AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಆರ್​ಎಸ್​ಎಸ್​ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಸಿಎಂ ಮತಯಾಚನೆ ಮಾಡಿದ್ದು, ಯಾವುದೇ ಪಕ್ಷ ಇರಲಿ, ಯಾವುದೇ ಸರ್ಕಾರ ಇರಲಿ ಶಿಕ್ಷಕರ ವಿಚಾರ ಬಂದಾಗ ಹೊರಟ್ಟಿ ಕಾಂಪ್ರಮೈಜ ಆಗಲ್ಲ. ಬಸವರಾಜ ಹೊರಟ್ಟಿ ಮತ್ತು ಶಿಕ್ಷಣ ಕ್ಷೇತ್ರ ಅಂತ ಅವರ ಬಗ್ಗೆ ಪಿಹೆಚ್​ಡಿ ಮಾಡಬೇಕು.

ಸಿದ್ದರಾಮಯ್ಯ ಆರ್​ಎಸ್​ಎಸ್​ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jun 05, 2022 | 10:48 AM

Share

ಹುಬ್ಬಳ್ಳಿ: ಆರ್​ಎಸ್​ಎಸ್​ ಚಡ್ಡಿ ಸುಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಕಳೆದ 75 ವರ್ಷದಿಂದ ಆರ್​ಎಸ್​ಎಸ್ ಜನಸೇವೆ ಮಾಡುತ್ತಿದೆ. ಜನರು ಸಂಕಷ್ಟದಲ್ಲಿದ್ದಾಗ ಆರ್​ಎಸ್​ಎಸ್ ಸಹಾಯ ಮಾಡಿದೆ. ಹೀಗಾಗಿ ಕಾಂಗ್ರೆಸ್​ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ. ಸಿದ್ದರಾಮಯ್ಯ ಆರ್​ಎಸ್​ಎಸ್​ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗೆ ಮಾಡೇ ಎಲ್ಲೆಡೆ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಬಸವರಾಜ ಹೊರಟ್ಟಿ ಪರ ಸಿಎಂ ಮತಯಾಚನೆ 

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಸಿಎಂ ಮತಯಾಚನೆ ಮಾಡಿದ್ದು, ಯಾವುದೇ ಪಕ್ಷ ಇರಲಿ, ಯಾವುದೇ ಸರ್ಕಾರ ಇರಲಿ ಶಿಕ್ಷಕರ ವಿಚಾರ ಬಂದಾಗ ಹೊರಟ್ಟಿ ಕಾಂಪ್ರಮೈಜ ಆಗಲ್ಲ. ಬಸವರಾಜ ಹೊರಟ್ಟಿ ಮತ್ತು ಶಿಕ್ಷಣ ಕ್ಷೇತ್ರ ಅಂತ ಅವರ ಬಗ್ಗೆ ಪಿಹೆಚ್​ಡಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆ ತಂದಿದೆ. ಇದನ್ನು ಅರಿತು ಶಿಕ್ಷಕರಿಗೆ ಮತ್ತು ಶಿಕ್ಷಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರಟ್ಟಿ ಬಿಜೆಪಿ ಸೇರಿದ್ದಾರೆ. ಅವರ ಅನುಭವಕ್ಕೆ ಗೌರವ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡಿದ್ದೆವೆ‌. ಈ ಕ್ಷೇತ್ರದಲ್ಲಿ ಅವರಿಗೆ ಯಾವುದೇ ವಿರೋಧವಿಲ್ಲ. ಅವರು ಈ ಬಾರಿ ಗೆಲುವಿನಲ್ಲಿ ದಾಖಲೆ ಮಾಡುತ್ತಾರೆ. ವಿರೋಧ ಪಕ್ಷದವರು ಚುನಾವಣೆ ಮಾಡಬೇಕು ಅಂತ ಚುನಾವಣೆ ಮಾಡುತ್ತಿದ್ದಾರೆ. ಈ ಕ್ಷೇತ್ರದ ಬಗ್ಗೆ ಅರಿವಿಲ್ಲದವರು ಬಂದು ಇಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಕ್ಷೇತ್ರದ ಶಿಕ್ಷಕರ ಸಮಸ್ಯೆ ಬಗ್ಗೆ ಅವರಿಗೇನು ಗೊತ್ತಿಲ್ಲ ಎಂದು ಪರೋಕ್ಷವಾಗಿ ರಾಜ್ಯದ ನಾಯಕರಿಗೆ ಸಿಎಂ ಟಾಂಗ್ ಕೊಟ್ಟರು.

ಇದನ್ನೂ ಓದಿ; ಪ್ರತಿಭಟನೆಗೂ ಮುನ್ನಾ ಜಾಮೀಯ ಮಸೀದಿ ಒಳಗೆ ಹೋಗಿ ಹನುಮಾನ್ ಚಾಲೀಸ್ ಪಠಣೆ! ಸಿಸಿ ಟಿವಿ ದೃಶ್ಯ ಟಿವಿ9ಗೆ ಲಭ್ಯ

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
TV9 Web
TV9 Web

TV9 Kannada

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ