ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ. ನಾನು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿ ಕೂಡ ಅಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನನ್ನನ್ನು ಕರೆದಿಲ್ಲ. ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ರಿಂದಲೂ ಆಹ್ವಾನ ಬಂದಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡ, ಆಗಸ್ಟ್.28: ಮಾಜಿ ಸಚಿವಶಂಕರ ಪಾಟೀಲ ಮುನೇನಕೊಪ್ಪ(Shankar Patil Munenakoppa) ಹಾಗೂ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರವರು(SI Chikkanagoudar) ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪೋಟಕ ಹೇಳಿಕೆ ನೀಡಿದ್ದರು. ಸದ್ಯ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್ ಯಾರು ಕೂಡ ನನಗೆ ಕಾಂಗ್ರೆಸ್ ಪಕ್ಷಕ್ಕೆ ಕರೆದಿಲ್ಲ. ನಾನು ಕಾಂಗ್ರೆಸ್ ಹೋಗಬೇಕಾ ಅನ್ನೋದು ನನ್ನ ಮನಸ್ಸಿನಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ. ನಾನು ಲೋಕಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿ ಕೂಡ ಅಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನನ್ನನ್ನು ಕರೆದಿಲ್ಲ. ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ರಿಂದಲೂ ಆಹ್ವಾನ ಬಂದಿಲ್ಲ. ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರಿಂದಲೂ ಆಹ್ವಾನ ಬಂದಿಲ್ಲ. ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿರುವುದು ಬೇಸರವಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
ಸದ್ಯಕ್ಕೆ ನಾನು ಭಾರತೀಯ ಜನತಾ ಪಕ್ಷದಲ್ಲೇ ಮುಂದುವರಿಯುವೆ. ನಮ್ಮ ನಾಯಕರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕರು ನನಗೆ ಜವಾಬ್ದಾರಿ ನೀಡಿದ್ದರು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುವೆ. ಒಂದು ವೇಳೆ ಬೇರೆ ಪಕ್ಷಕ್ಕೆ ಹೋಗುವುದಾದರೆ ನಿಮಗೆ ಹೇಳುತ್ತೇನೆ. ಲೋಕಸಭಾ ಚುನಾವಣೆ ವಿಚಾರವಾಗಿ ಮುಂದಿನ ದಿನಗಳಲ್ಲಿ ಚರ್ಚೆ ಮಾಡುವೆ. 2024ರ ಜನವರಿಯಲ್ಲಿ ನನ್ನ ರಾಜಕೀಯ ನಿರ್ಧಾರ ಕೈಗೊಳ್ಳುವೆ ಎಂದರು.
ಇದನ್ನೂ ಓದಿ: ಯಾವ ಶಾಸಕರೂ ಜೆಡಿಎಸ್ ಬಿಟ್ಟು ಹೋಗುವುದಿಲ್ಲ; ಹೆಚ್ಡಿ ದೇವೇಗೌಡ ಸ್ಪಷ್ಟನೆ
ಕಾಂಗ್ರೆಸ್ ಸೇರುವ ಬಗ್ಗೆ ನಿಲುವು ಸ್ಪಷ್ಟ ಪಡಿಸಿದ ಎಸ್.ಟಿ.ಸೋಮಶೇಖರ್
ಕಾಂಗ್ರೆಸ್ನ ಗೃಹಲಕ್ಷ್ಮೀ ಯೋಜನೆ ಸಂಬಂಧ ಬಿಜೆಪಿ ಶಾಸಕ S.T.ಸೋಮಶೇಖರ್ ಸಭೆಯಲ್ಲಿ ಭಾಗಿಯಾದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕನಾಗಿ ನನ್ನ ಕೆಲಸ ಮಾಡ್ತಿದ್ದೇನೆ, ಕ್ಷೇತ್ರದ ಜನರ ಸೇವೆ ಮುಖ್ಯ. ಸರ್ಕಾರದ ಯೋಜನೆ ನನ್ನ ಕ್ಷೇತ್ರದ ಜನರಿಗೆ ಸಿಗದಂತಾಗಬಾರದು ಎಂದರು.
ಇನ್ನು ಇದೇ ವೇಳೆ ಕಾಂಗ್ರೆಸ್ ಸೇರುವ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬಿಜೆಪಿ ಬಿಡುವ ಬಗ್ಗೆ ಯಾರ ಜೊತೆಗೂ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ರಾಜಕೀಯ ಮಾತಾಡಿಲ್ಲ. ನನ್ನ ಬೆಂಬಲಿಗರಷ್ಟೇ ಅಲ್ಲ, ಎಲ್ಲಾ ಕ್ಷೇತ್ರಗಳಿಂದಲೂ ಹೋಗಿದ್ದಾರೆ. BBMP ಚುನಾವಣೆ ದೃಷ್ಟಿಯಿಂದ ಕೆಲವರು ಕಾಂಗ್ರೆಸ್‌ಗೆ ಹೋಗಿದ್ದಾರೆ. ದುಡುಕಬೇಡ ಅಂತಾ ಬಿ.ಎಸ್.ಯಡಿಯೂರಪ್ಪ ನನಗೆ ಹೇಳಿದ್ದಾರೆ. ನವದೆಹಲಿಯ ಯಾವ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ