AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಪುಷ್ಕರಣಿ ವಿವಾದ: ಹು-ಧಾ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಶ್ರೀರಾಮ ಸೇನೆ!

ಹುಬ್ಬಳ್ಳಿಯ ಅಸಾರ ಓಣಿಯ ಶ್ರೀ ಭವಾನಿ ಶಂಕರ ದೇವಸ್ಥಾನದ ಬಳಿಯ ಪುರಾತನ ಪುಷ್ಕರಣಿ ಹಾಳುಗೆಡವಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ವಿರುದ್ಧ ಶ್ರೀರಾಮ ಸೇನೆ ಧಾರವಾಡ ಲೋಕಾಯುಕ್ತಕ್ಕೆ ದೂರು ನೀಡಿದೆ. ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಕ್ಕಾಗಿ ಆಯುಕ್ತರಿಂದಲೇ ವೆಚ್ಚ ವಸೂಲಿ ಮಾಡುವಂತೆ ಒತ್ತಾಯಿಸಲಾಗಿದೆ.

ಹುಬ್ಬಳ್ಳಿ ಪುಷ್ಕರಣಿ ವಿವಾದ: ಹು-ಧಾ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಶ್ರೀರಾಮ ಸೇನೆ!
ಹು-ಧಾ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಶ್ರೀರಾಮ ಸೇನೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 16, 2026 | 4:51 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿ ಪುಷ್ಕರಣಿ ವಿವಾದಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು.
  • ಪುರಾತತ್ವ ಇಲಾಖೆ ಅನುಮತಿಯಿಲ್ಲದೆ ಕಾಮಗಾರಿ ನಡೆಸಿ ಪುಷ್ಕರಣಿ ಹಾಳುಗೆಡವಿದ ಆರೋಪ.
  • ಪ್ರತಿಭಟನೆಗೆ ತಗುಲಿದ ಭದ್ರತಾ ವೆಚ್ಚವನ್ನು ಆಯುಕ್ತರಿಂದಲೇ ವಸೂಲಿ ಮಾಡಲು ಆಗ್ರಹ.

ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ ಶಂಕರ ದೇವಸ್ಥಾನದ ಆವರಣದ ಪುಷ್ಕರಣಿ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪುಷ್ಕರಣಿಯನ್ನು ಹಾಳುಗೆಡವಿ, ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರ ವಿರುದ್ಧ ಧಾರವಾಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ

ದೇವಸ್ಥಾನವು ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು, ಅನುಮತಿ ಪಡೆಯದೇ ಪಾಲಿಕೆಯಿಂದ ರಸ್ತೆ ಮತ್ತು ಚರಂಡಿ ಕಾಮಗಾರಿ ನಡೆಸಲಾಗಿದೆ. ಅಲ್ಲಿನ ಪುರಾತನ ಪುಷ್ಕರಣಿಯನ್ನು ಮುಚ್ಚಿ ರಸ್ತೆ ನಿರ್ಮಿಸುತ್ತಿರುವುದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಪಾಲಿಕೆ ಆಯುಕ್ತರೇ ಪ್ರಮುಖ ಹೊಣೆಗಾರರಾಗಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.

ದೂರಿನಲ್ಲೇನಿದೆ?

ಅಲ್ಲದೆ, ಇತ್ತೀಚೆಗೆ ನಡೆದ ಪ್ರತಿಭಟನೆಯ ವೇಳೆ ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಈ ಬಂದೋಬಸ್ತ್‌ಗಾಗಿ ಪೊಲೀಸ್ ಇಲಾಖೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದು, ಸಾರ್ವಜನಿಕರ ಈ ತೆರಿಗೆ ಹಣ ಪೋಲಾಗಲು ಪಾಲಿಕೆ ಆಯುಕ್ತರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಆ ಖರ್ಚಿನ ಹಣವನ್ನು ಆಯುಕ್ತರಿಂದಲೇ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಲ್ಲಿಯವರೆಗೆ ರಾಜಕೀಯ ನಾಯಕರ ವಿರುದ್ಧ ಹೋರಾಟ ನಡೆಸುತ್ತಿದ್ದ ಹಿಂದೂಪರ ಸಂಘಟನೆಗಳು, ಇದೀಗ ನೇರವಾಗಿ ಪಾಲಿಕೆ ಆಯುಕ್ತರ ವಿರುದ್ಧವೇ ತೊಡೆ ತಟ್ಟಿ ನಿಂತಿವೆ. ಈ ವಿಭಿನ್ನ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಮಸೀದಿಯೊಳಗೆ ಗಣಪತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕರು!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!