ಹುಬ್ಬಳ್ಳಿ: ಆರ್ಎಸ್ಎಸ್ ಚಡ್ಡಿ ಸುಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಕಳೆದ 75 ವರ್ಷದಿಂದ ಆರ್ಎಸ್ಎಸ್ ಜನಸೇವೆ ಮಾಡುತ್ತಿದೆ. ಜನರು ಸಂಕಷ್ಟದಲ್ಲಿದ್ದಾಗ ಆರ್ಎಸ್ಎಸ್ ಸಹಾಯ ಮಾಡಿದೆ. ಹೀಗಾಗಿ ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ. ಸಿದ್ದರಾಮಯ್ಯ ಆರ್ಎಸ್ಎಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹೀಗೆ ಮಾಡೇ ಎಲ್ಲೆಡೆ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.
ಬಸವರಾಜ ಹೊರಟ್ಟಿ ಪರ ಸಿಎಂ ಮತಯಾಚನೆ
ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಸಿಎಂ ಮತಯಾಚನೆ ಮಾಡಿದ್ದು, ಯಾವುದೇ ಪಕ್ಷ ಇರಲಿ, ಯಾವುದೇ ಸರ್ಕಾರ ಇರಲಿ ಶಿಕ್ಷಕರ ವಿಚಾರ ಬಂದಾಗ ಹೊರಟ್ಟಿ ಕಾಂಪ್ರಮೈಜ ಆಗಲ್ಲ. ಬಸವರಾಜ ಹೊರಟ್ಟಿ ಮತ್ತು ಶಿಕ್ಷಣ ಕ್ಷೇತ್ರ ಅಂತ ಅವರ ಬಗ್ಗೆ ಪಿಹೆಚ್ಡಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆ ತಂದಿದೆ. ಇದನ್ನು ಅರಿತು ಶಿಕ್ಷಕರಿಗೆ ಮತ್ತು ಶಿಕ್ಷಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೊರಟ್ಟಿ ಬಿಜೆಪಿ ಸೇರಿದ್ದಾರೆ. ಅವರ ಅನುಭವಕ್ಕೆ ಗೌರವ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡಿದ್ದೆವೆ. ಈ ಕ್ಷೇತ್ರದಲ್ಲಿ ಅವರಿಗೆ ಯಾವುದೇ ವಿರೋಧವಿಲ್ಲ. ಅವರು ಈ ಬಾರಿ ಗೆಲುವಿನಲ್ಲಿ ದಾಖಲೆ ಮಾಡುತ್ತಾರೆ. ವಿರೋಧ ಪಕ್ಷದವರು ಚುನಾವಣೆ ಮಾಡಬೇಕು ಅಂತ ಚುನಾವಣೆ ಮಾಡುತ್ತಿದ್ದಾರೆ. ಈ ಕ್ಷೇತ್ರದ ಬಗ್ಗೆ ಅರಿವಿಲ್ಲದವರು ಬಂದು ಇಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ಕ್ಷೇತ್ರದ ಶಿಕ್ಷಕರ ಸಮಸ್ಯೆ ಬಗ್ಗೆ ಅವರಿಗೇನು ಗೊತ್ತಿಲ್ಲ ಎಂದು
ಪರೋಕ್ಷವಾಗಿ ರಾಜ್ಯದ ನಾಯಕರಿಗೆ ಸಿಎಂ ಟಾಂಗ್ ಕೊಟ್ಟರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.