AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಎಚ್​ಕೆ ಪಾಟೀಲ್ ಪೊಲಿಟಿಕಲಿ ಔಟ್ ಡೇಟೆಡ್, 2 ತಿಂಗಳಲ್ಲಿ ಕಳಸಾ ಬಂಡೂರಿ ಯೋಜನೆಗೆ ಶಂಕುಸ್ಥಾಪನೆ -ಪ್ರಲ್ಹಾದ್ ಜೋಶಿ ಸ್ಪಷ್ಟನೆ

Pralhad Joshi: 65 ಎಕರೆ ಮಾತ್ರ ಅರಣ್ಯ ಬೇಕಾಗಿರುವುದರಿಂದ ರಾಜ್ಯ ಸರ್ಕಾರವೇ ಫಾರೆಸ್ಟ್ ಕ್ಲಿಯರೆನ್ಸ್ ಕೊಡಬಹುದಾಗಿದೆ. ಫಾರೆಸ್ಟ್ ಕ್ಲಿಯರೆನ್ಸ್ ಗಾಗಿ ಕೇಂದ್ರ ಸರ್ಕಾರ ಬಳಿ ಹೋಗುವ ಅಗತ್ಯವಿಲ್ಲ ಎಂದು ತಜ್ಞರು ಖಚಿತವಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ, ಎಚ್​ಕೆ ಪಾಟೀಲ್ ಪೊಲಿಟಿಕಲಿ ಔಟ್ ಡೇಟೆಡ್, 2 ತಿಂಗಳಲ್ಲಿ ಕಳಸಾ ಬಂಡೂರಿ ಯೋಜನೆಗೆ ಶಂಕುಸ್ಥಾಪನೆ -ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on: Dec 31, 2022 | 9:20 PM

Share

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ (Kalasa Banduri Nala Project) ಕಾಮಗಾರಿ ಆರಂಭಿಸಲು ಫಾರೆಸ್ಟ್ ಕ್ಲಿಯರೆನ್ಸ್ ಗೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಎರಡು ತಿಂಗಳಲ್ಲಿ ಯೋಜನೆಗೆ ಶಂಕುಸ್ಥಾಪನೆ ಕೂಡ ನೆರವೇರಿಸಲಿದೆ. ಈ ವಿಷಯದಲ್ಲಿ ಸಿದ್ದರಾಮಯ್ಯ (Siddaramaiah), ಎಚ್.ಕೆ ಪಾಟೀಲ್ (HK Patil) ಅವರು ಅನಗತ್ಯ ಆರೋಪ ಮಾಡ್ತಿದ್ದಾರೆ ಎಂದರು.

ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ಎಚ್.ಕೆ ಪಾಟೀಲ್ ಅವರು ಪೊಲಿಟಿಕಲಿ ಔಟ್ ಡೇಟೆಡ್ ಆಗ್ತಿದ್ದಾರೆ. ಹೀಗಾಗಿ ಅವರು ಡೇಟ್ ಬಗ್ಗೆ ಕೇಳ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆ ಡಿಪಿಆರ್ ಗೆ ಅನುಮತಿ ನೀಡಿದೆ. ಯೋಜನೆ ಆರಂಭಿಸಲು ಫಾರೆಸ್ಟ್ ಕ್ಲಿಯರೆನ್ಸ್ ರಾಜ್ಯ ಸರ್ಕಾರದ ಮಟ್ಟದಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ಫಾರೆಸ್ಟ್ ಕ್ಲಿಯರೆನ್ಸ್ ಬಗ್ಗೆ ಈಗಾಗಲೇ ತಜ್ಞರು ಹಾಗೂ ಅಧಿಕಾರಿಗಳ ಜೊತೆ ನಾನು ಚರ್ಚಿಸಿದ್ದೇನೆ. ತಜ್ಞರು ನೀಡಿರುವ ಖಚಿತ ಮಾಹಿತಿಯ ಪ್ರಕಾರ ಕಳಸಾ – ಬಂಡೂರಿ ಎರಡು ಕಾಮಗಾರಿಗಳಿಗೆ ಒಟ್ಟು 65 ಎಕರೆಯಷ್ಟು ಅರಣ್ಯ ಭೂಮಿ ಬೇಕಾಗುತ್ತದೆ. ಮುಂದುವರಿದ ತಂತ್ರಜ್ಞಾನದಿಂದ ಅತಿ ಕಡಿಮೆ ಮರಗಿಡಗಳನ್ನು ಕಡಿಯಲು ಯೋಜಿಸಲಾಗಿದೆ.

65 ಎಕರೆ ಮಾತ್ರ ಅರಣ್ಯ ಬೇಕಾಗಿರುವುದರಿಂದ ರಾಜ್ಯ ಸರ್ಕಾರವೇ ಫಾರೆಸ್ಟ್ ಕ್ಲಿಯರೆನ್ಸ್ ಕೊಡಬಹುದಾಗಿದೆ. ಫಾರೆಸ್ಟ್ ಕ್ಲಿಯರೆನ್ಸ್ ಗಾಗಿ ಕೇಂದ್ರ ಸರ್ಕಾರ ಬಳಿ ಹೋಗುವ ಅಗತ್ಯವಿಲ್ಲ ಎಂದು ತಜ್ಞರು ಖಚಿತವಾಗಿ ಹೇಳಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಹಾಗೂ ಎಚ್.ಕೆ ಪಾಟೀಲ್ ಅವರು ಅನಗತ್ಯವಾಗಿ ಆರೋಪ ಮಾಡ್ತಿದ್ದಾರೆ.

ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಫಾರೆಸ್ಟ್ ಕ್ಲಿಯರೆನ್ಸ್ ತೆಗೆದುಕೊಳ್ಳುವುದು ಕಷ್ಟವಾಗುವುದಿಲ್ಲ. ರಾಜ್ಯ ಸರ್ಕಾರದ ಮಟ್ಟದಲ್ಲೇ ಫಾರೆಸ್ಟ್ ಕ್ಲಿಯರೆನ್ಸ್ ತೆಗೆದುಕೊಳ್ಳಲು ಅವಕಾಶ ಇರುವುದರಿಂದ ಆದಷ್ಟು ಬೇಗ ಫಾರೆಸ್ಟ್ ಕ್ಲಿಯರೆನ್ಸ್ ಪಡೆದು ಯೋಜನೆ ಆರಂಭಿಸುತ್ತೇವೆ. ಎರಡು ತಿಂಗಳಲ್ಲೇ ಯೋಜನೆಯ ಶಂಕುಸ್ಥಾಪನೆ ಕೂಡ ನೆರವೇರಿಸುವ ವಿಶ್ವಾಸವನ್ನ ಪ್ರಲ್ಹಾದ್ ಜೋಶಿಯವರು ಇದೇ ವೇಳೆ ವ್ಯಕ್ತಪಡಿಸಿದರು.

ಇನ್ನ ಕುಮಾರಸ್ವಾಮಿ ಅವರ ಎಟಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ, ಕುಮಾರಸ್ವಾಮಿ ವಚನ ಭ್ರಷ್ಟರು. ಅವರು ದೇಶಕ್ಕಾಗಿ, ಸಮಾಜಕ್ಕಾಗಿ ಏನನ್ನೂ ಮಾಡುವವರಲ್ಲ. ತಂದೆ ಮಗನಿಗಾಗಿ, ಮಗ ಹೆಂಡತಿಗಾಗಿ, ಹೆಂಡತಿ ಮಗನಿಗಾಗಿ ರಾಜಕೀಯ ಮಾಡುವವರು ಅವರುಗಳು. ಇಂಥವರಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕುಮಾರಸ್ವಾಮಿಯವರಿಗೆ ಖಡಕ್ ತಿರುಗೇಟು ನೀಡಿದರು.