ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸ್ತೇವೆ. ಮಂದಿರಗಳ ವಿಚಾರ ಬಂದಾಗ ಸರ್ಕಾರ 1 ಕಾನೂನು ತಂದಿದೆ. ಇದು ನಮ್ಮ ಬದ್ಧತೆ, ತಕ್ಷಣ ಸ್ಪಂದಿಸುವುದು ಸರ್ಕಾರದ ಬದ್ಧತೆ. ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಆಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಮ್ಮ ಗುರಿ ಮೀರಿ ಸಾಧನೆ ಮಾಡುತ್ತೇವೆ. ನಮ್ಮ ಹೊಣೆಗಾರಿಕೆಯನ್ನು ಅರಿತು ಕೆಲಸವನ್ನ ಮಾಡುತ್ತೇವೆ. ಮುಂದಿನ ಏಪ್ರಿಲ್ ತಿಂಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತದೆ. ಮೋದಿಯವರು ನನಗೆ ಕೆಲ ಮಾರ್ಗದರ್ಶನ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲ ಕಾರ್ಯಕ್ರಮ ಮಾಡಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸರ್ಕಾರದಲ್ಲಿ ಯಾಕೆ ಯೋಜನೆ ಜಾರಿ ಮಾಡಲಿಲ್ಲ? ಒಂದೂವರೆ ವರ್ಷ ಮೈತ್ರಿ ಸರ್ಕಾರದಲ್ಲಿ ಪಾಲುದಾರರಾಗಿದ್ರಿ. ಆಗ ಯೋಜನೆ ಬಗ್ಗೆ ಯಾಕೆ ಯೋಚನೆಯನ್ನ ಮಾಡಲಿಲ್ಲ. DPR ಮಾಡಲು ಐದು ವರ್ಷ ಸಮಯ ತೆಗೆದುಕೊಂಡರು. ಇದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.
ಇದನ್ನೂ ಓದಿ: ಎಲ್ಲದಕ್ಕೂ ಬಂದ್ ಅಂತಿಮ ನಿರ್ಧಾರವಲ್ಲ; ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಬಸವರಾಜ ಬೊಮ್ಮಾಯಿ ಮನವಿ
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಮಂಡಿ ನೋವು: ಪ್ರಧಾನಿಯನ್ನೇ ಬದಲಾಯಿಸದ ನಾವು ಸಿಎಂ ಬದಲಾಯಿಸ್ತೇವಾ? -ಸಂಸದ ಪ್ರತಾಪ್