Coronavirus: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ

| Updated By: ಆಯೇಷಾ ಬಾನು

Updated on: Nov 25, 2021 | 12:16 PM

ಧಾರವಾಡದ ಸತ್ತೂರು ಬಡಾಣೆಯಲ್ಲಿರೋ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ(SDM Medical College) 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

Coronavirus: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ
ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜ್
Follow us on

ಧಾರವಾಡ: ಮಹಾಮಾರಿ ಕೊರೊನಾ(Coronavirus) ಮತ್ತೆ ತನ್ನ ಆಟ ಶುರು ಮಾಡಿದಂತಿದೆ. ಧಾರವಾಡದ ಸತ್ತೂರು ಬಡಾಣೆಯಲ್ಲಿರೋ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ(SDM Medical College) 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಕೊಂಚ ವಿರಾಮ ಕೊಟ್ಟಿದ್ದ ಕೊರೊನಾ ರಾಜ್ಯದಲ್ಲಿ ಮತ್ತೆ ಮೂರಂಕಿ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದೆ.

ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧಾರ ಮಾಡಲಾಗಿದೆ. ಹಾಸ್ಟೆಲ್‌ನಲ್ಲಿ ಸೋಂಕಿತರಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಮಾಹಿತಿ ನೀಡಿದ್ದಾರೆ.

SDM ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಸರತಿ ಸಾಲಲ್ಲಿ ನಿಂತು ವಿದ್ಯಾರ್ಥಿಗಳು ಕೊವಿಡ್ ಟೆಸ್ಟ್‌ಗೆ ಸ್ಯಾಂಪಲ್ಸ್ ನೀಡುತ್ತಿದ್ದಾರೆ. ಮೆಡಿಕಲ್ ಕಾಲೇಜಿಗೆ ಡಿಸಿ ನಿತೇಶ್ ಪಾಟೀಲ್ ಭೇಟಿ ನೀಡಿದ್ದು ಕಾಲೇಜು ಪ್ರಾಂಶುಪಾಲರಾದ ಡಾ.ರತ್ನಮಾಲಾ ಜತೆ ಚರ್ಚೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನವೆಂಬರ್ 24ರಂದು ಹೊಸದಾಗಿ 254 ಜನರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,94,255 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,49,629 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,185 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,412 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ನವೆಂಬರ್ 24ರ ವರೆಗಿನ ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 4, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 15, ಹಾವೇರಿ 0, ಕಲಬುರಗಿ 1, ಕೊಡಗು 1, ಕೋಲಾರ 0, ಕೊಪ್ಪಳ 0, ಮಂಡ್ಯ 3, ಮೈಸೂರು 30, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 4, ಉಡುಪಿ 8, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: Ravichandran Ashwin: ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ದಾಖಲೆಯ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್

Published On - 11:52 am, Thu, 25 November 21