ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರ ಸನ್ಮಾನಿಸುವ ಮೂಲಕ ಅನನ್ಯ ರೀತಿಯಲ್ಲಿ ಆಚರಣೆಯಾಯ್ತು ಗಣತಂತ್ರ ದಿನ
ಹುಬ್ಬಳ್ಳಿ: ಪ್ರಲ್ಹಾದ್ ಜೋಶಿ ಕಚೇರಿಯಲ್ಲಿ ಕೃಷಿ ಶ್ರಮಿಕರಿಗೆ ಸನ್ಮಾನ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 26, 2023 | 4:32 PM

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿ ಕಚೇರಿಯಲ್ಲಿ ಇಂದು ವಿಶೇಷ ರೀತಿಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ದೇಶದ ಈ ಸಂಭ್ರಮದ ದಿನದಂದು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಹುಬ್ಬಳ್ಳಿ (Hubballi) ಕಚೇರಿಯಲ್ಲಿ ಕೃಷಿ ಶ್ರಮಿಕರನ್ನು (agricultural labourers) ಧ್ವಜಾರೋಹಣಕ್ಕೆ ಆಹ್ವಾನಿಸಿ, ಅವರನ್ನೆಲ್ಲ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸುವ (Facilitation) ಮೂಲಕ ಗಣತಂತ್ರ ದಿನವನ್ನು (Republic Day 2023) ಆಚರಿಸಿದ್ದು ವಿಶೇಷವಾಗಿತ್ತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮಾರ್ಗದರ್ಶನದಂತೆ ಹುಬ್ಬಳ್ಳಿಯ ಅವರ ಕಚೇರಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದುಡಿಯುವ ಶ್ರಮಿಕವರ್ಗದವರೆಲ್ಲರೂ ಸಂಭ್ರಮದಿಂದ ಈ ಧ್ವಜಾರೋಹಣದಲ್ಲಿ ಪಾಲ್ಗೊಂಡರು.

ತಮ್ಮ ಕಚೇರಿಯಲ್ಲಿ ನಡೆದ ವಿಶಿಷ್ಠ ಗಣರಾಜ್ಯೋತ್ಸವ ಆಚರಣೆ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಸಮಾಜದ ಕಟ್ಟ ಕಡೆಯ ವರ್ಗ ಕೂಡ ಗಣರಾಜ್ಯೋತ್ಸವವನ್ನು ಸಂಭ್ರಮಿಸುವಂತೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಣರಾಜ್ಯ ಎಂಬುದು ನಮ್ಮೆಲ್ಲರ ಪಾಲಿಗೆ ಗೌರವದ ಸಂಕೇತವಾಗಿದ್ದು, ಇಂತಹ ವಿಶೇಷ ದಿನವನ್ನ ಶ್ರಮಿಕರ ಜೊತೆ ತಮ್ಮ ಕಚೇರಿಯಲ್ಲಿ ಆಚರಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರಮಿಕ ವರ್ಗದ ಹಿರಿಯರಾದ ಬಸವಣ್ಣಪ್ಪ ನೀರಲಗಿಯವರಿಂದ ಧ್ವಜಾರೋಹಣ ಮಾಡಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬಸಪ್ಪಣ್ಣನವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನೆದು ಗೌರವ ಅರ್ಪಿಸಿದರು ಹಾಗೂ ಈ ಮಾದರಿ ಗಣತಂತ್ರ ಆಚರಣೆಗೆ ಮಾರ್ಗದರ್ಶನ ಮಾಡಿದ ಪ್ರಲ್ಹಾದ ಜೋಶಿಯವರ ನಡೆಯನ್ನು ಶ್ಲಾಘಿಸಿದರು.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ