AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ!: ಹುಬ್ಬಳ್ಳಿ ಕಿಮ್ಸ್​ನಲ್ಲಿ ಅಪರೂಪದ ಘಟನೆ

ಆಗ ತಾನೇ ಜನಿಸಿದ ಗಂಡು ಮಗುವಿನೊಳಗೆ ಮತ್ತೊಂದು ಭ್ರೂಣ ಕಂಡುಬಂದ ಅಪರೂಪದ ಘಟನೆಗೆ ಹುಬ್ಬಳ್ಳಿಯ ಕಿಮ್ಸ್ ​ ಸಾಕ್ಷಿಯಾಗಿದೆ. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ವೇಳೆ ಭ್ರೂಣವಿರುವ ವಿಷಯ ಬೆಳಕಿಗೆ ಬಂದಿದೆ.

ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ!: ಹುಬ್ಬಳ್ಳಿ ಕಿಮ್ಸ್​ನಲ್ಲಿ ಅಪರೂಪದ ಘಟನೆ
ಹುಬ್ಬಳ್ಳಿ KIMS
ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 02, 2025 | 4:46 PM

Share

ಹುಬ್ಬಳ್ಳಿ, ಅಕ್ಟೋಬರ್​ 02: ಜಗತ್ತಿನಲ್ಲಿ ‌ಸಯಾಮಿ ಮಕ್ಕಳ ಜನನ ಸೇರಿದಂತೆ ಅನೇಕ ಅಪರೂಪದ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇರುತ್ತವೆ. ಆದರೆ ಹುಬ್ಬಳ್ಳಿಯ (Hubli) ಕಿಮ್ಸ್​ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಎರಡನೇ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಜನ್ಮ ನೀಡಿದ ಮಗುವಿನೊಳಗೊಂದು ಭ್ರೂಣ ಇರೋದು ಪತ್ತೆಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದರು. ಕಳೆದ‌ ಸೆಪ್ಟಂಬರ್ 23ರಂದು ಗಂಡು ಮಗುವಿಗೆ ಈಕೆ ಜನ್ಮ ನೀಡಿದ್ದಾಳೆ. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ನವಜಾತ ಶಿಶುವಿಗೆ ಆಲ್ಟ್ರಾಸೌಂಡ್ ಮಾಡಿಸಲಾಗಿದೆ. ಈ ವೇಳೆ ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಭ್ರೂಣ ಪತ್ತೆಯಾಗಿದೆ. ಆದರೂ ಎಂಆರ್‌ಐ ಸ್ಕ್ಯಾನ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಅಂತಿಮ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸೋದಾಗಿ ತಿಳಿಸಿದ್ದು, ಇದೊಂದು ಅಪರೂಪದ ಪ್ರಕರಣ ಎಂದು ಹುಬ್ಬಳ್ಳಿ ಕಿಮ್ಸ್ ನ ವೈದ್ಯಕೀಯ ಅಧೀಕ್ಷಕ ಡಾ.ಈಶ್ವರ ಹಸಬಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಶೇ.1ರಷ್ಟು ಮೀಸಲಾತಿಗೆ ಆಗ್ರಹ: ಕಾಂಗ್ರೆಸ್​ ವಿರುದ್ಧ ಸಿಡಿದೆದ್ದ ಅಲೆಮಾರಿ ಸಮುದಾಯ

ಏನಿದು Fetus in fetu?

ಹುಟ್ಟುವಾಗಲೇ ನವಜಾತ ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣದ ಬೆಳವಣಿಗೆ ಆಗುವುದನ್ನ ವೈದ್ಯಕೀಯ ಭಾಷೆಯಲ್ಲಿ Fetus in fetu ಎಂದು ಕರೆಯಲಾಗುತ್ತೆ. ಇದು ನವಜಾತ ಶಿಶುವಿನ ದೇಹದೊಳಗೆ ಅಸಹಜ ದ್ರವ್ಯರಾಶಿ ಬೆಳೆಯುವ ಅಪರೂಪದ ಸ್ಥಿತಿಯಾಗಿದೆ.ಈ ರೀತಿಯ ಪ್ರಕಣಗಳು ಅತ್ಯಂತ ವಿರಳವಾಗಿದ್ದು, ಜಗತ್ತಿನಾದ್ಯಂತ ಈವರೆಗೆ ಕೇವಲ ಬೆರಳೆಣಿಕೆಯಷ್ಟು ಕೇಸ್​ ಮಾತ್ರ ಪತ್ತೆಯಾಗಿವೆ. ಸಯಾಮಿ ಅವಳಿಗಳಿಗಳಿಗೂ ಈ ರೀತಿಯ ಪ್ರಕರಣಗಳಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಸಂಯೋಜಿತ ಅವಳಿಗಳು ಗರ್ಭದಿಂದಲೇ ಶರೀರವನ್ನು ಜೋಡಿಸಿಕೊಂಡು ಹುಟ್ಟುತ್ತವೆ. ಸುಮಾರು 2 ಲಕ್ಷ ಜನನ ಕ್ರಿಯೆಯಲ್ಲಿ 1 ಸಯಾಮಿ ಅವಳಿಗಳು ಜನಿಸುವ ಸಾಧ್ಯತೆಯನ್ನ ಈವರೆಗೆ ಅಂದಾಜಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:45 pm, Thu, 2 October 25

ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?
ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?