AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಬೆಳಗಾವಿ ನಡುವೆ ವಿಶೇಷ ರೈಲು: ಆರೇಳು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲ

ವಾರಾಂತ್ಯ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ಎರಡೂ ಮಾರ್ಗಗಳಲ್ಲಿ ತಲಾ ಒಂದು ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ ಓಡಿಸುತ್ತಿದೆ. ಯಾವಾಗಿನಿಂದ ರೈಲು ಸಂಚಾರ ಪ್ರಾರಂಭ ಎನ್ನುವ ವೇಳಾಪಟ್ಟಿ ಈ ಕೆಳಗಿನಂತಿದೆ.

ಬೆಂಗಳೂರು – ಬೆಳಗಾವಿ ನಡುವೆ ವಿಶೇಷ ರೈಲು: ಆರೇಳು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲ
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 06, 2026 | 9:01 PM

Share

ಹುಬ್ಬಳ್ಳಿ, (ಅಕ್ಟೋಬರ್ 06): ವಾರಾಂತ್ಯ ಹಾಗೂ ದಸರಾ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ಎರಡು ಮಾರ್ಗದಲ್ಲಿ ವಿಶೇಷ ರೈಲುಗಳನ್ನು ಓಡಿಸಲಿದೆ. ಹೌದು.. ಬೆಂಗಳೂರಿನಿಂದ 2 ಮಾರ್ಗದಲ್ಲಿ ವಿಶೇಷ ರೈಲು ಸಂಚಾರ ನಡೆಸಲಿದ್ದು, ಇದರಿಂದ ಆರೇಳು ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಮ್ಎಮ್ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ವೇಳಾಪಟ್ಟಿ

ರೈಲು ಸಂಖ್ಯೆ 06563 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್’ಪ್ರೆಸ್ ರೈಲು 16.10.2026 ರಂದು ಎಸ್ಎಂವಿಟಿ ಬೆಂಗಳೂರಿನಿಂದ 19.00 ಗಂಟೆಗೆ ಹೊರಟು, ಮರುದಿನ 08.25 ಗಂಟೆಗೆ ಬೆಳಗಾವಿ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06564 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ಪ್ರೆಸ್ ರೈಲು 17.10.2026 ರಂದು ಬೆಳಗಾವಿಯಿಂದ 17.30 ಗಂಟೆಗೆ ಹೊರಟು, ಮರುದಿನ 05.00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಇದನ್ನೂ ನೋಡಿ: ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ: ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಎಲ್ಲೆಲ್ಲಿ ನಿಲುಗಡೆ?

ಮಾರ್ಗಮಧ್ಯದಲ್ಲಿ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಮ್ಎಮ್ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 8 ಸ್ಲೀಪರ್ ಕ್ಲಾಸ್, 4 ಜನರಲ್ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ದಿವ್ಯಾಂಗ ಸ್ನೇಹಿ ಕಂಪಾರ್ಟ್’ಮೆಂಟ್’ಗಳನ್ನು ಹೊಂದಿರುವ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.

ಕರ್ನಾಟಕದ ಮತ್ತಷ್ಟು ಇಲ್ಲಿ ಕ್ಲಿಕ್ ಮಾಡಿ

Published On - 8:55 pm, Tue, 6 October 26

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ