ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ: ಹುಬ್ಬಳ್ಳಿಯಲ್ಲಿ ಇಬ್ಬರು NIA ವಶಕ್ಕೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರದ ಬೆಂಗಳೂರು ಸೇರಿದಂತೆ 11 ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದರು. ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿತ್ತು.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ: ಹುಬ್ಬಳ್ಳಿಯಲ್ಲಿ ಇಬ್ಬರು NIA ವಶಕ್ಕೆ
ಹುಬ್ಬಳ್ಳಿಯ ಅಬ್ದುಲ್​ ಮಿರ್ಜಾ ಎನ್​ಐಎ ವಶಕ್ಕೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:May 22, 2024 | 7:27 AM

ಹುಬ್ಬಳ್ಳಿ, ಮೇ 22: ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (Rameshwaram Cafe Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಮಂಗಳವಾರ (ಮೇ 22) ರಂದು ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ ಎನ್​ಐಎ ಅಧಿಕಾರಿಗಳು ಹುಬ್ಬಳ್ಳಿಯ ಸಹೋದರಿಬ್ಬರನ್ನು ವಶಕ್ಕೆ ಪಡೆದುಕೊಂಡು, ತಡರಾತ್ರಿವರೆಗೆ ವಿಚಾರಣೆ ನಡೆಸಿದರು.

ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್‌ವೇರ್ ಇಂಜಿನಿಯರ್ ಶೋಯೆಬ್‌ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್​ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್​ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್​ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್​ಐಎ ಅಧಿಕಾರಿಗಳಿಗೆ ದೊರೆತಿದೆ. ಶೋಯೆಬ್‌ ಪತ್ನಿ ನಿವಾಸ  ಬೆಳಗಾವಿಯಲ್ಲೂ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.

ಶೋಯೆಬ್‌ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಹಣ ಸಹಾಯ ಮಾಡಿದ್ದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್​ಐಎಗೆ ದೊರೆತಿವೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್​ನ ಜೊತೆ ಕೋಡ್​ ವರ್ಡ್​ನಲ್ಲಿ ಚಾಟಿಂಗ್ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆ ಸ್ಫೋಟ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಎನ್​ಐಎ ಅಧಿಕಾರಿಗಳಲ್ಲಿ ಮೂಡಿದೆ. ಹೀಗಾಗಿ‌ ಸಹೋದರರಿಬ್ಬರನ್ನು ಹುಬ್ಬಳ್ಳಿ ಇಂದಿರಾನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಎನ್​ಐಎ ಅಧಿಕಾರಗಳು ತೀವ್ರ ವಿಚಾರಣೆ ನಡೆಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರನ್ನು ವಶಕ್ಕೆ ಪಡೆದ ಎನ್​ಐಎ

ರಾಮೇಶ್ವರಂ ಕೆಫೆ ಸ್ಫೋಟ

ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ ಅನ್ನು ಎನ್​ಐಎ ಅಧಿಕಾರಿಗಳು, ಘಟನೆ ನಡೆದು 43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದವು.

ವಿಚಾರಣೆ ವೇಳೆ ಹಲವು ವಿಚಾರ ಬಯಲು

ಎನ್ಐಎ ವಿಚಾರಣೆ ವೇಳೆ ಬಾಂಬರ್ ಮುಸಾವೀರ್ ಹಾಗೂ ಮತೀನ್ ತಾಹ ಆಘಾತಕಾರಿ ಸತ್ಯ ಹೊರಹಾಕಿದ್ದರು. ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಮುನ್ನವೇ, ವೈಟ್​​ಫೀಲ್ಡ್ ಭಾಗದ SEZ (ವಿಶೇಷ ಆರ್ಥಿಕ ವಲಯ) ಗಳನ್ನು ಉಗ್ರರು ಟಾರ್ಗೆಟ್​ ಮಾಡಿದ್ದಾಗಿ ತಿಳಿಸಿದ್ದರು.

ಐಟಿಬಿಪಿ ಕಂಪನಿಗಳು ಹೆಚ್ಚಿರುವ ಈ ಬಾಗದಲ್ಲಿ ಬ್ಲಾಸ್ಟ್​​ ಮಾಡಿದರೆ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡಬಹುದು. ಐಸಿಸ್​ ಸಂಘಟನೆ ನಮ್ಮನ್ನ ಸಲೀಸಾಗಿ ಸೇರಿಸಿಕೊಳ್ಳುತ್ತೆ ಅನ್ನೋ ನಂಬಿಕೆ ಇತ್ತಂತೆ. ಆದರೆ ಐಟಿಬಿಟಿ ಏರಿಯಾದಲ್ಲಿ, ಸೆಕ್ಯೂರಿಟಿ ಬಿಗಿಯಾಗಿದ್ದರಿಂದ ಸ್ಫೋಟದ ಪ್ಲ್ಯಾನ್​ ವರ್ಕೌಟ್​​ ಆಗಲಿಲ್ಲ. ಹೀಗಾಗಿ, ಇದು ಸೇಫ್​ ಅಲ್ಲ ಅಂತ ಮುಂದೆ ಸಾಗಿದವರ ಕಣ್ಣಿಗೆ ಬಿದ್ದದ್ದೇ ಈ ರಾಮೇಶ್ವರಂ ಕೆಫೆ.

ರಾಮೇಶ್ವರಂ ಕೆಫೆ ಕಂಡ ಉಗ್ರರಿಗೆ ಕೋಪ ಹೆಚ್ಚಾಗಿತ್ತು. ಕಾರಣ, ಕೆಫೆ ಮುಂದಿದ್ದ ಹೂವಿನ ಅಲಂಕಾರ, ಕೇಸರಿ ಮಯವಾಗಿದ್ದ ಕಲರ್ ಪೇಪರ್ಸ್. ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಸಂಭ್ರಮ ಇದಿದ್ರಿಂದ ಎಲ್ಲೆಲ್ಲೂ ರಾಮಜಪ ಜೋರಾಗಿತ್ತು. ಹೀಗಾಗಿ, ರಾಮೇಶ್ವರಂ ಕೆಫೆ ಸ್ಫೋಟಿಸೋದೇ ಸೂಕ್ತ ಅಂತ ನಿರ್ಧರಿಸಿದ್ರಂತೆ. ಅದ್ರಂತೆ ಮಾರ್ಚ್ 1 ರಂದು ಬಾಂಬ್ ಇಟ್ಟು ಎಸ್ಕೇಪ್ ಆಗಿದ್ದಾಗಿ ಎನ್ಐಎ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 22 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ