ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 06, 2024 | 9:48 PM

ಹಿಂದೊಮ್ಮೆ ಗಣಪತಿ ಪೂಜೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂಬ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಸನಾತನವಾದಿಗಳ ವಿರುದ್ಧ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
Follow us on

ಧಾರವಾಡ, ಫೆ.06: ಸನಾತನವಾದಿಗಳ ವಿರುದ್ಧ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ (Sanehalli panditaradhya shivacharya swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ(Dharwad) ದಲ್ಲಿ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಮಾತನಾಡಿದ ಅವರು ‘ ಡಾ.ಎಂ.ಎಂ.ಕಲಬುರ್ಗಿಯನ್ನು ನಾವು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇವೆ. ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸನಾತನವಾದಿಗಳು ಮೊದಲಿನಿಂದಲೂ ಇಂತಹ ಕಿರುಕುಳ ಕೊಡುತ್ತಿದ್ದಾರೆ. ಅದು 12ನೇ ಶತಮಾನದಲ್ಲೂ ಸತ್ಯ, 21ನೇ ಶತಮಾನದಲ್ಲೂ ಸತ್ಯ ಎಂದು ಕಿಡಿಕಾರಿದರು.

ಸನಾತನವಾದಿಗಳು ವ್ಯಕ್ತಿಯನ್ನು ಕೊಲ್ಲಬಹುದು, ವಿಚಾರ ಕೊಲ್ಲಲು ಆಗಲ್ಲ

ಅವರು ವ್ಯಕ್ತಿಯನ್ನು ಕೊಲ್ಲಬಹುದು, ವ್ಯಕ್ತಿಯ ವಿಚಾರವನ್ನು ಎಂದಿಗೂ ಕೊಲ್ಲಲು ಸಾಧ್ಯವಿಲ್ಲ. ಕಲಬುರ್ಗಿ ಎಂಬ ವ್ಯಕ್ತಿ ಹೋಗಿರಬಹುದು. ಆದರೆ, ಅವರ ವಿಚಾರಗಳನ್ನು ಇನ್ನಷ್ಟು ಪ್ರಖರತೆ ಪಡೆದುಕೊಳ್ಳುತ್ತಿವೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯಶ್ರೀ ಹೇಳಿದರು.

ಇತ್ತೀಚೆಗೆ ಗಣಪತಿ ಪೂಜೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿತ್ತು. ಇಷ್ಟೇಲ್ಲ ಆದ ಬಳಿಕ ಪ್ರತಿಕ್ರಿಯಿಸಿದ್ದ ಅವರು ‘ಗಣಪತಿ ನಮ್ಮ ಸಂಸ್ಕೃತಿ ಅಲ್ಲ ಎಂದು ಪುನರುಚ್ಚರಿಸಿದ್ದರು. ಜೊತೆಗೆ ಟೀಕೆ ಮಾಡಿದವರ ವಿರುದ್ಧ ಗುಡುಗಿದ್ದರು.

ಇದನ್ನೂ ಓದಿ:ಗಣಪತಿ ನಮ್ಮ ಸಂಸ್ಕೃತಿ ಅಲ್ಲ, ಮತ್ತೆ ಪುನರುಚ್ಚರಿಸಿ ಟೀಕಾಕಾರರಿಗೆ ಉತ್ತರ ಕೊಟ್ಟ ಸಾಣೇಹಳ್ಳಿ ಸ್ವಾಮೀಜಿ

ನಮ್ಮ ಸಂಸ್ಕೃತಿ ಎಂದರೆ ಲಿಂಗಾಯತ, ಶರಣ ಸಂಸ್ಕೃತಿ. ಕೆಲ ಮಹಾನುಭಾವರು ದೊಡ್ಡ ಲೇಖನ ಬರೆದಿದ್ದಾರೆ. ಈ ರೀತಿ ಹೇಳಿಕೆ ನೀಡಿ ನಿಜಗುಣಾನಂದಶ್ರೀ ರಾಜ್ಯೋತ್ಸವ ಪ್ರಶಸ್ತಿ ಪಡೆದರು ಎಂದು ಬರೆದಿದ್ದಾರೆ. ಪಂಡಿತಾರಾಧ್ಯಶ್ರೀಗೆ ಮೊಟ್ಟ ಮೊದಲ ರಾಜ್ಯೋತ್ಸವ ಪ್ರಶಸ್ತಿ ಬಂದಿದ್ದು ಅವರಿಗೆ ಗೊತ್ತಿಲ್ಲ ಎಂದು ಟೀಕೆಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸನಾತನವಾದಿಗಳ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ