ಹುಬ್ಬಳ್ಳಿ: ಯಾವುದೇ ಧರ್ಮದವರಿಗೂ ಆತಂಕ ಬೇಡ. ಬಡತನ, ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು. ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶ ಇಲ್ಲ. ಹೀಗಾಗಿ ರಾಜ್ಯದಲ್ಲಿ ಕಾನೂನು ರಚಿಸಬೇಕೆಂದು ಬಯಸುತ್ತಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆ ಜತೆ ಚರ್ಚೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಮತಾಂತರದಿಂದ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಮಂಡನೆ ವಿಚಾರವಾಗಿ ಮಾತನಾಡಿದ ಅವರು, ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮೂದಾಯ ನಾಯಕರಿಗೆ ನಾನು ಹೇಳಿದ್ದೆನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನವನ್ನು ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಆಸೆ, ಆಮೀಷ ಒಡ್ಡಿ ಮತಾಂತರ ಆಗೋದಕ್ಕೆ ಅವಕಾಶವಿಲ್ಲ. ಹೀಗಾಗಿ ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮೀಟಿ ಮಾಡಿದ್ದೆವೆ. ಆ ವರದಿ ನಮ್ಮ ಕ್ಯಾಬಿನೆಟ್ಗೆ ಬರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ಅಲ್ಲಿಂದ ಅಸೆಂಬ್ಲಿಗೆ ಬಂದರೆ ಬೆಳಗಾವಿಯಲ್ಲೆ ಚರ್ಚೆ ಮಾಡುತ್ತೇವೆ. ಯಾವ ಧರ್ಮಕ್ಕೂ ಆತಂಕವಾಗಬಾರದು. ಮತಾಂತರ ಎನ್ನುವುದು ಸಮಾಜಕ್ಕೆ ಒಳ್ಳೆಯದಲ್ಲ ಎಂದು ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಅವರು, 2 ವರ್ಷದ ನಂತರ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಅಧಿವೇಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯಾಗಬೇಕು. ಹೀಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗಳು ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್ಗಳನ್ನು ಹೆಚ್ಚಿಗೆ ಮಾಡುತ್ತೆವೆ: ಸಿಎಂ ಬಸವರಾಜ ಬೊಮ್ಮಾಯಿ
ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್ಗಳನ್ನು ಹೆಚ್ಚಿಗೆ ಮಾಡುತ್ತೆವೆ. ಈಗಾಗಲೇ ಒಂದು ಜಿನೊಮಿಕ್ ಸ್ವಿಕ್ವೇನ್ಸ್ ಲ್ಯಾಬ್ ಮಾಡಿದ್ದೇವೆ. ಅದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಗೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳಿಕ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಅದರ ವಿರುದ್ದ ಕಾರ್ಯಚರಣೆ ಕೂಡಾ ಮಾಡಿದ್ದಾರೆ. ಈ ರೀತಿ ಅಲ್ಲಲ್ಲಿ ಘಟನೆಗಳು ಆಗುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:
ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ಬೊಮ್ಮಾಯಿ ಮತ್ತು ಯಡಿಯೂರಪ್ಪ ಜೊತೆಯಾಗಿ ಹೋದರು ದೇವಸ್ಥಾನಕ್ಕೆ, ಪರಿಷತ್ ಚುನಾವಣೆ ಫಲಿತಾಂಶದ ಆತಂಕವೇ?
Published On - 11:33 am, Sun, 12 December 21