ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಚಾಕುವಿನಿಂದ ಇರಿದು ಮಂಗಳವಾರ (ಜುಲೈ 5) ನಗರದ ಖಾಸಗಿ ಹೊಟೆಲ್ನಲ್ಲಿ ಹತ್ಯೆ ಮಾಡಲಾಗಿದೆ. ಮೃತದೇಹವನ್ನು ಕಿಮ್ಸ್ಗೆ ರವಾನಿಸಲಾಗಿದೆ. ಪ್ರಕರಣ ಹಿನ್ನಲೆ ಗುರೂಜಿಯ ಆಪ್ತ ಮಹಾಂತೇಶ ಶಿರೋಳ್ ಪತ್ನಿ ವನಜಾಕ್ಷಿಯನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಶಂಕಿತ ಹಂತಕರು ಮಹಾಂತೇಶ ಶಿರೋಳ್ ಮತ್ತು ಮಂಜುನಾಥ ದುಮ್ಮವಾಡ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.