AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Poll 2023: ಈ ಬಾರಿಯ ವಿಧಾನಸಭಾ ಚುನಾವಣೆ ಅಖಾಡಕ್ಕೆ ಸರ್ವೋದಯ ಕರ್ನಾಟಕ ಪಕ್ಷ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಎಎಪಿ ಹಾಗೂ ಆಡಳಿತಾರೂಢ ಬಿಜೆಪಿ ಜೊತೆಗೆ ಮತ್ತೊಂದು ಪಕ್ಷ ಸ್ಪರ್ಧೆಗೆ ಮುಂದಾಗಿದೆ.

Karnataka Assembly Poll 2023: ಈ ಬಾರಿಯ ವಿಧಾನಸಭಾ ಚುನಾವಣೆ ಅಖಾಡಕ್ಕೆ ಸರ್ವೋದಯ ಕರ್ನಾಟಕ ಪಕ್ಷ
ಚಾಮರಸ ಮಾಲಿಪಾಟೀಲ್, ಸರ್ವೋದಯ ಕರ್ನಾಟಕ ಪಕ್ಷದ ಸಂಸ್ಥಾಪಕ
TV9 Web
| Edited By: |

Updated on: Feb 07, 2023 | 6:19 PM

Share

ಧಾರವಾಡ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್, ಜೆಡಿಎಸ್ ಹಾಗೂ ಆಡಳಿತಾರೂಢ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿವೆ. ಜೆಡಿಎಸ್​ ಪಂಚರತ್ನಯಾತ್ರೆ ಮಾಡುತ್ತಿದ್ದರೆ, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆಸಿದೆ. ಇನ್ನು ಬಿಜೆಪಿ ಈಗಾಗಲೇ ಜನ ಸಂಕಲ್ಪ ಯಾತ್ರೆ ಮುಗಿಸಿದ್ದು, ಇದೀಗ ವಿಜಯ ಸಂಕಲ್ಪ ಯಾತ್ರೆ ನಡೆಸಲು ತೀರ್ಮಾನಿಸಿದೆ. ಇದರಿಂದ ಚುನಾವಣೆ ಕಣಗಳು ರಂಗೇರಿದೆ. ಇದರ ಮಧ್ಯೆ ಸರ್ವೋದಯ ಕರ್ನಾಟಕ ಪಕ್ಷವೂ ಚುನಾವಣಾ ಅಖಾಡಕ್ಕೆ ಇಳಿಯಲು ತೀರ್ಮಾನಿಸಿದ್ದು, 4 ಜಿಲ್ಲೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಇಂದು(ಫೆಬ್ರವರಿ) ಧಾರವಾಡದಲ್ಲಿ ಮಾತನಾಡಿದ ಸರ್ವೋದಯ ಕರ್ನಾಟಕ ಪಕ್ಷದ ಸಂಸ್ಥಾಪಕ ಚಾಮರಸ ಮಾಲಿಪಾಟೀಲ್, ವಿಧಾನಸಭಾ ಎಲೆಕ್ಷನ್‌ನಲ್ಲಿ ಸರ್ವೋದಯ ಕರ್ನಾಟಕ ಪಕ್ಷ ಸ್ಪರ್ಧೆ ಮಾಡಲಿದೆ. 4 ಜಿಲ್ಲೆಗಳ 5 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮಂಡ್ಯ, ಮೇಲುಕೋಟೆ, ಬೆಳ್ತಂಗಡಿ, ವಿರಾಜಪೇಟೆ, ಬೀಳಗಿ ಸೇರಿದಂತೆ 4 ಜಿಲ್ಲೆಗಳಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧೆಗೆ ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಹಲವಾರು ಸಮಸ್ಯೆಗಳ ಬಗೆಹರಿಸಲು ವಿಫಲವಾಗಿವೆ ಎಂದು ಆರೋಪಿಸಿರುವ ಚಾಮರಸ ಮಾಲಿ ಪಾಟೀಲ್, ಸಮಸ್ಯೆಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯವಹಿಸಿ ಕೇವಲ ಆರೋಪ-ಪ್ರತ್ಯಾರೋಪದಲ್ಲಿ ಮುಳುಗಿವೆ ಎಂದು ರಾಜಕೀಯ ಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಿರ್ಲಕ್ಷ್ಯ ವಹಿಸಿದ ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಪದಲ್ಲಿ ಮುಳುಗಿವೆ. ಇದರಿಂದಾಗಿ ನಿರ್ಲಕ್ಷಕ್ಕೆ ಒಳಗಾಗಿರುವ ರಾಜ್ಯ ಉತ್ತಮ ಆಡಳಿತ ಕೊಡುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷ ಸ್ಪರ್ಧೆ ಮಾಡಲಿದೆ ಎಂದರು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್