ಛೋಟಾ ಮುಂಬಯಿ ಎಂದು ಕರೆಯುವ ಹುಬ್ಬಳ್ಳಿಯಲ್ಲಿ ನಿಲ್ಲುತ್ತಿಲ್ಲ ಕೊಲೆಗಳ ಸಂಖ್ಯೆ

ಇತ್ತೀಚೆಗೆ ಹುಬ್ಬಳ್ಳಿ ಅಂದ ತಕ್ಷಣ ಒಂದು ಕ್ಷಣ ಹುಬ್ಬೇರಿಸುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಮಹಾನಗರದಲ್ಲಿ ಯಾವಾಗ ಏನು ಸಂಭವಿಸುತ್ತದೆ ಎನ್ನುವುದು ತಿಳಿಯುವುದು ಕಷ್ಟವಾಗಿದೆ.

ಛೋಟಾ ಮುಂಬಯಿ ಎಂದು ಕರೆಯುವ ಹುಬ್ಬಳ್ಳಿಯಲ್ಲಿ ನಿಲ್ಲುತ್ತಿಲ್ಲ ಕೊಲೆಗಳ ಸಂಖ್ಯೆ
ಹುಬ್ಬಳ್ಳಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 19, 2022 | 1:41 PM

ಹುಬ್ಬಳ್ಳಿ: ಛೋಟಾ ಮುಂಬಯಿ ಎಂದು ಕರೆಯಲ್ಪಡುವ ಹುಬ್ಬಳ್ಳಿ(hubballi) ಈಗ ಮತ್ತೆ ಸುದ್ದಿಯಲ್ಲಿದೆ. ಹುಬ್ಬಳ್ಳಿಯಲ್ಲಿ ಯಾವಾಗ ಏನು ಸಂಭವಿಸುತ್ತದೆ ಎಂದು ಗೊತ್ತಾಗದಂತ ಸ್ಥಿತಿ ಎದುರಾಗಿದೆ.ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಬಳಿಕ ಒಂದಷ್ಟು ದಿನ ಹುಬ್ಬಳ್ಳಿ ಶಾಂತವಾಗಿತ್ತು. ಆದರೆ ಸಧ್ಯ ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಹಾಫ್ ಮರ್ಡರ್​, ಫುಲ್ ಮರ್ಡರ್​ಗಳು ಅಂದರೆ ಪಾತಕಿಗಳಿಗೆ ನೀರು ಕುಡಿದಷ್ಟೇ ಸುಲಭವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಪಟದಾರಿ ಕೊಲೆ ಕೇಸ್ ಸೇರಿದಂತೆ ಕಳೆದ ವರ್ಷದಲ್ಲಿ ಏಳೆಂಟು ಜನರ ನೆತ್ತರು ಹರಿದಿದೆ. ಮೂರು ದಿನದ ಹಿಂದೆ ನಡೆದ ಸಂತೋಷ್ ಮುರಗೋಡ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಇದು ಜನಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಶಾಸಕ ಪ್ರಸಾದ ಅಬ್ಬಯ್ಯ ನೇತ್ರತ್ವದಲ್ಲಿ, ಕೊಲೆಯಾದ ಮುರಗೋಡ ಅವರ ಮೃತದೇಹವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಲಾಗಿತ್ತು. ಈ ಪ್ರಕರಣ ಸೇರಿದಂತೆ ಪಟದಾರಿ ಕೇಸ್​ನಲ್ಲಿ ಮಹಾನಗರದ ಪೊಲೀಸರ ಕೈವಾಡ ಇದೆ ಅನ್ನುವ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಪೊಲೀಸ್ ಆಯುಕ್ತ ಲಾಭು ರಾಮ್ ತನಿಖೆ ನಡೆಸಲು ಆದೇಶ ನೀಡಿದ್ದಾರೆ. ಒಂದು ಕಡೆ ಮೇಲಿಂದ ಮೇಲೆ ನಡೆಯುತ್ತಿರುವ ಸರಣಿ ಹತ್ಯೆಗಳು. ಮತ್ತೊಂದು ಕಡೆ ಕೆಲವು ಕೊಲೆ ಪ್ರಕರಣಗಳಲ್ಲಿ ಖಾಲಿ ಹೆಜ್ಜೆ ಗುರುತು ಜನಸಾಮಾನ್ಯರಲ್ಲಿ ನಿದ್ದೆ ಗೆಡಿಸಿದೆ.

ಇದನ್ನೂ ಓದಿ:75ರ ವಯಸ್ಸಿನಲ್ಲೂ ಮತ್ತೊಂದು ಮದ್ವೆಯಾದ ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮೃತ ಪತ್ನಿಯ ಅಕ್ಕನನ್ನೇ ಕೈಹಿಡಿದ

ಈ ಹತ್ಯಾಕಾಂಡಗಳು ಯಾವುದು ಕೂಡ ನಿಗೂಢವಾಗಿ ಉಳಿದಿಲ್ಲ. ಕೊಲೆಯಾದ ತಕ್ಷಣವೇ ಪೊಲೀಸರ ಹದ್ದಿನ ಕಣ್ಣಿನಿಂದಾ ಪಾತಕಿಗಳು ತಪ್ಪಿಸಿಕೊಂಡಿಲ್ಲ. ಹತ್ಯೆಯ ಬಳಿಕ ಕೆಲವೇ ದಿನಗಳಲ್ಲಿಯೇ ಪ್ರಕರಣಗಳನ್ನು ಖಾಕಿ ಭೇದಿಸಿದೆ. ಆದರೆ ಯಾಕೆ ಹೀಗೆ ಶಾಂತಿಯಿಂದ ಕೂಡಿದ್ದ ಸಿಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿರುವ ನೆತ್ತರು ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ವರದಿ:ರಹಮತ್ ಕಂಚಗಾರ್ ಟಿವಿ9 ಹುಬ್ಬಳ್ಳಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?