ಕೊನೆಗೂ ಸಿಕ್ಕಿ ಬಿದ್ದ ಕೊಲೆಗಾರ: ಹಣ ಪಡೆದವನಿಂದಲೆ ಹತ್ಯೆಯಾಗಿದ್ದ ಧಾರವಾಡದ ನಿವೃತ್ತ ಶಿಕ್ಷಕಿ

ಹಿಂದೆ ಮುಂದೆ ಯಾರೂ ಇಲ್ಲದೆ ಏಕಾಂಗಿ ಜೀವನ ನಡೆಸುತ್ತಿದ್ದ ಶಿಕ್ಷಕಿ ಗಿರಿಜಾ ನಿವೃತ್ತಿ ಬಳಿಕ ಅದೇ ಹಣದಲ್ಲಿ ಚೆಂದದ ಬದುಕು ಸಾಗಿಸಬಹುದಿತ್ತು. ಆದ್ರೆ ಹಣದ ಆಸೆಗೆ ಬಿದ್ದಿದ್ದ ಶಿಕ್ಷಕಿ ಹಣ ಪಡೆದವನಿಂದಲೆ ಹತ್ಯೆಯಾಗಿದ್ದು ವಿಪರ್ಯಾಸವೇ ಸರಿ.

ಕೊನೆಗೂ ಸಿಕ್ಕಿ ಬಿದ್ದ ಕೊಲೆಗಾರ: ಹಣ ಪಡೆದವನಿಂದಲೆ ಹತ್ಯೆಯಾಗಿದ್ದ ಧಾರವಾಡದ ನಿವೃತ್ತ ಶಿಕ್ಷಕಿ
ಹಣ ಪಡೆದವನಿಂದಲೆ ಹತ್ಯೆಯಾಗಿದ್ದ ಧಾರವಾಡದ ನಿವೃತ್ತ ಶಿಕ್ಷಕಿ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on: Jan 03, 2024 | 10:48 AM

ಆಕೆ ಅದೆಷ್ಟೋ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾದ ಶಿಕ್ಷಕಿ. ನಿವೃತ್ತಿ ನಂತರ ಆಕೆ ತನ್ನ ಪಾಡಿಗೆ ಬದುಕಿದ್ದರೆ ಇಷ್ಟೊತ್ತಿಗೆ ಸುಂದರ ಜೀವನ ಅವಳದಾಗುತ್ತಿತ್ತು. ದುಡ್ಡಿನ ಆಸೆಗೆ ಬಿದ್ದ ಆಕೆ ದುಡ್ಡು ಪಡೆದವನಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾಳೆ (Murder). ಅಷ್ಟಕ್ಕೂ ಯಾರು ಆಕೆ? ಆಕೆಯ ಹತ್ಯೆಗೆ ಕಾರಣ ಏನು ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಸ್ಟೋರಿ. ಹೀಗೆ ಖಾಲಿ ಖಾಲಿ ಮನೆ; ಮನೆ ಎದುರು ನೆಮ್ಮದಿ ಎನ್ನುವ ಬೋರ್ಡ್; ಆದ್ರೆ ಆ ನೆಮ್ಮದಿಯೇ ಇಂದು ದುಡ್ಡಿನ ಆಸೆಗೆ ಜೀವನ ಅಂತ್ಯಗೊಳಿಸಿದೆ; ಧಾರವಾಡದ ನಗರದ (Dharwad) ಓಂ ನಗರ ಬಡಾವಣೆಯಲ್ಲಿರುವ ಈ ನೆಮ್ಮದಿ ಎನ್ನುವ ಮನೆಯಲ್ಲಿ ನಿವೃತ್ತ ಶಿಕ್ಷಕಿ (Retired teacher) ಗಿರಿಜಾ ನಡೂರಮಠ ಏಕಾಂಗಿ ಜೀವನ ನಡೆಸುತ್ತಿದ್ದರು.

ಗಂಡ ಮಕ್ಕಳು ಇಲ್ಲದೆ ಏಕಾಂಗಿಯಾಗಿದ್ದ ಗಿರಿಜಾ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. ಇತ್ತೀಚೆಗೆ ನಿವೃತ್ತಿಯಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಡಿಸಂಬರ್ 15ರಂದು ಗಿರಿಜಾ ಸಾವನ್ನಪ್ಪಿದರು. ಆ ಸಾವು ಮೊದಲು ಸಹಜ ಅಂತಲೇ ಭಾವಿಸಲಾಗಿತ್ತು. 8 ದಿನಗಳ ಬಳಿಕ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿ ದೇಹ ಸಿಕ್ಕಿತ್ತು. ಆದ್ರೆ ಯಾವಾಗ ಬಡ್ಡಿ ವ್ಯವಹಾರ ಗೊತ್ತಾಗುತ್ತೋ ಆಗ ಇದು ಮರ್ಡರ್ ಅನ್ನೋದು ತನಿಖೆಯ ವೇಳೆ ಗೊತ್ತಾಗಿದೆ. ಅಮರಗೋಳ ಬಡಾವಣೆಯ ಮಂಜುನಾಥ್ ದಂಡಿನ ಎನ್ನುವ ವ್ಯಕ್ತಿಗೆ 10 ಲಕ್ಷ ನೀಡಿದ್ದ ಗಿರಿಜಾ ನಿತ್ಯ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ. ಆದ್ರೆ ಅದಕ್ಕೆ ಒಪ್ಪದ ಮಂಜುನಾಥ್ ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಗಿರಿಜಾ ಹಾಕಿದ್ದ ವೇಲ್ ನಿಂದಲೆ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ರೇಣುಕಾ ಸುಕುಮಾರ, ಹು-ಧಾ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಹಲವು ವರ್ಷಗಳಿಂದ ಗಿರಿಜಾ ತಮ್ಮ ಸುತ್ತಮುತ್ತಲೂ ಹಾಗೂ ಇತರರ ಜೊತೆಯಲ್ಲಿ ಬಡ್ಡಿ ವ್ಯವಹಾರ ಮಾಡುತ್ತಲೇ ಬಂದಿದ್ದಾರೆ. ನಿವೃತ್ತಿ ಬಳಿಕ ಬಡ್ಡಿ ವ್ಯವಹಾರದ ಮೂಲಕ ಹಣ ಗಳಿಸುವ ಗೋಜು ಗೀಳಿಗೆ ಬಿದ್ದ ಗಿರಿಜಾ ತಮ್ಮ ಹಣವನ್ನು ಬಡ್ಡಿ ಮೂಲಕ ಪಡೆಯುವ ಇರಾದೆಯಿಂದಲೆ ಮಂಜುನಾಥ್ ಗೆ ಪದೇ ಪದೇ ಕರೆ ಮಾಡಿ ಹಣ ಕೇಳಿದ್ದಾರೆ.

Also Read: ನಿಮ್ಮ ಜೀವನಕ್ಕೆ ಬೆಂಕಿ ಕಿಚ್ಚು; ಫೈರ್ ತಂತ್ರ ಅನುಸರಿಸಿ ಬೇಗ ನಿವೃತ್ತಿ ಪಡೆದು ಆರಾಮವಾಗಿರಿ

ಆದ್ರೆ ಹಣ ಕೊಡಬೇಕಿದ್ದ ಮಂಜುನಾಥ್ ಹತ್ಯೆ ಮಾಡಿ ಯಾವುದೇ ಒಂದು ಒಂದು ಕ್ಲೂ ಬಿಡದೆ ಎಸ್ಕೇಪ್ ಆಗಿದ್ದ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಧಾರವಾಡದ ವಿದ್ಯಾಗಿರಿಯ ಪೊಲೀಸರು ಪೋಸ್ಟ್ ಮಾರ್ಟಂ ಗೆ ದೇಹವನ್ನ ಕಳಿಸುತ್ತಾರೆ. ಆಗ ಇದು ಸಹಜ ಸಾವು ಅಲ್ಲ, ಪ್ರೀ ಪ್ಲಾನ್ಡ್​​​ ಮರ್ಡರ್ ಅನ್ನೋದು ಗೊತ್ತಾಗುತ್ತೆ. ಸಾವನ್ನಪ್ಪಿ 8 ದಿನಗಳ ಬಳಿಕ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಅಕ್ಕಪಕ್ಕದವರಿಗೆ ವಾಸನೆ ಬಡಿದಿದೆ. ಅಲ್ಲಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಇಲ್ಲೊಂದು ದೇಹ ಇದೆ ಅಂತ ಗೊತ್ತಾಗಿದೆ.

ಒಟ್ಟಾರೆ ಹಿಂದೆ ಮುಂದೆ ಯಾರೂ ಇಲ್ಲದೆ ಏಕಾಂಗಿ ಜೀವನ ನಡೆಸುತ್ತಿದ್ದ ಗಿರಿಜಾ ನಿವೃತ್ತಿ ಬಳಿಕ ಅದೇ ಹಣದಲ್ಲಿ ಚೆಂದದ ಬದುಕು ಸಾಗಿಸಬಹುದಿತ್ತು. ಆದ್ರೆ ಹಣದ ಆಸೆಗೆ ಬಿದ್ದಿದ್ದ ಶಿಕ್ಷಕಿ ಈ ರೀತಿಯಾಗಿ ಹಣ ಪಡೆದವನಿಂದಲೆ ಹತ್ಯೆಯಾಗಿದ್ದು ವಿಪರ್ಯಾಸವೇ ಸರಿ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ