ಮುಂಬರುವ ಶೈಕ್ಷಣಿಕ ವರ್ಷದಿಂದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸೆಲ್ಪ್ ಡಿಫೆನ್ಸ್ ತರಬೇತಿ

ಮಹಿಳೆಯರಿಗೆ ಸ್ವಯಂ ರಕ್ಷಣೆ ಅತ್ಯಗತ್ಯ. ಇತ್ತೀಚಿನ ದಿನಗಳಲ್ಲಂತೂ ಇದು ಅತಿ ಅವಶ್ಯಕವೆನಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಇಂಥದ್ದೊಂದು ತರಬೇತಿಯನ್ನು ನೀಡಲು ನಿರ್ಧರಿಸಿದೆ. ಈ ಬಗ್ಗೆ ವಿ. ರಶ್ಮಿ ಮಹೇಶ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ಮುಂಬರುವ ಶೈಕ್ಷಣಿಕ ವರ್ಷದಿಂದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸೆಲ್ಪ್ ಡಿಫೆನ್ಸ್ ತರಬೇತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 23, 2021 | 3:28 PM

ಧಾರವಾಡ: ಸಂಜೆಯಾದರೆ ಯುವತಿಯರು ಹೊರಗಡೆ ಹೋಗಲು ಭಯಪಡುವಂಥ ವಾತಾವರಣ ಹಲವಾರು ಕಡೆಗಳಲ್ಲಿ ಇದೆ. ಅದರಲ್ಲೂ ದೊಡ್ಡ ದೊಡ್ಡ ನಗರಗಳಲ್ಲಂತೂ ಸಮಸ್ಯೆ ಹೇಳತೀರದ್ದು. ಮನೆಯಿಂದ ಹೊರಗೆ ಹೋಗಿರುವ ಹುಡುಗಿಯರು, ಯುವತಿಯರು ಸುರಕ್ಷಿತವಾಗಿ ಮರಳಿ ಮನೆಗೆ ಬರುತ್ತಾರೆ ಅನ್ನುವ ಹಾಗಿಲ್ಲ. ಇಂಥ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಬರುವ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿಗೆ ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಈ ಸೆಲ್ಫ್ ಡಿಫೆನ್ಸ್ ತರಬೇತಿ ರಾಜ್ಯದ ಬಿಸಿಎಂ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರಿಗಾಗಿ ಆರಂಭಿಸಲಾಗಿದೆ. ಈ ಬಗ್ಗೆ ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ ಮಾಹಿತಿಯನ್ನು ನೀಡಿದ್ದಾರೆ.

ಮಹಿಳೆಯರಿಗೆ ಸ್ವಯಂ ರಕ್ಷಣೆ ಅತ್ಯಗತ್ಯ. ಇತ್ತೀಚಿನ ದಿನಗಳಲ್ಲಂತೂ ಇದು ಅತಿ ಅವಶ್ಯಕವೆನಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಇಂಥದ್ದೊಂದು ತರಬೇತಿಯನ್ನು ನೀಡಲು ನಿರ್ಧರಿಸಿದೆ. ಈ ಬಗ್ಗೆ ವಿ. ರಶ್ಮಿ ಮಹೇಶ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ವಿದ್ಯಾರ್ಥಿ ವಸತಿನಿಲಯಗಳಲ್ಲಿ ಆಹಾರ ವಿತರಣೆ ಸೇರಿ ಎಲ್ಲದರಲ್ಲೂ ಪಾರದರ್ಶಕತೆ ಇರಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ, ಆಹಾರ ವಿತರಣೆ, ಅಗತ್ಯ ವಸ್ತುಗಳ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕೆಂದು ಕೂಡ ಅವರು ಸೂಚನೆ ನೀಡಿದರು. ವಸತಿ ನಿಲಯಗಳಿಗೆ ದಾಖಲಾಗುವ ವಿದ್ಯಾರ್ಥಿಗಳು ಹೆಮ್ಮೆ ಪಡುವಂತೆ ಮತ್ತು ಸಾರ್ವಜನಿಕರು ವಸತಿ ನಿಲಯಗಳ ಬಗ್ಗೆ ಅಭಿಮಾನ, ವಿಶ್ವಾಸ ವ್ಯಕ್ತಪಡಿಸುವಂತೆ ಮಾಡಬೇಕು. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಯೊಂದರಲ್ಲೂ ಪಾರದರ್ಶಕತೆ ಕಾಪಾಡಬೇಕೆಂದು ಸೂಚಿಸಿದರು. ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿದಿನ ಪಡಿತರ ಧಾನ್ಯ ತೆಗೆದುಕೊಳ್ಳಬೇಕು ಮತ್ತು ಆಹಾರ ಹಂಚಿಕೆ ಮಾಡಬೇಕು. ವಿದ್ಯಾರ್ಥಿಗಳ ಬೇಕು-ಬೇಡಗಳ ಕುರಿತು ಆಪ್ತ ಸಮಾಲೋಚನೆ ಮಾಡಬೇಕು ಅಂತಾ ಸೂಚಿಸಿದರು. ಜಿಲ್ಲೆಯ ಇತರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಸಿಇಓ ಭೇಟಿ ನೀಡಿದಾಗ ಬಿಸಿಎಂ ಹಾಸ್ಟೆಲ್, ಇಲಾಖೆಯ ಕಾಮಗಾರಿಗಳು ನಡೆದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಬಿಸಿಎಂ ಜಿಲ್ಲಾ ಅಧಿಕಾರಿ ಮತ್ತು ತಾಲೂಕಾ ಅಧಿಕಾರಿಗಳು ನಿರಂತರ ಭೇಟಿ ನೀಡಿ, ತಪಾಸಣೆಗೆ ಒಳಪಡಿಸಬೇಕೆಂದು ಅವರು ಸೂಚಿಸಿದರು.

ಖರೀದಿಸುವ ವಸ್ತುಗಳ ಮಾಹಿತಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಿ ವಸತಿ ನಿಲಯಗಳಿಗೆ ಪ್ರತಿ ವರ್ಷ ಅನೇಕ ವಸ್ತುಗಳನ್ನು ಖರೀದಿಸಲಾಗುತ್ತದೆ. ಹೀಗೆ ಖರೀದಿಸುವ ಆಹಾರ ಪದಾರ್ಥ, ಬೆಡ್, ಕಾಟ್, ತಟ್ಟೆ, ಲೋಟ ಇತ್ಯಾದಿ ಸೇರಿದಂತೆ ಖರೀದಿಸುವ ವಸ್ತುಗಳ ಎಲ್ಲ ಮಾಹಿತಿಯನ್ನು ಸಾರ್ವಜನಿಕವಾಗಿ ಕಾಣುವಂತೆ ಆಯಾ ವಸತಿ ನಿಲಯಗಳಲ್ಲಿ ಪ್ರದರ್ಶಿಸಬೇಕು. ವಿದ್ಯಾರ್ಥಿಗಳ ಹಾಜರಾತಿಗೆ ಈಗಾಗಲೇ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಸಿಬ್ಬಂದಿಗಳ ಹಾಜರಾತಿಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಕಳಪೆ ಗುಣಮಟ್ಟದ ಆಹಾರ ಪೂರೈಕೆ, ಸಾಮಗ್ರಿ ಖರೀದಿ ಮತ್ತು ವಿದ್ಯಾರ್ಥಿ ಸ್ನೇಹಿಯಾಗಿ ನಡುವಳಿಕೆ ತೋರದ ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲಾಗುವುದು, ಅನಧಿಕೃತ ಗೈರು ಉಳಿಯುವುದು ಸೇರಿದಂತೆ ಕಾನೂನು ಬಾಹಿರವಾಗಿ ವರ್ತಿಸುವವರ ಬಗ್ಗೆ ಜಿಲ್ಲಾ ಅಧಿಕಾರಿಗಳು ವರದಿ ನೀಡಬೇಕೆಂದು ಅವರು ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಪಾರವಾದ ಅನುದಾನ ನೀಡುತ್ತಿದೆ. ಅದರ ಸಮರ್ಪಕ ಬಳಕೆ ಮೂಲಕ ನಿಗಧಿತ ಅಭಿವೃದ್ಧಿ ಸಾಧಿಸುವುದು ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯ ಜವಾಬ್ದಾರಿ ಆಗಿದೆ ಎಂದು ವಿ. ರಶ್ಮಿ ಮಹೇಶ ಹೇಳಿದರು.

ವಿದ್ಯಾರ್ಥಿಗಳ ಪ್ರವೇಶದ ಮಿತಿಯನ್ನು ಹೆಚ್ಚಿಸಲು ಮನವಿ ಈ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿ, ಧಾರವಾಡ ಶೈಕ್ಷಣಿಕ ಜಿಲ್ಲೆ ಆಗಿರುವುದರಿಂದ ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ಅವರೆಲ್ಲರಿಗೂ ಅವಕಾಶ ನೀಡಲು ವಿದ್ಯಾರ್ಥಿಗಳ ಪ್ರವೇಶದ ಸಂಖ್ಯೆಯ ಮಿತಿಯನ್ನು ಹೆಚ್ಚಿಸಬೇಕು ಅಂತಾ ಮನವಿ ಮಾಡಿದರು. ಅನೇಕ ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಇವುಗಳಿಗೆ ಈಗಾಗಲೇ ನಿವೇಶನ ನೀಡಲಾಗಿದೆ. ಅನುದಾನ ನೀಡಿದರೆ ಸ್ವಂತ ಕಟ್ಟಡ ಮಾಡಲಾಗುವುದು ಎಂದರು. ಇಲಾಖೆ ಅನುದಾನದಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ 66 ಸಮುದಾಯ ಭವನ ನಿರ್ಮಿಸಲು ಅನುಮತಿಸಲಾಗಿದೆ. ಅದರಲ್ಲಿ 16 ಕಟ್ಟಡ ಮುಕ್ತಾಯವಾಗಿದ್ದು, 49 ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿವೆ. ಒಂದು ಸಮುದಾಯ ಭವನ ನಿರ್ಮಾಣದಲ್ಲಿ ಹಣ ದುರ್ಬಳಕೆ ಕಂಡು ಬಂದಿದ್ದರಿಂದ ಸಂಬಂಧಿಸಿದವರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. ಇಲಾಖೆ ಅನುದಾನ ಮತ್ತು ಆಶಯ ಸದ್ಬಳಕೆ ಆಗುವಂತೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಮಾತನಾಡಿ, ಬಿಸಿಎಂ ಹಾಸ್ಟೆಲ್‍ಗಳಿಗೆ ತಾಲೂಕಾ ಮಟ್ಟದ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ವಸತಿ ನಿಲಯಗಳಿಗೆ ಕಾಂಪೌಂಡ್ ನಿರ್ಮಾಣ, ನ್ಯೂಟ್ರಿಶಿಯನ್ ಗಾರ್ಡನ್ ಸೇರಿದಂತೆ ಅನೇಕ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಲ್ಲಿ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಅಗತ್ಯಕ್ಕನುಗುಣವಾಗಿ ಹೊಸ ಸಾಮಗ್ರಿ ಖರೀದಿಗೆ ಅನುಮತಿಸಲಾಗುತ್ತಿದೆ. ಆರ್ಥಿಕ ಮಿತವ್ಯಯ ಹಾಗೂ ಲಭ್ಯವಿರುವುದನ್ನು ಸಮರ್ಪಕ ಬಳಕೆ ಮಾಡಲು ಆದ್ಯತೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವರದಿ: ನರಸಿಂಹಮೂರ್ತಿ ಪ್ಯಾಟಿ

ಇದನ್ನೂ ಓದಿ: IND vs SA: ಗುರು ದ್ರಾವಿಡ್ ಜೊತೆ ಟೀಂ ಇಂಡಿಯಾ ಕ್ರಿಕೆಟಿಗರ ಮೋಜು- ಮಸ್ತಿ; ಕೊಹ್ಲಿ ಮಿಸ್ಸಿಂಗ್

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ