ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ; ಶುರುವಾಯ್ತು ರೆಸಾರ್ಟ್ ರಾಜಕಾರಣ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು 39 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ 33 ಸದಸ್ಯ ಬಲ ಹೊಂದಿದೆ. ಸಂಪೂರ್ಣ ಬಿಜೆಪಿ ಕಡೆಯೇ ಬಹುಮತವಿದ್ದು, ಪಕ್ಷವು ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ (BJP) ಆತಂಕ ಶುರುವಾಗಿದೆ. ಹೀಗಾಗಿ ತನ್ನ ಸದಸ್ಯರನ್ನು ದಾಂಡೇಲಿ ರೆಸಾರ್ಟ್‌ನಲ್ಲಿಟ್ಟಿದ್ದು, ರೆಸಾರ್ಟ್ ರಾಜಕಾರಣ ಆರಂಭಿಸಿದೆ. ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಮೇಯರ್, ಉಪಮೇಯರ್ ಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿರುವ ಕಾರಣ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಡ್ಡಮತದಾನದ ಭೀತಿ ಎದುರಾಗಿದೆ. ಇದು ರಾಜಕೀಯ ವಲಯದಲ್ಲಿ ಹೆಚ್ಚಿನ ಕುತೂಹಲ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು 39 ಸದಸ್ಯ ಬಲ ಹೊಂದಿದ್ದು, ಕಾಂಗ್ರೆಸ್ 33 ಸದಸ್ಯ ಬಲ ಹೊಂದಿದೆ. ಸಂಪೂರ್ಣ ಬಿಜೆಪಿ ಕಡೆಯೇ ಬಹುಮತವಿದ್ದು, ಪಕ್ಷವು ಸದಸ್ಯರಿಗೆ ವಿಪ್ ಜಾರಿ ಮಾಡಿದೆ.
ಮಂಗಳವಾರ ಬೆಳಗ್ಗೆ 9 ರಿಂದ 11 ಗಂಟೆ ವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಚುನಾವಣೆ ನಡೆಯಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಚುನಾವಣೆ ನಡೆಸಲಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.
ಇದನ್ನೂ ಓದಿ: BJP Protest: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಬಗ್ಗೆ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ಬಿಜೆಪಿ ಸದಸ್ಯರು ಮತದಾನಕ್ಕೆ ದಾಂಡೇಲಿ ರೆಸಾರ್ಟ್ನಿಂದಲೇ ನೇರವಾಗಿ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್ನಿಂದ ವಿಧಾನಪರಿಷತ್ ಉಪ ಚುನಾವಣೆ ಟಿಕೆಟ್ ದೊರೆತಿದ್ದು, ಅವರೂ ಹರ್ಷಗೊಂಡಿದ್ದಾರೆ. ಲೋಕಸಭೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ