AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು

ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

Dharwad News: ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jun 04, 2023 | 4:44 PM

Share

ಧಾರವಾಡ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು (Sisters) ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ (Kalagatagi) ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತನ್ನ 4 ಮಕ್ಕಳನ್ನು ಕೊಂದು, ನೇಣಿಗೆ ಶರಣಾದ ಮಹಿಳೆ

ನಾಲ್ವರು ಮಕ್ಕಳನ್ನು ಕೊಂದು ಮಹಿಳೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಬಾರ್ಮರ್​ ಜಿಲ್ಲೆಯ ಮಂಡಲಿ ಪ್ರದೇಶದಲ್ಲಿ ನಡೆದಿದೆ. ಶನಿವಾರ ಸಂಜೆ ತನ್ನ ಜೀವನವನ್ನು ಅಂತ್ಯಗೊಳಿಸುವ ಮೊದಲು ಮಹಿಳೆ ತನ್ನ ನಾಲ್ಕು ಮಕ್ಕಳನ್ನು ಧಾನ್ಯದ ಡ್ರಮ್‌ನಲ್ಲಿ ಹಾಕಿ ಅದರ ಮುಚ್ಚಳವನ್ನು ಮುಚ್ಚಿದ್ದಳು. ಮೃತರನ್ನು ಬನಿಯಾವಾಸ್ ಗ್ರಾಮದ ಊರ್ಮಿಳಾ (27) ಮತ್ತು ನಾಲ್ವರು ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3) ಮತ್ತು ಮನೀಶಾ (2) ಎಂದು ಗುರುತಿಸಲಾಗಿದೆ.

ಪೋಲೀಸರ ಪ್ರಕಾರ, ಘಟನೆ ಸಂಭವಿಸಿದಾಗ ಆಕೆಯ ಪತಿ ಜೆಥರಾಮ್ ಕೆಲಸದ ನಿಮಿತ್ತ ಜೋಧ್‌ಪುರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಎಲ್ಲಾ ಐದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ

ಪತಿ-ಪತ್ನಿಯರ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿತ್ತು. ಮಹಿಳೆ ತನ್ನ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಡಿಎಸ್ಪಿ ಕಮಲೇಶ್ ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ. ಘಟನೆ ಕುರಿತು ಮಹಿಳೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬ ಸದಸ್ಯರು ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:16 pm, Sun, 4 June 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ