ಹುಬ್ಬಳ್ಳಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಆಂಧ್ರ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಯನ್ನು ಪುನರಾರಂಭಿಸಲು ಮುಂದಾಗಿದ್ದಾರೆ. ಈ ಬಗ್ಗೆ ಅನುಮತಿ ಕೋರಿ ಮಾಜಿ ಸಚಿವ ಜನಾರ್ದನ ರೆಡ್ಡಿ(Gali Janardhan Reddy) ಮಾಲೀಕತ್ವದ ಓಬಳಾಪುರಂ ಗಣಿ ಕಂಪನಿ (ಓಎಂಸಿ) ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಿರುವ ಆಂಧ್ರ ಪ್ರದೇಶ ಸರ್ಕಾರ, ಗಣಿಗಾರಿಕೆ ನಡೆಸಲು ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸಮಾಜ ಪರಿವರ್ತನಾ ಸಮೀತಿ ಅಧ್ಯಕ್ಷ ಎಸ್ ಆರ್ ಹಿರೇಮಠ(SR Hiremat) ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಕೇಂದ್ರ ಉನ್ನತಾಧಿಕಾರ ಸಮಿತಿ ಕರ್ನಾಟಕದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಮಿತಿಯನ್ನು ಸಂಪೂರ್ಣ ಸಡಿಲಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದರು.
ಕೇಂದ್ರ ಉನ್ನತಾಧಿಕಾರ ಸಮಿತಿ ಬಳ್ಳಾರಿ, ಚಿತ್ರದುರ್ಗದಲ್ಲಿ ಗಣಿಗಾರಿಕೆ ಮಿತಿ ಹೆಚ್ಚಳಕ್ಕೆ ಅವಕಾಶಕ್ಕಡ ಅರ್ಜಿ ಸಲ್ಲಿಸಿತ್ತು. ಪರಿಸರ ಸಂವರಕ್ಷಣೆ ಬಗ್ಗೆ ಸಮುದಾಯ ಪತಿವರ್ತನಾ ಸಮುದಾಯದ ಪರವಾಗಿ ಪ್ತಶಾಂತ ಭೂಷಣ ವಾದ ಮಂಡಿಸಿದ್ದರು. ವಾದ ಆಲಿಸಿದ ಸುಪ್ರ್ರೀಂ ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ ನಮ್ಮ ನಿಲುವು ಎತ್ತಿ ಹಿಡಿದಿದೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಂಧ್ರಪ್ರದೇಶದಲ್ಲಿ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಅಕ್ರಮ ಗಣಿಗಾರಿಕೆ ಆರಂಭಿಸಲು ಮುಂದಾಗಿದ್ದಾರೆ. ಅದಕ್ಕೆ ಅಲ್ಲಿಯ ಮುಖ್ಯಮಂತ್ರಿ ಜಗನ್ ಸಹ ಒಪ್ಪಿಗೆ ನೀಡಿದ್ದು ಆತಂಕದ ಸಂಗತಿ. ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು. ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಯಾವೆಲ್ಲ ಕಾನೂನು ಕ್ರಮ ಕೈಗೊಳ್ಳಲಾಗಿದೆಯೋ, ಅವುಗಳನ್ನು ಆಂಧ್ರಪ್ರದೇಶಗದಲ್ಲೂ ಕೈಗೊಳ್ಳಬೇಕು. ಸಮಾಜ ಪರಿವರ್ತನಾ ಸಮುದಾಯ ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದರು.
ಜೈಲಿನಲ್ಲಿರುವ ಅತ್ಯಾಚಾರಿಗಳನ್ನು ಬಿಡುಗೆಡೆ ಮಾಡಿರುವುದು ಖಂಡನೀಯ. ಮಹಿಳೆಯರ ಪರವಾಗಿ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ, ಈ ಕುರಿತು ಮೌನವಹಿಸಿರುವುದು ಅಚ್ಚರಿಯ ಸಂಗತಿ. ಹೊರಗೆ ಬಂದಿರುವ ಆರೋಪಿಗಳನ್ನು ಪುನಃ ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:49 pm, Sat, 27 August 22