AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ

Bellary Jeans: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ ಎಂದು ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ ಎಂದಿದ್ದಾರೆ.

Pralhad Joshi: ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸುಳ್ಳು ಹೇಳುವ ಚಾಳಿ ಕಾಂಗ್ರೆಸ್ಸಿಗರ “ಜೀನ್ಸ್”ನಲ್ಲೇ ಇದೆ! ಜೋಶಿ ವಾಗ್ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 26, 2023 | 1:48 PM

Share

ಲೋಡ್​ ಶೆಡ್ಡಿಂಗ್​ನಿಂದಾಗಿ ಬಳ್ಳಾರಿ ಜೀನ್ಸ್​ ಉದ್ಯಮ (Bellary Jeans) ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ. “ಸುಳ್ಳು ಹೇಳುವುದು (lying) ಕಾಂಗ್ರೆಸಿಗರ ಜೀನ್ಸ್ (Congress Gene) ನಲ್ಲೇ ಇದೆ ಎಂಬಂತೆ, ದೂರದೃಷ್ಟಿಯ ಯೋಚನೆ ಇಲ್ಲದೆ ಅರ್ಥಹೀನ ಯೋಜನೆಗಳ ಘೋಷಿಸಿ, ಅದನ್ನು ಪೂರೈಸಲಾಗದೆ ಇಂದು ಇಡೀ ಕರ್ನಾಟಕವನ್ನು ದಿವಾಳಿ ಮಾಡುವತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ (Karnataka congress) ಸಾಗುತ್ತಿದೆ.

ಜೀನ್ಸ್ ಉದ್ಯಮವನ್ನೇ ಅವಲಂಬಿಸಿರುವ ರಾಜ್ಯದ 80,000ಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಕೊರತೆಯಿಂದ ಬಳಲುತ್ತಿದೆ. ಬಿಟ್ಟಿ ಭಾಗ್ಯ ಪೂರೈಸಲಾಗದೆ ವಿದ್ಯುತ್ ಕಡಿತಗೊಳಿಸಿದ ಪರಿಣಾಮ ರಾಜ್ಯದ ಜನರ ಜೀವನವನ್ನೇ ನಾಶ ಮಾಡುತ್ತಿದೆ.

ಬಳ್ಳಾರಿಯಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿಯನ್ನು ಬಿಟ್ಟು ಹೋದರು. ಜೀನ್ಸ್ ಉದ್ಯಮಕ್ಕೆ ನೆರವು ನೀಡುವ ಭರವಸೆ ನೀಡಿದ ರಾಹುಲ್ ಗಾಂಧಿ, ಈ ಉದ್ಯಮವನ್ನೇ ರಾಜ್ಯ ಕಾಂಗ್ರೆಸ್ಸಿಗರ ಮೂಲಕ ಸರ್ವನಾಶ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಟ್ಟಿ ಭಾಗ್ಯ ಘೋಷಿಸಿದ ಕಾಂಗ್ರೆಸ್, ಪಂಜಾಬ್ ರಾಜ್ಯದ ಸ್ಥಿತಿಯನ್ನೇ ರಾಜ್ಯಕ್ಕೂ ತರುವ ಸಂಕಲ್ಪ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿರುವ ಪ್ರಹ್ಲಾದ್​ ಜೋಶಿಯವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Also Read: ಕಾಂಗ್ರೆಸ್ ಸರ್ಕಾರ ಮತ್ತೊಂದು ಗ್ಯಾರಂಟಿ ಈಡೇರಿಸಲೇ ಬೇಕಾಗಿದೆ! ಅದಕ್ಕೆ ಬೇಕಿದೆ ಜಸ್ಟ್​​ 5 ಸಾವಿರ ಕೋಟಿ! ಇದನ್ನ ಸ್ವತಃ ರಾಹುಲ್​ ಗಾಂಧಿಯೇ ಘೋಷಿಸಿದ್ದರು!

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:47 pm, Thu, 26 October 23

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ