ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ

Selfie Madness: ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ.

ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ
ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 17, 2022 | 8:07 PM

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ (Selfie Madness) ಯುವಕನೊಬ್ಬ ‌ನೀರು ಪಾಲಾದ (Watery Grave) ದುರಂತ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ (Neerasagara Reservoir) ಈ ಘಟನೆ ನಡೆದಿದೆ. ಕಿರಣ (22) ನೀರಲ್ಲಿ ಕೊಚ್ಚಿ ಹೋದ ಯುವಕ.

ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ: ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car accident: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಇಬ್ಬರ ಸಾವು

ಆನೇಕಲ್: ಮರಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅನೇಕಲ್‌ ತಾಲೂಕಿನ ಸೋಲೂರು ಗೇಟ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಸಿಲುಕಿದ್ದ ಐವರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಬಳಿಕ ಅನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಾರು ಸೋಲೂರು ಗೇಟ್ ಬಳಿಯಿಂದ ಬೆಂಗಳೂರು ಕಡೆ ಹೊರಟಿತ್ತು.

ಡಿವೈಡರ್​ಗೆ ಬೈಕ್ ಡಿಕ್ಕಿ: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಉಡುಪಿ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19), ಆದಿತ್ಯರೆಡ್ಡಿ(18) ಸೇರಿ ಮಣಿಪಾಲ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಇಬ್ಬರು ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರು ಹರಿಯುವುದನ್ನು ನೋಡುತ್ತಿದ್ದ ಆಟೋ ಚಾಲಕ ಕಾಲುವೆಯಲ್ಲಿ ಕೊಚ್ಚಿ ಹೋದ್ರು

ಇನ್ನು ಮತ್ತೊಂದು ಕಡೆ ತುಮಕೂರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ರಕ್ಷಣಾ ಕಾರ್ಯದ ಬಗ್ಗೆ ಪರಿಶೀಲಿಸಿದ್ದಾರೆ. ಎನ್‌ಡಿಆರ್‌ಎಫ್‌ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಿಂಗ್‌ ರಸ್ತೆಯ ಗುಬ್ಬಿ ಗೇಟ್‌ನ ದಾನ ಪ್ಯಾಲೇಸ್‌ ಬಳಿ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದರು. ಮಳೆಯಿಂದ ಕಾಲುವೆಯಲ್ಲಿ ಜೋರಾಗಿ ನೀರು ಹರಿಯುತ್ತಿತ್ತು. ನೀರು ಹರಿಯುವುದನ್ನ ನೋಡ್ತಿದ್ದಾಗ ಚಾಲಕ ಕೊಚ್ಚಿಹೋಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಬಳಿ ಅಪಘಾತ

ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಅಪಘಾತವಾಗಿದೆ. ಹೊಸೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಡಿಕ್ಕಿ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಸಿಗ್ನಲ್ ರೆಡ್ ಆಗಿದ್ರೂ ಕಾರು ಚಾಲಕ ಜಂಪ್ ಮಾಡಿದ್ದಾನೆ. ಕಾರು ತೆರಳಿದ್ದನ್ನು ಗಮನಿಸಿ ಹಿಂದಿನಿಂದ ಲಾರಿ ಕೂಡ ಮುನ್ನುಗ್ಗಿತ್ತು. ಕಾರು ಸಡನ್ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.

Published On - 7:47 pm, Sun, 17 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ