AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಜೈಲಿನಲ್ಲಿ ಫಿನಾಯಿಲ್ ಕುಡಿದ ಕೈದಿ; ಪೊಲೀಸ್ ಠಾಣೆ ಆವರಣದಲ್ಲೇ ವಿಷ ಸೇವಿಸಿದ ಮಹಿಳೆ

ಪ್ರತ್ಯೇಕ ಘಟನೆಗಳು: ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೂಲಸೌಕರ್ಯದ ಕೊರತೆ ಮತ್ತು ಅವ್ಯವಸ್ಥೆ ಖಂಡಿಸಿ ಕೈದಿಗಳ ಪ್ರತಿಭಟನೆಗೆ ಅಧಿಕಾರಿಗಳು ಕ್ಯಾರೆ ಎನ್ನದಿದ್ದಾಗ ಓರ್ವ ಕೈದಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮತ್ತೊಂದೆಡೆ ಕಲಬುರಗಿ ಜಿಲ್ಲೆಯ ನೆಲೋಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಕ್ಕೆ ಬೇಸತ್ತು ಮಹಿಳೆ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಪ್ರತ್ಯೇಕ ಘಟನೆ: ಜೈಲಿನಲ್ಲಿ ಫಿನಾಯಿಲ್ ಕುಡಿದ ಕೈದಿ; ಪೊಲೀಸ್ ಠಾಣೆ ಆವರಣದಲ್ಲೇ ವಿಷ ಸೇವಿಸಿದ ಮಹಿಳೆ
ಆತ್ಮಹತ್ಯೆಗೆ ಯತ್ನಿಸಿದ ಕೈದಿImage Credit source: tv9 kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 05, 2026 | 5:35 PM

Share

ಧಾರವಾಡ, ಸೆಪ್ಟೆಂಬರ್​ 05: ಜೈಲಿನ ಅವ್ಯವಸ್ಥೆ ಖಂಡಿಸಿ ಕೈದಿಗಳಿಂದ ಪ್ರತಿಭಟನೆ ಮಾಡಲಾಗಿದೆ.  ಪ್ರತಿಭಟನೆಗೆ ಜೈಲಧಿಕಾರಿಗಳಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಓರ್ವ ಕೈದಿ ಫಿನಾಯಿಲ್​ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮಹಾರಾಷ್ಟ್ರದ ಮೀರಜ್​​​ ಮೂಲದ ಮಹೇಶ್​ ಆತ್ಮಹತ್ಯೆಗೆ ಯತ್ನಿಸಿದ ಕೈದಿ. ಅಸ್ವಸ್ಥಗೊಂಡಿದ್ದ ಮಹೇಶ್​​ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ನಡೆದಿದ್ದೇನು?

ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕನಿಷ್ಠ ಮೂಲಸೌಕರ್ಯಗಳೂ ಸಿಗದೆ ಕೈದಿಗಳು ನರಕಯಾತನೆ ಅನುಭವಿಸುತ್ತಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸಿದ್ದರು. ಕೈದಿಗಳ ಈ ಪ್ರತಿಭಟನೆಗೆ ಜೈಲಧಿಕಾರಿಗಳು ಸ್ಪಂದಿಸಿಲ್ಲ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕೈದಿ ಮಹೇಶ್​ ಜೈಲಿನಲ್ಲಿ ಫಿನಾಯಿಲ್​ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗಾವಣೆ, ಟಿವಿ9 ವರದಿ ಬೆನ್ನಲ್ಲೇ ಕ್ರಮ

ಕೊಲೆ ಪ್ರಕರಣವೊಂದರಲ್ಲಿ ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿರುವ ಮಹೇಶ್ ಫಿನಾಯಿಲ್​​ ಕುಡಿದಿದ್ದ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನು ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LIVE TV

ನೆಲೋಗಿ ಪೊಲೀಸ್ ಠಾಣೆ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ

ಇತ್ತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯಲ್ಲಿ ಖಾಕಿ ಪಡೆಯ ಬೇಜವಾಬ್ದಾರಿತನಕ್ಕೆ ಅಮಾಯಕ ಮಹಿಳೆಯೊಬ್ಬರು ಆತ್ಮಹತ್ಯೆಗೆ ಮುಂದಾದ ಘಟನೆ ನಡೆದಿದೆ.  ಯಾತನೂರು ಗ್ರಾಮದ ನಿವಾಸಿ ರೇವೂಬಾಯಿ ಎಂಬ ಮಹಿಳೆಯ ಮೇಲೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮದ ಕೆಲ ವ್ಯಕ್ತಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ: ‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

ತನಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಿ, ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಣ್ಣೀರಿಡುತ್ತಾ ನೆಲೋಗಿ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸರು ರಕ್ಷಣೆ ಕೊಡುವ ಬದಲು ಸತಾಯಿಸಿದ್ದಾರೆ. ಹಲ್ಲೆ ನಡೆದು ಗಂಭೀರ ಗಾಯಗಳಾಗಿದ್ದರೂ ಎಫ್‌ಐಆರ್ ದಾಖಲಿಸಲು ಪೊಲೀಸರು ದಿನಗಟ್ಟಲೆ ವಿಳಂಬ ಮಾಡಿದ್ದಾರೆ.

ಪೊಲೀಸರ ನಡೆ ವಿರುದ್ಧ ಕುಟುಂಬಸ್ಥರು ಆಕ್ರೋಶ

ರಕ್ಷಣೆ ನೀಡಬೇಕಾದ ಕಾನೂನಿನ ರಕ್ಷಕರೇ ಕೈಬಿಟ್ಟಾಗ ದಿಕ್ಕುತೋಚದೆ, ತೀವ್ರ ಆಘಾತ ಹಾಗೂ ನೋವಿಗೆ ಒಳಗಾದ ರೇವೂಬಾಯಿ ಬೇರೆ ದಾರಿ ಕಾಣದೆ ಪೊಲೀಸ್ ಠಾಣೆಯ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥ ರೇವೂಬಾಯಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರ ನಡೆ ವಿರುದ್ಧ ರೇವೂಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಸಿಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ