AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತ ಗೋಪಾಲ ವಾಜಪೇಯಿ ಹೆಸರಿನಲ್ಲಿ ‘ರಂಗ ಭೂಪತಿ’ ವಾರ್ಷಿಕ ಪ್ರಶಸ್ತಿ ಪ್ರಕಟ, ನಾಳಿದ್ದು ಧಾರವಾಡದಲ್ಲಿ ಪ್ರದಾನ

'Ranga Bhupati' annual award: ರಂಗಭೂಮಿಗೆ ಕೊಡುಗೆ ನೀಡಿರುವ ಪ್ರತಿಭಾವಂತರೊಬ್ಬರಿಗೆ ಪ್ರತಿವರ್ಷವೂ ಗೋ.ವಾ. ಹೆಸರಿನಲ್ಲಿ "ರಂಗಭೂಪತಿ" ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಚೊಚ್ಚಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ಹಿರಿಯ ಪತ್ರಕರ್ತ ಗೋಪಾಲ ವಾಜಪೇಯಿ ಹೆಸರಿನಲ್ಲಿ 'ರಂಗ ಭೂಪತಿ' ವಾರ್ಷಿಕ ಪ್ರಶಸ್ತಿ ಪ್ರಕಟ, ನಾಳಿದ್ದು ಧಾರವಾಡದಲ್ಲಿ ಪ್ರದಾನ
ಹಿರಿಯ ಪತ್ರಕರ್ತ ಗೋಪಾಲವಾಜಪೇಯಿ ಹೆಸರಲ್ಲಿ 'ರಂಗ ಭೂಪತಿ' ವಾರ್ಷಿಕ ಪ್ರಶಸ್ತಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಸಾಧು ಶ್ರೀನಾಥ್​|

Updated on:Mar 28, 2024 | 1:25 PM

Share

ಧಾರವಾಡ, ಮಾರ್ಚ್​​ 28: ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜೊತೆಗೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ ಮತ್ತು ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಾತ್ವಿಕ ಮನರಂಜನೆ ನೀಡಿ, ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನ ತಮ್ಮ ಬರಹಗಳ ಮೂಲಕ ಪ್ರಭಾವಿಸಿದವರು, ಹಿರಿಯ ಪತ್ರಕರ್ತ ಎಂದೇ ಸಂಬೋಧಿಸಲ್ಪಡುತ್ತಿದ್ದವರು (veteran journalist Gopal Vajpayee) ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಅದೇನೋ ಕಾರಣಕ್ಕೆ ಅವರು ಅಜ್ಞಾತರಾಗಿಯೇ ಉಳಿದರು. ಮುಖ್ಯವಾಹಿನಿಗೆ ಬರಲಿಲ್ಲ. ಅವರಿಗೆ ದಕ್ಕಬೇಕಾದ ಗೌರವವೂ ದೊರೆಯಲಿಲ್ಲ.

ಅಂಥ ಅಪರೂಪದ ಪತ್ರಕರ್ತ, ನಾಟಕಕಾರ, ನಟ, ನಿರ್ದೇಶಕರನ್ನು ನೆನಪಿಸಿಕೊಳ್ಳುವ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಧಾರವಾಡದ (Dharwad ) ಗೋ.ವಾ. ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ರಂಗಭೂಮಿಗೆ ಕೊಡುಗೆ ನೀಡಿರುವ ಪ್ರತಿಭಾವಂತರೊಬ್ಬರಿಗೆ ಪ್ರತಿವರ್ಷವೂ ಗೋ.ವಾ. ಹೆಸರಿನಲ್ಲಿ “ರಂಗಭೂಪತಿ” ಪ್ರಶಸ್ತಿ ನೀಡಲು ನಿರ್ಧರಿಸಿದೆ (‘Ranga Bhupati’ annual award).

ಪ್ರಸಕ್ತ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.

ವಿಶ್ವರಂಗ ಭೂಮಿ ದಿನದ ಪ್ರಯುಕ್ತ, ನಾಳಿದ್ದು 30 ರಂದು ಸಂಜೆ ರಂಗಾಯಣ ಆವರಣದಲ್ಲಿರುವ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ, ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದೆ. ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ ಕೆ.ಎಮ್, ರವಿ ಯಲ್ಲಪ್ಪನವರ್, ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಹಿರಿಯ ಸಾಹಿತಿ, ನಾಟಕಕಾರ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಗೋಪಾಲ ವಾಜಪೇಯಿ ಕುಟುಂಬಸ್ಥರು, ರಂಗಕರ್ಮಿ ಧನಂಜಯ ಕುಲಕರ್ಣಿ, “ಅವಧಿ ಈ-ಮ್ಯಾಗಜಿನ್” ಸಂಪಾದಕ ಜಿ.ಎನ್. ಮೋಹನ್​​, ರವಿ ಕುಲಕರ್ಣಿ ಉಪಸ್ಥಿತರಿರುತ್ತಾರೆ.

ಗೋಪಾಲ ವಾಜಪೇಯಿ ಮತ್ತು ಚಿತ್ರರಂಗ:

ಸುಂದರ ಕೃಷ್ಣ ಅರಸರ ‘’ಸಂಗ್ಯಾ ಬಾಳ್ಯಾ”, ನಾಗಾಭರಣರ ‘‘ಸಂತ ಶಿಶುನಾಳ ಶರೀಫ’’, ‘‘ನಾಗಮಂಡಲ’, ‘‘ಸಿಂಗಾರೆವ್ವ’ ‘ ಹಾಗೂ ಗಿರೀಶ್ ಕಾಸರವಳ್ಳಿಯವರ ‘‘ತಾಯಿ ಸಾಹೇಬ’’ ಚಿತ್ರಗಳಿಗೆ ಸಂಭಾಷಣೆ ಬರೆದವರು ಗೋಪಾಲ ವಾಜಪೇಯಿ. ಜೊತೆಗೆ ‘’ಸಂಗ್ಯಾ ಬಾಳ್ಯಾ’,’, ‘‘ನಾಗಮಂಡಲ’’, ‘‘ಸಿಂಗಾರೆವ್ವ’ ‘ ಮತ್ತು ಕೇಸರಿ ಹರವೂ ಅವರ ‘’ಭೂಮಿಗೀತ’’ಕ್ಕೆ ವಾಜಪೇಯಿ ಗೀತರಚನೆಯನ್ನು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:24 pm, Thu, 28 March 24

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ