ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ‌ ಹೋರಾಟ ಕೇಸ್​ಗೆ ಮರುಜೀವ: 31 ವರ್ಷದ ಬಳಿಕ ಆರೋಪಿಯ ಬಂಧನ

31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣಕ್ಕೆ‌ ಮರುಜೀವ ಬಂದಿದೆ. ಆ ಮೂಲಕ ರಾಮಜನ್ಮಭೂಮಿ ಹೋರಾಟಗಾರರಿಗೆ ಬಂಧನದ ಭೀತಿ ಶುರುವಾಗಿದೆ. 31 ವರ್ಷದ ಬಳಿಕ ಓರ್ವ ಆರೋಪಿಯನ್ನ‌ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಹಳೆ ಪ್ರಕರಣಕ್ಕೆ‌ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ. 

ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ‌ ಹೋರಾಟ ಕೇಸ್​ಗೆ ಮರುಜೀವ: 31 ವರ್ಷದ ಬಳಿಕ ಆರೋಪಿಯ ಬಂಧನ
ರಾಮಜನ್ಮಭೂಮಿ‌ ಹೋರಾಟ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 01, 2024 | 3:40 PM

ಹುಬ್ಬಳ್ಳಿ, ಜನವರಿ 01: 31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣ (Ramjanmabhoomi case) ಕ್ಕೆ‌ ಮರುಜೀವ ಬಂದಿದೆ. ಆ ಮೂಲಕ ರಾಮಜನ್ಮಭೂಮಿ ಹೋರಾಟಗಾರರಿಗೆ ಬಂಧನದ ಭೀತಿ ಶುರುವಾಗಿದೆ. ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳಿಗಾಗಿ ಏಕಾಏಕಿ ಹುಡುಕಾಟ ಆರಂಭಿಸಿದ್ದಾರೆ.

31 ವರ್ಷದ ಬಳಿಕ ಓರ್ವ ಆರೋಪಿಯನ್ನ‌ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ

ಪ್ರಕರಣ ದಾಖಲಾದಾಗ ಆರೋಪಿತ ವ್ಯಕ್ತಿಗಳು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ರಾಮಲಲ್ಲನಿಗಿದೆ ಮೈಸೂರಿನ ಶಿಲೆ, ಶಿಲ್ಪಿಯ ಸ್ಪರ್ಶ; ರಾಮದಾಸನ ಜಮೀನಿನಲ್ಲಿ ಕೃಷ್ಣ ಶಿಲೆ ಸಿಕ್ಕಿದ್ದೇ ರೋಚಕ

ಕರಸೇವೆಗೂ ಮುನ್ನ ಅಂದರೆ ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿದ್ದು, ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಸದ್ಯ ಈ ಹಳೆ ಪ್ರಕರಣಕ್ಕೆ‌ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:39 pm, Mon, 1 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ