Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು

ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವುದು ತಿಳಿದು ಬಂದಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.

Chennaveera Kanavi: ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ, ಮತ್ತೆ ಶ್ವಾಸಕೋಶದಲ್ಲಿ ಹೆಚ್ಚಾದ ಸೋಂಕು
ನಾಡೋಜ ಚೆನ್ನವೀರ ಕಣವಿ
Follow us
| Updated By: ಆಯೇಷಾ ಬಾನು

Updated on: Feb 07, 2022 | 2:43 PM

ಧಾರವಾಡ: ನಾಡೋಜ ಚೆನ್ನವೀರ ಕಣವಿ(Chennaveera Kanavi) ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಬಿಗಡಾಯಿಸಿರುವುದು ತಿಳಿದು ಬಂದಿದೆ. ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಣವಿಯವರಿಗೆ ಮತ್ತೆ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದೆ. ಚೆನ್ನವೀರ ಕಣವಿ ಜ.14ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿದ್ರು.

ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 3-4 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದರು.

ಇದನ್ನೂ ಓದಿ: ವಿಳಂಬವಾಗಬಹುದು ‘ರಾಧೆ ಶ್ಯಾಮ್​’ ಒಟಿಟಿ ರಿಲೀಸ್​; ಇದಕ್ಕಿದೆ ಮಹತ್ವದ ಕಾರಣ

ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ