Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಶ್ರೀರಾಮಸೇನೆಯಿಂದ 186 ಕಾರ್ಯಕರ್ತರಿಗೆ ಗನ್ ತರಬೇತಿ

ಶ್ರೀರಾಮಸೇನೆಯಿಂದ ಕಾರ್ಯಕರ್ತರಿಗೆ ಗನ್ ಟ್ರೈನಿಂಗ್ ನೀಡಲಾಗಿದೆ. ಗನ್ ಜೊತೆಗೆ ವಿವಿಧ ಕಠಿಣ ತರಬೇತಿ ಕೂಡ ನೀಡಲಾಗಿದೆ. ರಾಜ್ಯದ 186 ಯುವಕರಿಗೆ ಗನ್ ಟ್ರೈನಿಂಗ್ ನೀಡಲಾಗಿದ್ದು, ಈ ಬಗ್ಗೆ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸ್ಪಷ್ಟನೆ ನೀಡಿದ್ದಾರೆ. ಅದು ಸ್ವರಕ್ಷಣೆಗಾಗಿ ನೀಡಲಾದ ಏರ್​ಗನ್ ಟ್ರೈನಿಂಗ್ ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಶ್ರೀರಾಮಸೇನೆಯಿಂದ 186 ಕಾರ್ಯಕರ್ತರಿಗೆ ಗನ್ ತರಬೇತಿ
Gun Training
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಸುಷ್ಮಾ ಚಕ್ರೆ

Updated on: Dec 30, 2024 | 10:18 PM

ಧಾರವಾಡ: ತನ್ನ ಕಾರ್ಯಕರ್ತರಿಗೆ ಗನ್ ತರಬೇತಿಯನ್ನು ಶ್ರೀರಾಮ ಸೇನೆ ನೀಡಿದೆ. 186 ಯುವಕರಿಗೆ ಶ್ರೀರಾಮ ಸೇನೆಯಿಂದ ಗನ್ ಟ್ರೈನಿಂಗ್ ನೀಡಲಾಗಿದೆ. ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ನೇತೃತ್ವದಲ್ಲಿ ಈ ತರಬೇತಿ ನಡೆದಿದೆ. ಈ ಗನ್​​​ ತರಬೇತಿ ಕುರಿತು ಗಂಗಾಧರ ಕುಲಕರ್ಣಿ ಸ್ಪಷ್ಟನೆ ನೀಡಿದ್ದು, ಏರ್‌ಗನ್ ಮೂಲಕ ಸ್ವರಕ್ಷಣೆ ತರಬೇತಿ ನೀಡಿದ್ದೇವೆ. ಪ್ರತಿವರ್ಷ ಆಯ್ದ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ ಎಂದಿದ್ದಾರೆ.

6 ದಿನಗಳ ತರಬೇತಿ ಕ್ಯಾಂಪ್​​​ ಇದಾಗಿದೆ. ದಂಡ, ತಲ್ವಾರ್, ಕರಾಟೆ, ಆಪ್ಟಿಕಲ್ಸ್, ಏರಗನ್ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ದಾಳಿಯಾಗುತ್ತಿದೆ. ಅದಕ್ಕೆ ತಕ್ಕ ಉತ್ತರ ಕೊಡಲು ಈ ತರಬೇತಿ ಕ್ಯಾಂಪ್ ಆಯೋಜಿಸಲಾಗಿದೆ. ಈ ವರ್ಷದ ಕ್ಯಾಂಪ್ ಅತ್ಯಂತ ಯಶಸ್ವಿಯಾಗಿದೆ ಎಂದು ಧಾರವಾಡ ನಗರದಲ್ಲಿ ಗಂಗಾಧರ ಕುಲಕರ್ಣಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆಗೆ ಕೊಲೆ ಬೆದರಿಕೆ, ಮುಖಂಡರ ಫೇಸ್ಬುಕ್ ಖಾತೆಗಳು ಬಂದ್

ಮುಂದಿನ ಸವಾಲು ಎದುರಿಸಲು ಯುವಕರನ್ನು ಸಜ್ಜು ಮಾಡಿದ್ದೇವೆ. ಹಿಂದೆ ಗದಗ, ಹಾವೇರಿ, ಸಾಗರದಲ್ಲಿಯೂ ತರಬೇತಿ ನೀಡಲಾಗಿತ್ತು. ಈ ಸಲ ಬಾಗಲಕೋಟೆಯಲ್ಲಿ ತರಬೇತಿ ನೀಡಲಾಗಿದೆ. ಇಡೀ ರಾಜ್ಯದಿಂದ ಪ್ರಶಿಕ್ಷಾರ್ಥಿಗಳು ಬಂದಿದ್ದರು. ತಾವು ಕಲಿತಿದ್ದನ್ನು ಅವರೆಲ್ಲ ತಮ್ಮ ಜಿಲ್ಲೆಯಲ್ಲಿ ಕಲಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನವೂ ಹುಬ್ಬಳ್ಳಿಯಲ್ಲಿ ವಿವಾದ: ಹೆಚ್ಎಸ್ಎಫ್ ಬೋರ್ಡ್ ಹಾಕಿ ಧ್ವಜಾರೋಹಣ, ಶ್ರೀರಾಮಸೇನೆ ದೂರು

ಹಾಗೇ, ಶ್ರೀರಾಮಸೇನೆಯಿಂದ ಯುವಕರಿಗೆ ವ್ಯಕ್ತಿತ್ವ ವಿಕಸನ ಅಭ್ಯಾಸ ವರ್ಗ ತರಬೇತಿ ನೀಡಲಾಗಿದೆ. ಸೇನಾ ತರಬೇತಿ ಮಾದರಿಯಲ್ಲಿ ಯುವಕರಿಗೆ ತರಬೇತಿ ನೀಡಲಾಗಿದೆ. ದಂಡ ಪ್ರಯೋಗ, ನಕಲಿ ಗನ್ ಮೂಲಕ ಗನ್ ಟ್ರೈನಿಂಗ್, ಕರಾಟೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 6 ದಿನಗಳ ಕಾಲ ಶಿಬಿರ ನಡೆದಿದೆ. ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದ ಗುಡ್ಡದಲ್ಲಿ ತರಬೇತಿ ಶಿಬಿರ ನಡೆಸಲಾಗಿದೆ. ವ್ಯಕ್ತಿತ್ವ ವಿಕಸನ ಹಾಗೂ ಸ್ವಸುರಕ್ಷಾ ಶಾರೀರಿಕ ತರಬೇತಿ ನೀಡಲಾಗಿದೆ.

ಸ್ವಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಲಾಗಿದೆ. ಮುಳ್ಳು ಕಂಟಿಯ ಗುಂಡಿಯಲ್ಲಿ ಹಾದುಹೋಗುವುದು, ಸಂಧಿಗ್ದ ಸ್ಥಳಗಳಲ್ಲಿ ಪಾರಾಗುವುದು, ಬಂದೂಕು ಬಳಕೆ, ಟಾರ್ಗೆಟ್ ಸೆಟ್ ಮಾಡಿ ಗುರಿ ಇಟ್ಟು ಹೊಡೆಯುವ ತರಬೇತಿಯನ್ನೂ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್