 4 ಗಂಟೆ ವೇಳೆಗೆ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ನಂತರ ಯುವಸಮೂಹವನ್ನು ಉದ್ದೇಶಿಸಿ ಮಾತನಾಡಿ, ಸಂಜೆ 5.35 ಕ್ಕೆ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವುದು ಯುವಜನೋತ್ಸವ ಅಲ್ಲ, ಯುವ ವಿನಾಶೋತ್ಸವ: ಸಿದ್ದರಾಮಯ್ಯ ವ್ಯಂಗ್ಯ

ಇನ್ನು ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಸುಮಾರು 50 ಸಾವಿರ ಯುವಜನತೆ ಈ ಯುವಜನೋತ್ಸವ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿದ್ದಾರಂತೆ. ಆದ್ರೆ ರೈಲ್ವೆ ಮೈದಾನದಲ್ಲಿ 25 ಸಾವಿರ ಜನರಿಗೆ ಮಾತ್ರ ಅವಕಾಶ ಇದೆ. ಅಕ್ಕಪಕ್ಕದ ಮೈದಾನದಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗುತ್ತದೆ. ಧಾರವಾಡದ ಕೆಸಿಡಿ ಮೈದಾನದಲ್ಲಿ ಮುಖ್ಯ ವೇದಿಕೆ ಹಾಕಲಾಗಿದ್ದು, ಇಲ್ಲಿ ಪ್ರತಿ ನಿತ್ಯ ಸಂಜೆ ಮೊದಲಿಗೆ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆಯಂತೆ. ಬಳಿಕ ಪ್ರಸಕ್ತ ವಿದ್ಯಮಾನಗಳನ್ನು ಆಧರಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಂತರ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರ ಪ್ರೊಗ್ರಾಮ್ ಕೂಡ ಇರಲಿದ್ದು ಐದು ದಿನಗಳ ಕಾಲ ವಿದ್ಯಾಕಾಶಿ ಧಾರವಾಡ ರಾಷ್ಟ್ರಮಟ್ಟದ ಉತ್ಸವದಲ್ಲಿ ಮಿಂದೇಳಲಿದೆ.

ಹುಬ್ಬಳ್ಳಿ ನಗರದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ

ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ಹುಬ್ಬಳ್ಳಿ ನಗರದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ

ಇನ್ನು ವೇದಿಕೆಯಲ್ಲಿ ಪ್ರಧಾನಿ ಮೋದಿ ಜತೆ 21 ಗಣ್ಯರಿಗೆ ಮಾತ್ರ ಅವಕಾಶ ಇರಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಅನುರಾಗ್ ಸಿಂಗ್​ ಠಾಕೂರ್, ನಿಶಿತ್ ಪ್ರಮಾಣಿಕ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಸಿ.ನಾರಾಯಣಗೌಡ, ಹಾಲಪ್ಪ ಆಚಾರ್, ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ್, ಸಿ.ಎಂ.‌ನಿಂಬಣ್ಣವರ್, ಅಬ್ಬಯ್ಯ ಪ್ರಸಾದ್​​, ಅಮೃತ್ ದೇಸಾಯಿ, ಕುಸುಮಾ ಶಿವಳ್ಳಿ, ಎಂಎಲ್​ಸಿ ಎಸ್.ವಿ.ಸಂಕನೂರ್, ಪ್ರದೀಪ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಜಂಗಲ್ ಲಾಡ್ಜಸ್ ರೆಸಾರ್ಟ್ಸ್ ಅಧ್ಯಕ್ಷ ರಾಜೇಶ್ ಕೋಟೆನ್ನವರ್​ಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ಹುಬ್ಬಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಯುವಕರನ್ನು ಉದ್ದೇಶಿಸಿ ಮಾತಾಡಲಿದ್ದಾರೆ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಪ್ರಧಾನಿ ನರೇಂದ್ರ ಮೋದಿಗೆ ವಿಶಿಷ್ಟ ಉಡುಗೊರೆ ನೀಡಲು ಸಿದ್ಧತೆ

ಹಾವೇರಿಯ ಏಲಕ್ಕಿ ಹಾರದಿಂದ ಪ್ರಧಾನಿ ನರೇಂದ್ರ ಮೋದಿಗೆ ಸನ್ಮಾನ ಮಾಡಿ ಗರಗ, ಬೆಂಗೇರಿಯಲ್ಲಿ ತಯಾರಾಗಿರುವ ರಾಷ್ಟ್ರಧ್ವಜಕ್ಕೆ ಟೀಕ್​​ ವುಡ್​​ನಿಂದ ಚೌಕಟ್ಟು ಹಾಕಿ ಮೋದಿಗೆ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೂ ಮುಖ್ಯವಾಗಿ ಬಿದರಿನ ಕಲೆಯಲ್ಲಿ ಅರಳಿದ ವಿವೇಕಾನಂದ ಮೂರ್ತಿ ನೀಡಲು ತಯಾರಿ ನಡೆದಿದೆ.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ 2,900 ಪೊಲೀಸರಿಂದ ಭದ್ರತೆ ಇರಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್​ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗುತ್ತಿದೆ. 7 ಎಸ್​ಪಿಗಳು, 25 ಡಿವೈಎಸ್​ಪಿ, 60 ಪೊಲೀಸ್ ಇನ್ಸ್​ಪೆಕ್ಟರ್, 18 ಕೆಎಸ್​ಆರ್​ಪಿ ತುಕಡಿ, ನಗರ ಸಶಸ್ತ್ರ ಮೀಸಲು ಪಡೆ ನಿಯೋಜನೆ ಮಾಡಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗದುದ್ದಕ್ಕೂ ಸಿಬ್ಬಂದಿ ನಿಯೋಜಿಸಿದ್ದು ರೈಲ್ವೆ ಮೈದಾನದ ಮುಖ್ಯ ವೇದಿಕೆ ಸುತ್ತಮುತ್ತ ಪೊಲೀಸ್ ಭದ್ರತೆ ಇರಲಿದೆ. ಬೆಳಗ್ಗೆ 10 ಗಂಟೆ ಬಳಿಕ ಕಾರ್ಯಕ್ರಮ ಸ್ಥಳಕ್ಕೆ ಜನರಿಗೆ ಪ್ರವೇಶವಕಾಶ ಇರಲಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ ಪಱಯ ಮಾರ್ಗ ಮಾಡಲಾಗಿದ್ದು ಯಾರಾದರೂ ಮನವಿ ಕೊಡಬೇಕಾದರೆ ಡಿಸಿ, ಆಯುಕ್ತರಿಗೆ ಸಲ್ಲಿಸಬೇಕು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Thu, 12 January 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ