AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ; ಒಬ್ಬ ಆರೋಪಿ ಪೊಲೀಸರಿಗೆ ಶರಣು

ಘಟನೆ ಸಂಬಂಧ ಒಬ್ಬ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಮತ್ತಿಬ್ಬರು ಪರಾರಿ ಆಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ; ಒಬ್ಬ ಆರೋಪಿ ಪೊಲೀಸರಿಗೆ ಶರಣು
ರೌಡಿಶೀಟರ್ ಬರ್ಬರ ಹತ್ಯೆ; ಒಬ್ಬ ಆರೋಪಿ ಪೊಲೀಸರಿಗೆ ಶರಣು
Follow us
TV9 Web
| Updated By: ganapathi bhat

Updated on: Mar 11, 2022 | 11:50 AM

ಹುಬ್ಬಳ್ಳಿ: ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಅರವಿಂದನಗರದ ಪಿ & ಟಿ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹಣಕಾಸು ವಿಚಾರಕ್ಕೆ ರೌಡಿಶೀಟರ್ ಅಕ್ಬರ್ ಮುಲ್ಲಾ (42) ಹತ್ಯೆ ನಡೆಸಲಾಗಿದೆ. ಘಟನೆ ಸಂಬಂಧ ಒಬ್ಬ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ, ಮತ್ತಿಬ್ಬರು ಪರಾರಿ ಆಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಸೈಕಲ್ ಕಳ್ಳನ ಹಾವಳಿ

ಕಾರ್, ಬೈಕ್ ಅಷ್ಟೇ ಅಲ್ಲಾ ಸಿಲಿಕಾನ್ ಸಿಟಿಯಲ್ಲಿ ಸೈಕಲ್ ಕಳ್ಳನ ಹಾವಳಿ ಕೂಡ ಜೋರಾಗಿದೆ. ಐಷಾರಾಮಿ ಸೈಕಲ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧಿಸಲಾಗಿದೆ. ಡೆಕತ್ಲಾನ್ ಬೈಸಿಕಲ್ ಸೇರಿಸಂತೆ ಐಷಾರಾಮಿ ಸೈಕಲ್​ಗಳು ಆತನ ಟಾರ್ಗೆಟ್ ಆಗಿದ್ದವು. ಸೈಕಲ್ ಜೊತೆಗೆ ಕೆಲವು ಬೈಕ್ ಹ್ಯಾಂಡ್ ಲಾಕ್ ಮುರಿದು ಕಳ್ಳತನ ನಡೆಸುತ್ತಿದ್ದ. ಸೈಕಲ್ ಕದ್ದು ಹಾವಳಿ ಇಡ್ತಿದ್ದ ಆಸಾಮಿ ರಮೇಶ್ (21) ಎಂಬಾತನನ್ನು ಬಂಧಿಸಲಾಗಿದೆ. ಹುಳಿಮಾವು ಠಾಣೆ ಪೊಲೀಸರಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ.

ಬಂಧಿತನಿಂದ 4.50 ಲಕ್ಷ ಮೌಲ್ಯಸ ಬೈಸಿಕಲ್, 4.40 ಲಕ್ಷ ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ. ಕದ್ದ ಬೈಕ್​ಗಳನ್ನು ಆರ್.ಸಿ ಬುಕ್ ತಡವಾಗಿ ಕೊಡೋದಾಗಿ ಪರಿಚಯಸ್ಥರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಕದ್ದ ಸೈಕಲ್ ಅನ್ನು ಫೇಸ್ ಬುಕ್ ನಲ್ಲಿ ಮಾರಾಟಕ್ಕಿದೆ ಎಂದು ಪೋಸ್ಟ್ ಮಾಡಿದ್ದ ಆರೋಪಿ. ಅದನ್ನು ಫೇಸ್ ಬುಕ್ ನಲ್ಲಿ ಗಮನಿಸಿದ್ದ ಸೈಕಲ್ ಮಾಲೀಕ, ನಂತರ ಹುಳಿಮಾವು‌ ಠಾಣೆಗೆ ಬಂದು ದೂರು ದಾಖಲಿಸಿದ್ದ. ದೂರು ಆಧರಿಸಿ‌ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ವಿಜಯಪುರ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು

ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣದ ವೇಳೆ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ಅವಘಡ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲೇ ಹಾಯ್ದಿದ್ದ ವಿದ್ಯುತ್ ತಂತಿಗಳು ತಾಗಿ, ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಘಟನೆ ಸಂಭವಿಸಿದೆ. ಬಸವಮಬಾಗೇವಾಡಿ ಪಟ್ಟಣದ ಶಿವಾಜಿ ಗಲ್ಲಿ ನಿವಾಸಿ ಚಂದ್ರಕಾಂತ ಗೋಡೆಕಟ್ಟಿ (45) ಮೃತ ಕಾರ್ಮಿಕ. ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ವಿದ್ಯುತ್ ತಂತಿ ತಗುಲಿದ ಕಾರಣ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿದ್ದಾರೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ, ಪುಟ್ಟ ಮಗಳಿಗೂ ಕಿರುಕುಳ; ಆರೋಪಿ ಬಾಬು ಅರೆಸ್ಟ್

ಇದನ್ನೂ ಓದಿ: ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ; ಉಚಿತವಾಗಿ ಕಿಡ್ನಿ ಕಸಿ ಮಾಡಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಪರವಾನಗಿ ನೀಡಿದ ಕರ್ನಾಟಕ ಸರ್ಕಾರ