Accident: ಕರ್ನಾಟಕದ ಹಲವೆಡೆ ರಸ್ತೆ ಅಪಘಾತ: ಪ್ರತ್ಯೇಕ ಘಟನೆಯಲ್ಲಿ ಪಿಡಿಒ ಸೇರಿ ಒಟ್ಟು 5 ಜನ ದುರ್ಮರಣ
ಇಂದು(ಮೇ.25) ಕೋಲಾರ, ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಒಟ್ಟು 5 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಗಾಯಗೊಂಡ6 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಧಾರವಾಡ: ಟ್ರಾಕ್ಟರ್-ಬೈಕ್ ನಡುವೆ ಅಪಘಾತ(Accident)ವಾಗಿ ಬೈಕ್ ಸವಾರ ಗ್ರಾಮ ಪಂಚಾಯತಿ ಪಿಡಿಒ ಸಾವನ್ನಪ್ಪಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಧಾರವಾಡ(Dharwad) ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರಿನವರಾದ ಮೃತ ಪಿಡಿಓ ಶಿವಾನಂದ ಹಡಪದ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದರು. ದುರಾದೃಷ್ಟವಶಾತ್ ನಿನ್ನೆ(ಮೇ.24) ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಹೊದಲಿ ಗ್ರಾಮದ ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿಕ್ಷಕ ಆಂಜನೇಯಲು (48) ಸಾವು, ಇನ್ನು ಇದೇ ವೇಳೆ ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದ ಬಳಿ ನಡೆದಿದ್ದು, ಲಾರಿ ಚಾಲಕ ಹಾಗೂ ಸಹಾಯಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವದ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ಪ್ರಕರಣಗಳು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಿಂತಿದ್ದ ಬಸ್ಗೆ ಟಿಟಿ ವಾಹನ ಡಿಕ್ಕಿ ಇಬ್ಬರ ಸಾವು
ತುಮಕೂರು: ನಿಂತಿದ್ದ ಬಸ್ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ. ವೀರೇಶ್ (30), ಶಶಿಕಲಾ (75) ಮೃತ ರ್ದುದೈವಿಗಳು. ಇನ್ನು ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ತಿಳಿದು ಬಂದಿದೆ. ಇನ್ನು ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾ ಕುಟುಂಬದವರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಈ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ