AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ, ಅವರು ಸುಳ್ಳು ರಾಮಯ್ಯ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳು ರಾಮಯ್ಯ .2004 - 2014 ವರೆಗೆ NDRF ಬಿಡುಗಡೆ ಮಾಡಿದ ಒಟ್ಟು ಅನುದಾನ ರೂ. 3655 ಕೋಟಿ ಆದರೆ 2014 ರಿಂದ ಇಲ್ಲಿಯ ತನಕ ಬಿಡುಗಡೆ ಮಾಡಲಾದ ಅನುದಾನ ರೂ. 12,542 ಕೋಟಿ, ನಾಲ್ಕು ಪಟ್ಟು ಹೆಚ್ಚು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ, ಅವರು ಸುಳ್ಳು ರಾಮಯ್ಯ -ಪ್ರಹ್ಲಾದ್ ಜೋಶಿ
ಸಿದ್ದರಾಮಯ್ಯ, ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Updated By: ಆಯೇಷಾ ಬಾನು|

Updated on:Feb 14, 2024 | 12:11 PM

Share

ಹುಬ್ಬಳ್ಳಿ, ಫೆ.14: ಸಿದ್ದರಾಮಯ್ಯ (Siddaramaiah) ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಅವರು ಸುಳ್ಳು ರಾಮಯ್ಯ. ನಾನು ನಿನ್ನೆಯಿಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಮೊದಲು NDRF (ನ್ಯಾಷನಲ್ ಡಿಸಾಸ್ಟರ್ ರಿಲೀಫ್ ಫಂಡ್) ಫಂಡ್​ನಲ್ಲಿ ಇಷ್ಟು ಪ್ರಮಾಣದ ಹಣ ಕೊಡುತ್ತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಬಿ.ಎಸ್. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತೀದಾರೆ. ನಾವು ಒಂದೇ ಒಂದು ರೂಪಾಯಿ GST ಹಣ ಕೊಡೋದು ಕೂಡ ಬಾಕಿ ಇಲ್ಲ ಎಂದು ಸಿದ್ದರಾಮಯ್ಯನವರ ಆರೋಪಗಳಿಗೆ ಜೋಶಿ ತಿರುಗೇಟು ನೀಡಿದರು.

ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ

ಇದನ್ನೂ ಓದಿ: ಅತಿ ಹೆಚ್ಚು ಬಿಯರ್ ಸೇವಿಸುವ ಚಾಮರಾಜನಗರಕ್ಕೆ 2ನೇ ಸ್ಥಾನ, ರಾಜ್ಯದ ಮೊದಲ ಜಿಲ್ಲೆ ಯಾವುದು? ಸಿಪ್ ಬೈ ಸಿಪ್ ಮಾಹಿತಿ ಇಲ್ಲಿದೆ

NDRFನಲ್ಲಿ ನಾವು 12 ಸಾವಿರ ಕೋಟಿ ಕೊಟ್ಟಿದ್ದೇವೆ. ಡೆವಲೂಷನ್ ಫಂಡ್ ಅವರ ಕಾಲದಲ್ಲಿ 60 ಸಾವಿರ ಕೋಟಿ ಇತ್ತು. ನಮ್ಮ ಕಾಲದಲ್ಲಿ 2 ಲಕ್ಷ 36 ಸಾವಿರ ಕೋಟಿ ಕೊಟ್ಟಿದ್ದೇವೆ. ತೆರಿಗೆ ಹಂಚಿಕೆಯಲ್ಲಿ 10 ವರ್ಷದಲ್ಲಿ 81 ಸಾವಿರ ಕೋಟಿ ಹೆಚ್ಚಿದೆ. ನಮ್ಮ ಕಾಲದಲ್ಲಿ 2 ಲಕ್ಷ 85 ಸಾವಿರ ಕೋಟಿ ಕೊಟ್ಟಿದ್ದೇವೆ. ಇವರು ಯಾವುದೇ ಗ್ರ್ಯಾಂಟ್ ಕೊಟ್ಟಿಲ್ಲ ಅಂತೀದಾರೆ. ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. 2004 ರಿಂದ 2014 ರಲ್ಲಿ 1667 ಕೋಟಿ ಹಣ ಬಿಡುಗಡೆಯಾಗಿತ್ತು. ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರು ಸುಳ್ಳು ರಾಮಯ್ಯ. ನಾನು ನಿನ್ನೆ ಇಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ. ಮಹದಾಯಿ ವಿಚಾರ ಅರಣ್ಯ ಇಲಾಖೆ ನಿರಾಕರಣೆ ಮಾಡಿಲ್ಲ ಎಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ

ಸಿದ್ದರಾಮಯ್ಯ 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು. ಅನುದಾನ ವಿಚಾರವಾಗಿ ಡ್ಯಾಶ್ ಬೋರ್ಡ್​ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ಅದನ್ನು ಡೌನ್​ಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಇದೀಗ ಅಂಕಿ-ಅಂಶವೇ ಡಿಲೀಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ ಮಾಡಿದರು. ಇದೇ ವೇಳೆ ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಒಂದು ಹಂತದಲ್ಲಿ ಚರ್ಚೆ ನಡೆಯುತ್ತಿದೆ, ಅದೆಲ್ಲವೂ ಅಪೂರ್ಣ ಆಗಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಎಲ್ಲವೂ ಅಂತಿಮವಾಗಲಿದೆ. ಈ ಬಾರಿ ಚುನಾವಣೆಯಲ್ಲಿ ನಾನು ಮತ್ತೆ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರ ಬಗ್ಗೆ ನಾವು ಸಹಾನುಭೂತಿ ಹೊಂದಿದ್ದೇವೆ

ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ವಿಚಾರ ಸಂಬಂಧ ಮಾತನಾಡಿದ ಪ್ರಹ್ಲಾದ್ ಜೋಶಿ, ಕೃಷಿ ಸಚಿವರು ರೈತ ಮುಖಂಡರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ರೈತರ ಹೊಸ ಬೇಡಿಕೆಯನ್ನು ನಮ್ಮ ಸರ್ಕಾರ ಪರಿಶೀಲನೆ ಮಾಡ್ತಿದೆ. ಸಹಾನುಭೂತಿಯಿಂದ ಎಲ್ಲ ಬೇಡಿಕೆ ಪರಿಶೀಲನೆ ಮಾಡುತ್ತಿದ್ದಾರೆ. ರೈತರ ಬಗ್ಗೆ ನಾವು ಸಹಾನುಭೂತಿ ಹೊಂದಿದ್ದೇವೆ. ಕಲ್ಲು ಹೊಡೆಯೋದು ಕೆಲಸವಲ್ಲ, ರೈತರು ಮಾತುಕತೆಗೆ ಬರಬೇಕು. ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡ್ತಿಲ್ಲ. ಅನುಮತಿ‌ ಇಲ್ಲದೆ ಬಂದವರನ್ನು ಪೊಲೀಸರು ತಡೆಯುತ್ತಿದ್ದಾರೆ. ನಮ್ಮ ದೇಶದ ಪ್ರಜೆಗಳನ್ನು ಉಳಿಸುವ ಕೆಲಸ ಆಗ್ತಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Wed, 14 February 24

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ