AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ: ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಹುಬ್ಬಳ್ಳಿಯ ಯುವಕನಿಗೆ ಆಹ್ವಾನ

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಆಹ್ವಾನ ಬಂದಿದ್ದು, ಜ. 25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ: ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಹುಬ್ಬಳ್ಳಿಯ ಯುವಕನಿಗೆ ಆಹ್ವಾನ
ವಿದ್ವಾನ್ ಸುಜಯ ಶಾನಭಾಗ
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 19, 2024 | 2:43 PM

Share

ಹುಬ್ಬಳ್ಳಿ, ಜನವರಿ 19: ಅಯೋಧ್ಯೆ (ayodhya) ಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಒಂದು ಕಡೆ ಈಗಾಗಲೇ ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದ್ದು, ಇನ್ನೊಂದು ಕಡೆ ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಆಹ್ವಾನ ಬಂದಿದ್ದು, ಜ. 25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಸುಜಯ ಶಾನಭಾಗ, ತಮ್ಮಗೆ ಅವಕಾಶ ಸಿಕ್ಕಿದಕ್ಕೆ ಖುಷಿಯಾಗಿದೆ. ಮೈಸೂರಿನ ವಸುಂಧರ ದೊರೆಸ್ವಾಮಿಯವರ ನೇತೃತ್ವದಲ್ಲಿ ‘ಶ್ರೀರಾಮಂ ಭಜೆ’ ಅಂತ ನೃತ್ಯ ಸಮರ್ಪಣೆಯಾಗಲಿದೆ. ಅವರ ಹಿರಿಯ ‌ಶಿಷ್ಯನಾಗಿ ಅವರ ಜೊತೆ ವೇದಿಕೆ‌ ಹಂಚಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ, ಗಮನ ಸೆಳೆಯುತ್ತಿರೋ ಮಣ್ಣಿನ ಮೂರ್ತಿ ಇಲ್ಲಿದೆ

ರಾಮ‌ ಪ್ರಾಣ‌ ಪ್ರತಿಷ್ಠಾಪನೆ ಸುಸಂದರ್ಭದಲ್ಲಿ‌ ಈ ಅವಕಾಶ ಸಿಕ್ಕಿದು ನಮ್ಮ ಸೌಭಾಗ್ಯ. ಹುಬ್ಬಳ್ಳಿಯವನಾಗಿ ನಾನು ಶ್ರೀರಾಮನಿಗೆ ಪುಷ್ಪ ಅರ್ಪಣೆ ಮಾಡಿತ್ತಿರುವ ಖುಷಿ ಇದೆ.  45 ನಿಮಿಷಗಳ ಕಾಲ ನೃತ್ಯ ರೂಪಕ ಇದಾಗಿದೆ. ವಸುಂದರ ದೊರೆಸ್ವಾಮಿ ಸೇರಿದಂತೆ ನಾಲ್ವರ ತಂಡ ನೃತ್ಯ ರೂಪಕದಲ್ಲಿ ಪಾಲ್ಗೊಳ್ಳುತ್ತಿದ್ದು, ಅಯೋಧ್ಯೆಯಲ್ಲಿ ಕಾರ್ಯಕ್ರಮ ನೀಡುತ್ತಿರುವರು ಹೆಮ್ಮೆಯ ವಿಷಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಹುಬ್ಬಳ್ಳಿಗರ ಕೈಚಳಕ: ಬೃಹದಾಕಾರದ ಅಳಿಲು ಕಲಾಕೃತಿ ನಿರ್ಮಾಣ

ರಾವಣನ ಸಂಹಾರಕ್ಕೆ ಲಂಕೆಗೆ ಹೊರಟ ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಸಣ್ಣ ಅಳಿಲು ಸಹ ಸಹಾಯ ಮಾಡಿದೆ ಎಂಬ ಉಲ್ಲೇಖ ರಾಯಾಯಣದಲ್ಲಿದೆ. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್’ನಲ್ಲಿ (ರೈಲ್ವೆ ನಿಲ್ದಾಣ) ನಿರ್ಮಿಸಲಾಗಿದ್ದು, ಈ ಕಲಾಕೃತಿಯನ್ನು ಹುಬ್ಬಳ್ಳಿಯ ಆರ್ಟ್ ವಾಲೇ ಸಂಸ್ಥೆ ನಿರ್ಮಿಸಿರುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಕಾರಿಗೆ ರಾಮ ಲಕ್ಷ್ಮಣ ಸೀತಾ ಮಾತೆ ಚಿತ್ರ ಅಂಟಿಸಿ, ಕೇಸರೀಮಯ ಮಾಡಿ ರಾಮಭಕ್ತಿ ಪ್ರದರ್ಶಿಸುತ್ತಿರುವ ಹುಬ್ಬಳ್ಳಿಯ ಸಚಿನ್!

ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಆರ್ಟ್ ವಾಲೆ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಓಸ್ತವಾಲ್ ಹಾಗೂ ಆರ್ಟ್ ಡೈರೆಕ್ಟರ್ ನಿಧಿ ಓಸ್ತವಾಲ್ ಅವರ ಮಾರ್ಗದರ್ಶನದಲ್ಲಿ ಈ ಕಲಾಕೃತಿಗಳನ್ನು ನಿರ್ಮಿಸಲಾಗಿದೆ. ಕಲಾಕೃತಿ ನಿರ್ಮಾಣದ ಪ್ರಾಜೆಕ್ಟ್ ಮುಖ್ಯಸ್ಥ ಸನತ್ ಪಟೀಲ, ಕಿರಿಯ ಆರ್ಕಿಟೆಕ್ಟ್ ವಿನಯಕುಮಾರ ಕುಂಬಾರ ಸೇರಿದಂತೆ ಒಟ್ಟು 15 ಜನ ಸಿಬ್ಬಂದಿ ಕೇವಲ ಒಂದು ತಿಂಗಳಲ್ಲಿ ಈ ಕಲಾಕೃತಿ ಸಿದ್ದಪಡಿಸಿದ್ದಾರೆ.

ವಿಶೇಷತೆ ಏನು?

ಅಯೋಧ್ಯೆ ಧಾಮ ಜಂಕ್ಷನ್‌ ಮುಖ್ಯ ದ್ವಾರದ ಬಳಿಯ ಎ-3 ಪ್ಯಾಸೇಜ್‌ನಲ್ಲಿ ಕ್ವಾರ್ಟನ್ ಸ್ಪೀಲ್​ನಲ್ಲಿ ಈ ಕಲಾಕೃತಿಯನ್ನು ಈಗಾಗಲೇ ಸ್ಥಾಪಿಸಲಾಗಿದೆ. ಅಳಿಲು ಒಟ್ಟು 19.5 ಅಡಿ ಎತ್ತರವಿದ್ದು, 2.5 ಟನ್ ತೂಕವಿದೆ. ಇದು ಭಾರತದ ಅತೀ ಎತ್ತರದ ಅಳಿಲಿನ ಕಲಾಕೃತಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ. ಅದರಂತೆ ರೈಲ್ವೆ ಜಂಕ್ಷನ್​ನಲ್ಲಿ 40 ಅಡಿ ಎತ್ತರದ ಅಯೋಧ್ಯೆ ರಾಮ ಮಂದಿರ, 8.5 ಅಡಿ ಎತ್ತರದ ಅಯೋಧ್ಯೆ ಹಾಗೂ 9 ಅಡಿ ಎತ್ತರದ ನಾಮಫಲಕ ಹಾಗೂ 40 ಅಡಿ ಎತ್ತರದ ಸರಯು ನದಿ ಘಾಟ್ ಕಲಾಕೃತಿಗಳನ್ನು ಆರ್ಟ್ ವಾಲೇ ಸಂಸ್ಥೆ ನಿರ್ಮಿಸಿದೆ. ಕಲ್ಯಾಣ ಜುವೆಲರ್ ಸಂಸ್ಥೆಯವರು ಈ ಕಲಾಕೃತಿಯನ್ನು ರೈಲ್ವೆ ಜಂಕ್ಷನ್​ಗೆ ಕೊಡುಗೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ