AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ರಸ್ತೆ ಅಪಘಾತ ಮೂವರ ಸಾವು

ಲಾರಿ-ಕಾರ್ ಮಧ್ಯೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ನಡೆದಿದೆ.

Dharwad News: ರಸ್ತೆ ಅಪಘಾತ ಮೂವರ ಸಾವು
ಧಾರವಾಡ ರಸ್ತೆ ಅಪಘಾತ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 11, 2023 | 10:23 AM

Share

ಧಾರವಾಡ: ಲಾರಿ-ಕಾರ್ ಮಧ್ಯೆ ಅಪಘಾತ (Accident) ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ (Dharwad National Highway) 4 ರ ಹಳಿಯಾಳ (Haliyal) ಸೇತುವೆ ಬಳಿ ನಡೆದಿದೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಚಂದನ್ (28), ಹೊಳೆನರಸಿಪುರದ ಟಿ.ವಿ. ದೀಪು(26), ಹೊಳೆನರಸಿಪುರ ತಾಲೂಕಿನ ಒಡನಹಳ್ಳಿ ಗ್ರಾಮದ ಪುಟ್ಟಣ್ಣ ಮಡಿಕೇರಿ (33) ಮೃತ ದುರ್ದೈವಿಗಳು. ಗಾಯಾಳು ಕಿರಣ್ (28) ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರು ಹಾಸನ ಮತ್ತು ಮೈಸೂರು ಮೂಲದವರು ಎಂದು ತಿಳಿದುಬಂದಿದೆ. ಕಾರು ಹುಬ್ಬಳ್ಳಿಯಿಂದ ಬೆಳಗಾವಿಕಡೆಗೆ ಹೋಗುತ್ತಿತ್ತು. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ‌ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಾರು

ಮಂಗಳೂರು: ಚಾಲಕನ‌ ನಿಯಂತ್ರಣ ತಪ್ಪಿ ಎರ್ಟಿಗಾ ಕಾರು ಹೊಳೆಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ‌ ಓರ್ವ ಮೃತಪಟ್ಟಿದ್ದು ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಹೊಸೂರು ನಿವಾಸಿ ಎಂದು ಗುರುತಿಸಲಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಎರ್ಟಿಗಾ ಕಾರು ಹೊಳೆಗೆ ಉರುಳಿ ಬಿದ್ದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಇದನ್ನೂ ಓದಿ: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಸ್ಪದ ಸಾವು

ದಂಪತಿಗೆ ಕಚ್ಚಿದ ಹಾವು, ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

ಬೆಳಗಾವಿ: ದಂಪತಿಗೆ ಹಾವು ಕಚ್ಚಿ ಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ. ಸಿದ್ದಪ್ಪ ಚಿವಟಗುಂಡಿ(35) ಮೃತ ದುರ್ದೈವಿ. ನಾಗವ್ವಾ ಚಿವಟಗುಂಡಿ(28) ಸ್ಥಿತಿ ಗಂಭೀರ. ದಂಪತಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾನಿಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ.

ದಂಪತಿ ಸೆಕ್ಯುರಿಟಿ ಕೆಲಸಕ್ಕೆಂದು ಏಳು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ತಗಡಿನ ಶೆಡ್​​ನಲ್ಲಿ ಮೂರು ಮಕ್ಕಳೊಂದಿಗೆ ಮಲಗಿದ್ದ ಪತಿ, ಪತ್ನಿಗೆ ಹಾವು ಕಚ್ಚಿದೆ. ಬೆಳಗಾವಿಯ ಜಿಲ್ಲಾಸ್ಪತ್ರೆಯ ಐಸಿಯುವಿನಲ್ಲಿ ನಾಗವ್ವಾಗೆ ಚಿಕಿತ್ಸೆ ಮುಂದುವರೆದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 am, Sun, 11 June 23

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು