AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು

ಇತ್ತೀಚಿಗೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕುರಾನ್ ಪಠಣ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಆ ವಿಚಾರ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಕುರಾನ್ ಪಠಿಸಿದ ಜಾಗದಲ್ಲಿ ಹೋಮ ಮಾಡಲು ಬಿಜೆಪಿ ಸಜ್ಜಾಗಿದ್ದು, ವಿವಾದ ತೀವ್ರಗೊಳ್ಳುವ ಲಕ್ಷಣ ಕಾಣಿಸಿದೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ, ಖಂಡನೆ: ಡಿಸಿ ಕಚೇರಿ ಎದುರು ಹೋಮ ನಡೆಸಲು ಬಿಜೆಪಿ ಸಜ್ಜು
ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದ ಫೋಟೊ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma|

Updated on: Oct 10, 2025 | 7:06 AM

Share

ಧಾರವಾಡ, ಅಕ್ಟೋಬರ್ 10: ಅಕ್ಟೋಬರ್ 5 ರಂದು ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಮೌಲ್ವಿಯೊಬ್ಬರು ಕುರಾನ್ ಪಠಣ ಮಾಡಿದ್ದರು. ಇದು ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಇಲ್ಲಿ ಕುರಾನ್ ಪಠಣ ಮಾಡುವುದು ಸರಿಯಾ ಎಂಬ ಪ್ರಶ್ನೆಯನ್ನು ಬಿಜೆಪಿ ಎತ್ತಿತ್ತು. ಆದರೆ ಅದು ಸರಕಾರಿ ಕಾರ್ಯಕ್ರಮ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಪದೇ ಪದೇ ಸ್ಪಷ್ಟನೆ ನೀಡಿದ್ದರು. ಆದರೆ ಬಿಜೆಪಿ ಮಾತ್ರ ತನ್ನ ವಾದದಿಂದ ಹಿಂದೆ ಸರಿದಿರಲಿಲ್ಲ. ಅದರ ಮುಂದುವರೆದ ಭಾಗ ಇದೀಗ ಶುರುವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣದ ವಿರುದ್ಧ ಸಿಡಿದೆದ್ದಿರೋ ಬಿಜೆಪಿ ನಾಯಕರು ಧಾರವಾಡದ (Dharawad) ಡಿಸಿ ಕಚೇರಿ ಎದುರು ವಿಭಿನ್ನವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಿಸಿದ್ದರಿಂದ ನಾವು ಕೂಡ ಡಿಸಿ ಕಚೇರಿ ಎದುರಲ್ಲಿಯೇ ಹೋಮ ಮಾಡಿ, ಎಲ್ಲವನ್ನು ಶುದ್ಧಗೊಳಿಸುವುದಾಗಿ ಹೇಳಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಹೋಮ ಮಾಡಲು ಬಿಜೆಪಿ ನಿರ್ಧರಿಸಿದ್ದು, ಕಾರ್ಯಕ್ರಮದ ನೇತೃತ್ವವನ್ನು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ವಹಿಸಿದ್ದಾರೆ.

ಕುರಾನ್ ಪಠಣ ವಿಚಾರವಾಗಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವುದಾಗಿ ಹೇಳಿರುವ ಬೆಲ್ಲದ್​, ಹೆಸ್ಕಾಂ ಕಾಮಗಾರಿ ನಿರ್ಮಾಣ ಗುದ್ದಲಿ ಪೂಜೆ ಕಾರ್ಯಕ್ರಮ ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಕುರಾನ್ ಪಠಣ

ಮಾಡಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ವಾರ್ಡ್ ನಂಬರ್ 34 ರ ಪಾಲಿಕೆ ಸದಸ್ಯೆ ಮಂಗಳಾ ಗೌರಿ ಹಾಗೂ ಪುತ್ರ ನಾಗರಾಜ್ ಗೌರಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಇದಾಗಿದ್ದು, ಇದು ಸರ್ಕಾರಿ ಕಾರ್ಯಕ್ರಮ ಆಗಿರಲಿಲ್ಲ ಎಂದು ವಾದಿಸುತ್ತಿದ್ದಾರೆ. ಆರೋಪವನ್ನು ಅಲ್ಲಗಳೆಯುತ್ತಿರುವ ಕಾಂಗ್ರೆಸ್ ಮುಖಂಡರು, ಕುರಾನ್ ಪಠಣ ಮಾಡಿದ್ದು ಅಭಿನಂದನಾ ಸಮಾರಂಭದಲ್ಲಿ ಎಂದು ವಾದಿಸುತ್ತಿದ್ದಾರೆ. ಅದು ನಾವು ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮ. ಸರ್ಕಾರಿ ಕಾರ್ಯಕ್ರಮ ಕೇವಲ ಗುದ್ದಲಿ ಪೂಜೆಗೆ ಮಾತ್ರ ಸೀಮಿತವಾಗಿತ್ತು ಎಂಬುದು ಅವರ ವಾದವಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗುತ್ತಿಗೆದಾರನ ಕಿಡ್ನ್ಯಾಪ್​: ಸಿಸಿ ಕ್ಯಾಮರಾದಲ್ಲಿ ಘಟನೆ ಸೆರೆ

ಒಟ್ಟಿನಲ್ಲಿ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಇಂದು ನಡೆಯಲಿರುವ ಹೋರಾಟದಲ್ಲಿ ಏನೆಲ್ಲಾ ಆಗುತ್ತದೆ ಎಂಬ ಪ್ರಶ್ನೆ ಮೂಡಿಸಿದೆ. ಈ ಪ್ರಕರಣ ಮುಂದೇನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!