AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಕಾಮರ್ಸ್‌ ತಾಣಗಳಲ್ಲಿ ಪಾಕ್‌ ಸರಕು ಮಾರಿದರೆ ಹುಷಾರ್‌: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಮೇಜಾನ್, ಫ್ಲಿಪ್‌ಕಾರ್ಟ್‌ ಮುಂತಾದ ಕಂಪನಿಗಳಿಗೆ ತಕ್ಷಣವೇ ಈ ಮಾರಾಟವನ್ನು ನಿಲ್ಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ದೇಶದ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಅವರು ಹೇಳಿದ್ದಾರೆ.

ಇ-ಕಾಮರ್ಸ್‌ ತಾಣಗಳಲ್ಲಿ ಪಾಕ್‌ ಸರಕು ಮಾರಿದರೆ ಹುಷಾರ್‌: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ
ಪ್ರಲ್ಹಾದ್ ಜೋಶಿ
ಸಂಜಯ್ಯಾ ಚಿಕ್ಕಮಠ
| Updated By: Ganapathi Sharma|

Updated on:May 15, 2025 | 9:30 AM

Share

ಹುಬ್ಬಳ್ಳಿ, ಮೇ 15: ಇ-ಕಾಮರ್ಸ್‌ ಪ್ಲಾಟ್​​ಫಾರ್ಮ್​​ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾಕಿಸ್ತಾನದ ಸರಕುಗಳ ಮಾರಾಟ ಮಾಡದಂತೆ ಎಲ್ಲಾ ವಾಣಿಜ್ಯ ಕಂಪನಿಗಳು ಮತ್ತು ಕಾರ್ಪೋರೇಷನ್‌ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಈ ಹಿಂದೆಯೇ ನೋಟಿಸ್‌ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್‌ ತಾಣಗಳು, ಸಂಸ್ಥೆಗಳು ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಅಮೇಜಾನ್‌, ಫ್ಲಿಪ್‌ಕಾರ್ಟ್‌, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಆದರೂ ಈ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದೆ. ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ.

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ
Image
ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ: ಗದಗದಲ್ಲಿ ಸಿಡಿದೆದ್ದ ಮಹಿಳೆಯರು
Image
ಚಿನ್ನಾಭರಣ ಕದ್ದು ಬೇರೆ ಬ್ಯಾಂಕ್​ಗಳಲ್ಲಿ ಅಡವಿಟ್ಟ ಗೋಲ್ಡ್ ಲೋನ್ ಆಫೀಸರ್!
Image
ಮಳೆ ಪರಿಣಾಮ ಬೆಂಗಳೂರಿನ ಹಲವೆಡೆ ಮುಂಜಾನೆಯೇ ಟ್ರಾಫಿಕ್ ಜಾಮ್: ಎಲ್ಲೆಲ್ಲಿ?
Image
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದ ವಿರುದ್ಧ ಅನೇಕ ಕಟ್ಟುನಿಟ್ಟಿನ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿತ್ತು. ಸಿಂಧೂ ನದಿಯ ನೀರನ್ನು ತಡೆಹಿಡಿಯುವುದು, ರಫ್ತು ನಿರ್ಬಂಧ, ಆಮದು ನಿರ್ಬಂಧ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇ ಕಾಮರ್ಸ್​​ ತಾಣಗಳು ವಸ್ತುಗಳನ್ನು ಮಾರಾಟ ಮಾಡದಂತೆ ಸೂಚಿಸಿರುವುದೂ ಅವುಗಳಲ್ಲೊಂದು.

ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ನಡೆಸಿದ ನಂತರವಂತೂ ಉಭಯ ದೇಶಗಳ ನಡುವಣ ಪರಿಸ್ಥಿತಿ ಯುದ್ಧದ ವರೆಗೆ ಹೋಗಿತ್ತು. ಕೊನೆಯದಾಗಿ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಆದರೆ, ಭಾರತ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಟ ಮುಂದುವರಿಯಲಿದೆ. ನಮ್ಮ ತಂಟೆಗೆ ಬಂದರೆ ನುಗ್ಗಿ ಹೊಡೆಯಲಿದ್ದೇವೆ ಎಂಬ ಕಠಿಣ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದೆ.

ಇದನ್ನೂ ಓದಿ: ಆಪರೇಷನ್ ಸಿಂದೂರದ ವೈಭವ; ಆತ್ಮನಿರ್ಭರ್ ಭಾರತದ ಶಕ್ತಿಗೆ ಇದಕ್ಕಿಂತ ಸಾಕ್ಷ್ಯ ಬೇಕೆ?

ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನದ ಜತೆಗೆ ವ್ಯವಹಾರ, ಮಾತುಕತೆ ಹಾಗೂ ಇತರ ಪ್ರಕ್ರಿಯೆಗಳು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ. ಪಾಕಿಸ್ತಾನದ ವಿರುದ್ಧ ಏನೇ ಮಾತುಕತೆ ಮಾಡುವುದಿದ್ದರೂ ಅದು ಭಯೋತ್ಪಾದನೆ, ಪಿಒಕೆ ವಿಚಾರವನ್ನು ಒಳಗೊಂಡಿರುತ್ತದೆ ಎಂದು ಪ್ರಧಾನಿ ಮೋದಿ ಕೂಡ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸದ್ಯದ ಸ್ಥಿತಿಯಲ್ಲಿ ಪಾಕಿಸ್ತಾನಕ್ಕೆ ಹಾಗೂ ಪಾಕಿಸ್ತಾನದ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಇ ಕಾಮರ್ಸ್ ತಾಣಗಳಿಗೆ ಸಚಿವ ಜೋಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 am, Thu, 15 May 25