ಹುಬ್ಬಳ್ಳಿ: ದೇವರ ಹುಬ್ಬಳ್ಳಿಯಲ್ಲಿ ಆಕಸ್ಮಿಕವಾಗಿ ತಗುಲಿ 50ಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಸುಮಾರು 10ಕ್ಕೂ ಅಧಿಕ ರೈತರ ಕಬ್ಬು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂ. ಹಾನಿಯಾಗಿದೆ. ತೋಟದ ಮಧ್ಯದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೂ 50ಕ್ಕೂ ಹೆಚ್ಚು ಎಕರೆ ಕಬ್ಬಿನ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಕರ್ತವ್ಯಲೋಪ, ಅಶಿಸ್ತು ಪ್ರದರ್ಶನ ಸಿಪಿಐ ಅಮಾನತು
ಕರ್ತವ್ಯ ಲೋಪ, ಅಶಿಸ್ತು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಹಾವೇರಿ ಮಹಿಳಾ ಠಾಣೆಯ ಸಿಪಿಐ ಚಿದಾನಂದ ಅವರನ್ನು ಅಮಾನತುಗೊಳಿಸಿ ಪೂರ್ವ ವಲಯದ ಐಜಿಪಿ ಆದೇಶ ಹೊರಡಿಸಿದೆ. ದಾವಣಗೆರೆ ಪೂರ್ವ ವಲಯದ ಐಜಿಪಿ ಅಮಾನತ್ತು ಆದೇಶ ಹೊರಡಿಸಿದ್ದಾರೆ. ಸದ್ಯ ಪೊಲೀಸ್ ಇಲಾಖೆ ಶಿಸ್ತು ಕ್ರಮ ಬಾಕಿ ಇರಿಸಿ ಸಿಪಿಐ ಚಿದಾನಂದ ಅವರನ್ನು ಅಮಾನತ್ತು ಮಾಡಿದೆ. ಅಮಾನತ್ತು ಆದೇಶ ಹೊರಡಿಸಿರುವ ಬಗ್ಗೆ ಎಸ್ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ಘಟನೆಗೆ ಪೊಲೀಸರ ವೈಫಲ್ಯವೇ ನೇರ ಕಾರಣ- ಶಾಸಕ ಅಭಯ್ ಪಾಟೀಲ್ ಆರೋಪ